Homeಮುಖಪುಟಛತ್ತೀಸ್‌ಗಢ | ನಕ್ಸಲ್‌ರಿಂದ ಐಇಡಿ ಸ್ಫೋಟ; ಎಂಟು ಡಿಆರ್‌ಜಿ ಜವಾನರು, ಚಾಲಕ ಸಾವು

ಛತ್ತೀಸ್‌ಗಢ | ನಕ್ಸಲ್‌ರಿಂದ ಐಇಡಿ ಸ್ಫೋಟ; ಎಂಟು ಡಿಆರ್‌ಜಿ ಜವಾನರು, ಚಾಲಕ ಸಾವು

- Advertisement -
- Advertisement -

ಭದ್ರತಾ ಪಡೆಗಳ ವಾಹನವನ್ನು ಗುರಿಯಾಗಿಸಿ ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲರು ನಡೆಸಿದ ಪ್ರಬಲ ಐಇಡಿ ಸ್ಫೋಟಕ್ಕೆ ಎಂಟು ದಾಂತೇವಾಡ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಜವಾನರು ಮತ್ತು ಒಬ್ಬ ಚಾಲಕ ಸೇರಿದಂತೆ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು TNIE ಸೋಮವಾರ ವರದಿ ಮಾಡಿದೆ. ಛತ್ತೀಸ್‌ಗಢ

ದಾಂತೇವಾಡ, ನಾರಾಯಣಪುರ ಮತ್ತು ಬಿಜಾಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಯೋಧರು ವಾಪಸಾಗುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ವರದಿ ಉಲ್ಲೇಖಿಸಿದೆ. ಛತ್ತೀಸ್‌ಗಢ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಾಹನವು ಸ್ಫೋಟಕ ಸಾಧನಕ್ಕೆ ತಾಗಿದ್ದು, ಇದರ ಪರಿಣಾಮವಾಗಿ ವಾಹನದಲ್ಲಿದ್ದ ಎಲ್ಲಾ ಒಂಬತ್ತು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಜಿಲ್ಲೆಯ ಇನ್ಸ್‌ಪೆಕ್ಟರ್‌ ಜನರಲ್ ಹೇಳಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಭದ್ರತಾ ಸಿಬ್ಬಂದಿ ಮೇಲೆ ನಕ್ಸಲೀಯರು ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಪ್ರಿಲ್ 26, 2023 ರಂದು, ನೆರೆಯ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ವಾಹನವನ್ನು ಗುರಿಯಾಗಿಸಿ ನಕ್ಸಲರು ಸ್ಫೋಟಿಸಿದ ಪರಿಣಾಮ ಹತ್ತು ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ಚಾಲಕ ಸಾವನ್ನಪ್ಪಿದ್ದರು.

ಈ ಮಧ್ಯೆ, ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದ್ದು, ಮತ್ತೊಬ್ಬರ ಮೃತದೇಹ ಪತ್ತೆಯಾಗಿದೆ. ಶನಿವಾರ ಸಂಜೆ ನಡೆದ ಎನ್‌ಕೌಂಟರ್, ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮಾದ್‌ನ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ.

ಇದನ್ನೂ ಓದಿ: ಲಿಂಗ ಸಮಾನತೆಗೆ ಒತ್ತು : ಪೊಲೀಸ್ ಪಾಸಿಂಗ್-ಔಟ್ ಪ್ರತಿಜ್ಞೆ ತಿದ್ದಿದ ಕೇರಳ ಸರ್ಕಾರ

ಲಿಂಗ ಸಮಾನತೆಗೆ ಒತ್ತು : ಪೊಲೀಸ್ ಪಾಸಿಂಗ್-ಔಟ್ ಪ್ರತಿಜ್ಞೆ ಪರಿಷ್ಕರಿಸಿದ ಕೇರಳ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...