Homeಮುಖಪುಟಛತ್ತೀಸ್‌ಗಢ | ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ ಪತ್ರಕರ್ತ ಶವವಾಗಿ ಪತ್ತೆ

ಛತ್ತೀಸ್‌ಗಢ | ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ ಪತ್ರಕರ್ತ ಶವವಾಗಿ ಪತ್ತೆ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ನಿರ್ಮಾಣ ಯೋಜನೆಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಸ್ವತಂತ್ರ ಪತ್ರಕರ್ತರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ, ಕೊಲೆ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು ಮೂವರನ್ನು ಬಂಧಿಸಲಾಗಿದೆ ಎಂದಿದೆ.

ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವಿನ ಸಂಘರ್ಷದ ಕುರಿತು ವರದಿ ಮಾಡಿ ಜನಮಣ್ಣನೆ ಗಳಿಸಿದ್ದ ಪತ್ರಕರ್ತ ಮುಕೇಶ್ ಚಂದ್ರಕರ್ ಅವರು, ರಸ್ತೆ ನಿರ್ಮಾಣ ಯೋಜನೆಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ಇತ್ತೀಚೆಗೆ ವರದಿ ಮಾಡಿದ್ದರು. ಈ ಬೆನ್ನಲ್ಲೇ ರಸ್ತೆ ನಿರ್ಮಾಣದ ಗುತ್ತಿಗೆದಾರನ ಜಮೀನಿನ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮುಕೇಶ್ ಅವರ ಶವ ಪತ್ತೆಯಾಗಿದೆ.

ಹೆದ್ದಾರಿ ಯೋಜನೆಯ ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಬಳಿಕ ಮುಕೇಶ್ ಅವರಿಗೆ ಜೀವ ಬೆದರಿಕೆ ಇತ್ತು ಎಂದು ಅವರ ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

ಕಳೆದ ಬುಧವಾರ (ಜ.1) 36 ವರ್ಷದ ಮುಕೇಶ್ ಚಂದ್ರಕರ್ ಅವರು ನಾಪತ್ತೆಯಾಗಿದ್ದರು. ಈ ಸಂಬಂಧ ಅವರ ಸಹೋದರ ಟಿವಿ ಪತ್ರಕರ್ತ ಯುಕೇಶ್ ಚಂದ್ರಕರ್ ಅಂದೇ ಸಂಜೆ ದೂರು ದಾಖಲಿಸಿದ್ದರು. ಎರಡು ದಿನಗಳ ಬಳಿಕ ಶುಕ್ರವಾರ (ಜ.3) ಸಂಜೆ 6 ಗಂಟೆಯ ಹೊತ್ತಿಗೆ ಮುಕೇಶ್ ಅವರ ಶವ ಪತ್ತೆಯಾಗಿದೆ.

ಮುಕೇಶ್ ಅವರು ಬಿಜಾಪುರ ಜಿಲ್ಲೆಯ ಗಂಗಲೂರು-ನೆಲಸನಾರ್ ಗ್ರಾಮಗಳ ನಡುವಿನ ರಸ್ತೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದ ಬಗ್ಗೆ ವರದಿ ಮಾಡಿದ್ದರು. ವರದಿ ಬಳಿಕ ಭ್ರಷ್ಟಾಚಾರದ ಕುರಿತು ತನಿಖೆ ಆದೇಶಿಸಲಾಗಿತ್ತು. ಆ ಬಳಿಕ ರಸ್ತೆ ನಿರ್ಮಾಣ ಮಾಡುತ್ತಿದ್ದ ಗುತ್ತಿಗೆದಾರ ಸುರೇಶ್ ಚಂದ್ರಕರ್‌ ಮತ್ತು ಅವರ ಇಬ್ಬರು ಸಹೋದರರಿಂದ ಮುಕೇಶ್ ಅವರಿಗೆ ಬೆದರಿಕೆ ಇತ್ತು ಎಂದು ಸಹೋದರ ಯುಕೇಶ್ ನೀಡಿದ ದೂರಿನಲ್ಲಿ ಆರೋಪಿಸಿದ್ದರು.

ಶುಕ್ರವಾರ ಸಂಜೆ ಬಿಜಾಪುರ ಜಿಲ್ಲೆಯ ಚಟ್ಟನಪಾರ ಬಸ್ತಿಯ ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರ ಜಮೀನಿನ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ರಕರ್ತ ಮುಕೇಶ್ ಅವರ ಶವ ಪತ್ತೆಯಾಗಿದೆ. ಮುಕೇಶ್ ಶವ ಪತ್ತೆಯಾದ ಜಾಗದಲ್ಲಿ ಕಾರ್ಮಿಕರ ವಸತಿಗೃಹಗಳಿವೆ ಮತ್ತು ಬ್ಯಾಡ್ಮಿಂಟನ್ ಆಡಲು ಬಳಸಲಾಗುತ್ತಿತ್ತು ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ತಿಳಿಸಿದ್ದಾರೆ.

ಕೊಲೆ ಆರೋಪದ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಯಾವುದೇ ಮಾಹಿತಿ ನೀಡಿಲ್ಲ ತನಿಖೆ ಪ್ರಾಥಮಿಕ ಹಂತದಲ್ಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಡಿಜಿಟಲ್ ದತ್ತಾಂಶ ರಕ್ಷಣೆ : ಕರಡು ನಿಯಮಾವಳಿ ಪ್ರಕಟಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...