ಭದ್ರತಾ ಪಡೆಗಳ ವಾಹನವನ್ನು ಗುರಿಯಾಗಿಸಿ ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲರು ನಡೆಸಿದ ಪ್ರಬಲ ಐಇಡಿ ಸ್ಫೋಟಕ್ಕೆ ಎಂಟು ದಾಂತೇವಾಡ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಜವಾನರು ಮತ್ತು ಒಬ್ಬ ಚಾಲಕ ಸೇರಿದಂತೆ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು TNIE ಸೋಮವಾರ ವರದಿ ಮಾಡಿದೆ. ಛತ್ತೀಸ್‌ಗಢ
ದಾಂತೇವಾಡ, ನಾರಾಯಣಪುರ ಮತ್ತು ಬಿಜಾಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಯೋಧರು ವಾಪಸಾಗುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ವರದಿ ಉಲ್ಲೇಖಿಸಿದೆ. ಛತ್ತೀಸ್‌ಗಢ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ವಾಹನವು ಸ್ಫೋಟಕ ಸಾಧನಕ್ಕೆ ತಾಗಿದ್ದು, ಇದರ ಪರಿಣಾಮವಾಗಿ ವಾಹನದಲ್ಲಿದ್ದ ಎಲ್ಲಾ ಒಂಬತ್ತು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಜಿಲ್ಲೆಯ ಇನ್ಸ್‌ಪೆಕ್ಟರ್ ಜನರಲ್ ಹೇಳಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಭದ್ರತಾ ಸಿಬ್ಬಂದಿ ಮೇಲೆ ನಕ್ಸಲೀಯರು ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏಪ್ರಿಲ್ 26, 2023 ರಂದು, ನೆರೆಯ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ವಾಹನವನ್ನು ಗುರಿಯಾಗಿಸಿ ನಕ್ಸಲರು ಸ್ಫೋಟಿಸಿದ ಪರಿಣಾಮ ಹತ್ತು ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ಚಾಲಕ ಸಾವನ್ನಪ್ಪಿದ್ದರು.
ಈ ಮಧ್ಯೆ, ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದ್ದು, ಮತ್ತೊಬ್ಬರ ಮೃತದೇಹ ಪತ್ತೆಯಾಗಿದೆ. ಶನಿವಾರ ಸಂಜೆ ನಡೆದ ಎನ್‌ಕೌಂಟರ್, ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮಾದ್‌ನ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ.
ಇದನ್ನೂ ಓದಿ: ಲಿಂಗ ಸಮಾನತೆಗೆ ಒತ್ತು : ಪೊಲೀಸ್ ಪಾಸಿಂಗ್-ಔಟ್ ಪ್ರತಿಜ್ಞೆ ತಿದ್ದಿದ ಕೇರಳ ಸರ್ಕಾರ
ಲಿಂಗ ಸಮಾನತೆಗೆ ಒತ್ತು : ಪೊಲೀಸ್ ಪಾಸಿಂಗ್-ಔಟ್ ಪ್ರತಿಜ್ಞೆ ಪರಿಷ್ಕರಿಸಿದ ಕೇರಳ ಸರ್ಕಾರ


