Homeಕರ್ನಾಟಕಅಕ್ಕಿ ಕೊಡಲು ಛತ್ತೀಸಗಢ್ ಸರ್ಕಾರ ಒಪ್ಪಿಗೆ ಸೂಚಿಸಿದೆ: ಡಾ.ಜಿ ಪರಮೇಶ್ವರ್

ಅಕ್ಕಿ ಕೊಡಲು ಛತ್ತೀಸಗಢ್ ಸರ್ಕಾರ ಒಪ್ಪಿಗೆ ಸೂಚಿಸಿದೆ: ಡಾ.ಜಿ ಪರಮೇಶ್ವರ್

- Advertisement -
- Advertisement -

ಅನ್ನ ಭಾಗ್ಯ ಯೋಜನೆಗೆ ಬೇಕಾದ 1.50 ಲಕ್ಷ ಟನ್‌ ಅಕ್ಕಿ ಕೊಡಲು ಛತ್ತೀಸಗಢ್ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

“ಅನ್ನ ಭಾಗ್ಯ ಯೋಜನೆಗೆ ಅಗತ್ಯದಷ್ಟು ಅಕ್ಕಿ ಯಾವುದೇ ಒಂದು ರಾಜ್ಯದಿಂದ ಸಿಗುತ್ತಿಲ್ಲ. ಹಲವು ರಾಜ್ಯಗಳನ್ನು ಸಂಪರ್ಕಿಸಲಾಗಿದ್ದು, ಎಲ್ಲಿ ಅಕ್ಕಿ ಸಿಕ್ಕರೂ ಖರೀದಿಸಲಾಗುವುದು. ನಮ್ಮ ರೈತರ ಬಳಿ ಇದ್ದರೂ ಖರೀದಿ ಮಾಡಲಾಗುವುದು. ಈಗ ಛತ್ತೀಸಗಢ್ ಸರ್ಕಾರ ಅಕ್ಕಿ ಕೊಡಲು ಒಪ್ಪಿಗೆ ಸೂಚಿಸಿದೆ. ಅಲ್ಲಿಂದ ಸಾಗಣೆ ಮಾಡಲು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದರು.

“ಅನ್ನ ಭಾಗ್ಯ ಯೋಜನೆಯಲ್ಲಿ ಅಕ್ಕಿ ಜತೆಗೆ ಜೋಳ, ರಾಗಿ ಸಹ ಕೊಡಲಾಗುವುದು. ಬಡವರ ಯೋಜನೆ ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಅನ್ನ ಭಾಗ್ಯ ಯೋಜನೆ ನಿಲ್ಲಿಸುವುದಿಲ್ಲ” ಎಂದು ಹೇಳಿದರು.

ಇದೇ ವೇಳೆ ಅಕ್ಕಿ ಕೊಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, “ಭಾರತ ಆಹಾರ ನಿಗಮದವರು(ಎಫ್‌ಸಿಐ) ಮೊದಲು ಅಕ್ಕಿ ಕೊಡಲು ಒಪ್ಪಿಕೊಂಡು ನಂತರ ನಿರಾಕರಿಸಿದರು. ಎಫ್‌ಸಿಐಗೆ ಈ ರೀತಿ ಸೂಚನೆ ಕೊಟ್ಟವರು ಯಾರು?” ಎಂಬುದು ರಾಜ್ಯದ ಜನತೆಗೂ ತಿಳಿಯಲಿ ಎಂದರು.

“ವಿದ್ಯುತ್‌ ದರ ಹೆಚ್ಚಳ ಬಗ್ಗೆ ಪ್ರತಿಕ್ರಿಯಿಸಿ, ಹಿಂದಿನ ಬಿಜೆಪಿ ಸರ್ಕಾರ ವಿದ್ಯುತ್‌ ದರ ಹೆಚ್ಚಳ ಮಾಡಿದೆ. ಇದರಿಂದ ಕೈಗಾರಿಕೆಗಳ ಮೇಲೂ ಹೆಚ್ಚು ಹೊರೆ ಬಿದ್ದಿದೆ. ಈ ಬಗ್ಗೆ ಸರ್ಕಾರ ಯೋಚಿಸುತ್ತಿದ್ದು, ಉದ್ಯಮಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ” ಎಂದು ತಿಳಿಸಿದರು.

ಜೊತೆಗೆ ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಪಂಜಾಬ್ ಸಿಎಂ ಭಗವಂತ್ ಮಾನ್ ನೇತೃತ್ವದ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಕರ್ನಾಟಕ ಆಪ್ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಪತ್ರ ಬರೆದಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲು ಅಗತ್ಯವಿರುವ ಹೆಚ್ಚುವರಿ ಅಕ್ಕಿಯನ್ನು ನೀಡಲು ನಿರಾಕರಿಸುವುದು ಆಶ್ಚರ್ಯ ಮತ್ತು ನೋವು ತಂದಿದೆ. ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ನಮ್ಮ ದೇಶದ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಜಾರಿಯಾಗುವ ಉಪಕ್ರಮಗಳನ್ನು ಎಲ್ಲಾ ಪಕ್ಷಗಳು ಬೆಂಬಲಿಸಬೇಕೆಂಬುದನ್ನು ಆಪ್ ಬಲವಾಗಿ ನಂಬುತ್ತದೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ; ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಮುಂದಾದ ಪಂಜಾಬ್ ಸಿಎಂ ಭಗವಂತ್ ಮಾನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಅಪಹರಣ ಪ್ರತ್ಯೇಕ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ...