Homeಮುಖಪುಟಛತ್ತೀಸ್‌ಗಢ| ಬಜರಂಗದಳ ಗುಂಪಿನ ಪ್ರತಿಭಟನೆ ಬಳಿಕ ಕೇರಳ ಸನ್ಯಾಸಿನಿಯರ ಬಂಧನ

ಛತ್ತೀಸ್‌ಗಢ| ಬಜರಂಗದಳ ಗುಂಪಿನ ಪ್ರತಿಭಟನೆ ಬಳಿಕ ಕೇರಳ ಸನ್ಯಾಸಿನಿಯರ ಬಂಧನ

- Advertisement -
- Advertisement -

ಜುಲೈ 26 ರಂದು (ಶನಿವಾರ) ಛತ್ತೀಸ್‌ಗಢದ ದುರ್ಗ್ ರೈಲ್ವೆ ನಿಲ್ದಾಣದಲ್ಲಿ ಅಸ್ಸಿಸಿ ಸಿಸ್ಟರ್ಸ್ ಆಫ್ ಮೇರಿ ಇಮ್ಯಾಕ್ಯುಲೇಟ್ (ಎಎಸ್‌ಎಂಐ) ನ ಇಬ್ಬರು ಕ್ಯಾಥೋಲಿಕ್ ಸನ್ಯಾಸಿನಿಯರನ್ನು, ನಾರಾಯಣಪುರ ಜಿಲ್ಲೆಯ 18 ರಿಂದ 19 ವರ್ಷದೊಳಗಿನ ಮೂವರು ಯುವತಿಯರೊಂದಿಗೆ ಪ್ರಯಾಣಿಸುತ್ತಿದ್ದಾಗ ಬಂಧಿಸಲಾಯಿತು.

ಮತಾಂತರ ಮಾಡುತ್ತಿದ್ದಾರೆ ಎಂಬ ಬಜರಂಗದಳದ ಪ್ರತಿಭಟನೆಯ ಬಳಿಕ ಸನ್ಯಾಸಿನಿಯರ ಮೇಲೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌) ಮತ್ತು ಛತ್ತೀಸ್‌ಗಢ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ, 1968 ರ ಅಡಿಯಲ್ಲಿ ಮಾನವ ಕಳ್ಳಸಾಗಣೆ ಮತ್ತು ಧಾರ್ಮಿಕ ಮತಾಂತರದ ಆರೋಪ ಹೊರಿಸಲಾಯಿತು.

ನಾರಾಯಣಪುರದ ನಿವಾಸಿ ಸುಖ್ಮಾನ್ ಮಾಂಡವಿ, ಪ್ರೀತಿ ಮೇರಿ ಮತ್ತು ವಂದನಾ ಫ್ರಾನ್ಸಿಸ್ ಎಂಬ ಇಬ್ಬರು ಸನ್ಯಾಸಿನಿಯರನ್ನು ಬಂಧಿಸಲಾಯಿತು. ಸನ್ಯಾಸಿನಿಯರು ಮೂಲತಃ ಕೇರಳದವರು.

ರಾಯ್‌ಪುರ ಆರ್ಚ್‌ಡಯೋಸಿಸ್‌ನ ವಿಕಾರ್ ಜನರಲ್ ಫಾದರ್ ಸೆಬಾಸ್ಟಿಯನ್ ಪೂಮಟ್ಟಮ್ ಅವರ ಪ್ರಕಾರ, ಸನ್ಯಾಸಿನಿಯರು ಮಹಿಳೆಯರನ್ನು ಮನೆಕೆಲಸಕ್ಕಾಗಿ ಆಗ್ರಾದ ಕಾನ್ವೆಂಟ್‌ಗಳಲ್ಲಿ ಇರಿಸಲು ಅವರೊಂದಿಗೆ ಹೋಗುತ್ತಿದ್ದರು. “ಈ ಮಹಿಳೆಯರಿಗೆ ರೂ. 8,000 ರಿಂದ ರೂ. 10,000 ರವರೆಗಿನ ಮಾಸಿಕ ವೇತನದೊಂದಿಗೆ ಅಡುಗೆ ಸಹಾಯಕಿಯರಾಗಿ ಕೆಲಸ ನೀಡಲಾಗುತ್ತಿತ್ತು. ಅವರ ಪೋಷಕರ ಒಪ್ಪಿಗೆ ಪತ್ರಗಳನ್ನು ಅವರು ಹೊಂದಿದ್ದರು. ಎಲ್ಲರೂ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರು” ಎಂದು ಅವರು ತಿಳಿಸಿದ್ದಾರೆ ಎಂದು ‘ಟಿಎನ್‌ಎಂ’ ವರದಿ ಮಾಡಿದೆ.

ರೈಲ್ವೆ ಟಿಕೆಟ್ ಪರೀಕ್ಷಕರು (ಟಿಟಿಇ) ಗುಂಪನ್ನು ಪ್ರಶ್ನಿಸಿದ ನಂತರ ಪರಿಸ್ಥಿತಿ ಉಲ್ಬಣಗೊಂಡಿತು. “ಹುಡುಗಿಯರು ಮತ್ತು ಸನ್ಯಾಸಿನಿಯರು ಟ್ರೈನ್‌ಗಾಗಿ ಕಾಯುತ್ತಿದ್ದ ಫ್ಲಾಟ್‌ಮಾರ್ಮ್‌ಗೆ ಪ್ರವೇಶಿಸಿದರು. ಟಿಟಿಇ ಅವರ ಟಿಕೆಟ್‌ಗಳ ಬಗ್ಗೆ ಕೇಳಿದರು, ಅವರು ಸನ್ಯಾಸಿನಿಯರ ಬಳಿ ಟಿಕೆಟ್‌ಗಳಿವೆ ಎಂದು ಹೇಳಿದರು. ಶೀಘ್ರದಲ್ಲೇ, ಟಿಟಿಇ ಸ್ಥಳೀಯ ಬಜರಂಗದಳ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಅವರು ಕೆಲವೇ ನಿಮಿಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿಲ್ದಾಣಕ್ಕೆ ಬಂದರು” ಎಂದು ಫಾದರ್ ಪೂಮಟ್ಟಮ್ ಹೇಳಿದರು.

ಕೂಡಲೇ ರೈಲ್ವೆ ಪೊಲೀಸರು, ಸನ್ಯಾಸಿನಿಯರು, ಅವರ ಜೊತೆಗಿದ್ದ ಪುರುಷ ಮತ್ತು ಮೂವರು ಯುವತಿಯರನ್ನು ಬಂಧಿಸಿದರು. ಬಜರಂಗದಳ ಸದಸ್ಯರು ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿ, ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು. ನಂತರ ಮಹಿಳೆಯರನ್ನು ಸರ್ಕಾರ ನಡೆಸುವ ಆಶ್ರಯ ಗೃಹಕ್ಕೆ ಸ್ಥಳಾಂತರಿಸಲಾಯಿತು. ಆದರೆ, ಸನ್ಯಾಸಿನಿಯರು ಮತ್ತು ಪುರುಷನನ್ನು ಆಗಸ್ಟ್ 8 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು.

ದೆಹಲಿಯ ಸನ್ಯಾಸಿನಿ ಸಿಸ್ಟರ್ ಆಶಾ ಪಾಲ್, “ಬಂಧಿತ ಸನ್ಯಾಸಿನಿಗಳನ್ನು ಭೇಟಿ ಮಾಡಲು ಯಾವುದೇ ಚರ್ಚ್ ಪ್ರತಿನಿಧಿಗಳಿಗೆ ಅವಕಾಶ ನೀಡಲಾಗಿಲ್ಲ. ಯುವತಿಯರು ತಮ್ಮ ಹೇಳಿಕೆಗಳನ್ನು ಬದಲಾಯಿಸುವಂತೆ ಒತ್ತಾಯಿಸಲಾಗಿದೆ ಎಂದು ನಂಬಲು ನಮಗೆ ಕಾರಣವಿದೆ. ಅವರ ಇಚ್ಛೆಗೆ ವಿರುದ್ಧವಾಗಿ ಕರೆದೊಯ್ಯಲಾಗುತ್ತಿದೆ ಎಂದು ಹೇಳಿಕೊಳ್ಳಲು ಅವರನ್ನು ಒತ್ತಾಯಿಸಲಾಗಿದೆ ಎಂದು ವರದಿಯಾಗಿದೆ” ಎಂದು ಅವರು ಹೇಳಿದರು.

“ಪೋಷಕರ ಒಪ್ಪಿಗೆ ಪತ್ರ, ಗುರುತಿನ ಚೀಟಿ ಮತ್ತು ಯಾವುದೇ ಬಲವಂತ ಅಥವಾ ಮತಾಂತರ ಒಳಗೊಂಡಿಲ್ಲ ಎಂದು ಸಾಬೀತುಪಡಿಸುವ ದಾಖಲೆಗಳ ಎಲ್ಲ ಪುರಾವೆಗಳು ನಮ್ಮಲ್ಲಿವೆ” ಎಂದು ಸಿಸ್ಟರ್ ಆಶಾ ಪಾಲ್ ಹೇಳಿದರು.

ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ವ್ಯಕ್ತಿಗಳ ಕಳ್ಳಸಾಗಣೆ) ದ ಸೆಕ್ಷನ್ 143 ಮತ್ತು ಛತ್ತೀಸ್‌ಗಢ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ (1968) ದ ಸೆಕ್ಷನ್ 4 ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಿದ್ದಾರೆ.

ಕ್ರಿಶ್ಚಿಯನ್ ಸಮುದಾಯದ ಸದಸ್ಯರು ಸನ್ಯಾಸಿನಿಯರ ಈ ಬಂಧನಗಳನ್ನು ಬಲವಾಗಿ ಖಂಡಿಸಿದ್ದಾರೆ. ಇದು ಬಲಪಂಥೀಯ ಗುಂಪುಗಳಿಂದ ಹೆಚ್ಚುತ್ತಿರುವ ಕಿರುಕುಳ ಮತ್ತು ಸುಳ್ಳು ಆರೋಪಗಳ ಪ್ರವೃತ್ತಿಯ ಭಾಗವಾಗಿದೆ ಎಂದು ಕರೆದಿದ್ದಾರೆ. “ಸನ್ಯಾಸಿನಿಯರನ್ನು ಕಪೋಲಕಲ್ಪಿತ ಆರೋಪಗಳ ಮೇಲೆ ಬಂಧಿಸಲಾಗಿದೆ. ಇದು ಮತ್ತೊಂದು ಉದಾಹರಣೆಯಾಗಿದೆ” ಎಂದು ಅನಾಮಧೇಯವಾಗಿ ಮಾತನಾಡಿದ ಪ್ರದೇಶದ ಪಾದ್ರಿಯೊಬ್ಬರು ಹೇಳಿದರು. ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಹೆಚ್ಚುತ್ತಿರುವ ದ್ವೇಷದ ಮಾದರಿಯನ್ನು ಅವರು ಮತ್ತಷ್ಟು ಆರೋಪಿಸಿದರು. “ಗುಂಪು ಹಿಂಸಾಚಾರ, ಪೊಲೀಸ್ ಪ್ರಕರಣಗಳು ಮತ್ತು ಚರ್ಚ್ ನಡೆಸುವ ಸಂಸ್ಥೆಗಳ ಮೇಲಿನ ದಾಳಿಗಳು ಆತಂಕಕಾರಿಯಾಗಿ ಆಗಾಗ್ಗೆ ಆಗುತ್ತಿವೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಗಳ ಮೌನ ಅಥವಾ ಜವಾಬ್ದಾರಿಯು ಅಂತಹ ಗುಂಪುಗಳನ್ನು ಧೈರ್ಯ ತುಂಬಿದೆ” ಎಂದು ಹೇಳಿದ್ದಾರೆ.

ಬಟಾಣಿ ಕದ್ದ ಆರೋಪ: ನಾಲ್ವರು ಬಾಲಕರನ್ನು ಕಟ್ಟಿ ಹಾಕಿ ಥಳಿಸಿ, ಮೆರವಣಿಗೆ ಮಾಡಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...