Homeದಲಿತ್ ಫೈಲ್ಸ್ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

- Advertisement -
- Advertisement -

ಭಿನ್ನ ಸಮುದಾಯದ ಬಾಲಕಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ದಲಿತ ಯುವಕನನ್ನು ಬಟ್ಟೆ ಬಿಚ್ಚಿ ಥಳಿಸಿದ ಘಟನೆ ಛತ್ತೀಸ್‌ಗಢದ ಶಕ್ತಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದಲ್ಲಿ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ ವರದಿ ಮಾಡಿದೆ. ಛತ್ತೀಸ್‌ಗಢ

ಇತರ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ 16 ವರ್ಷದ ಬಾಲಕಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ 21 ವರ್ಷದ ದಲಿತ ಯುವಕನ ಮೇಲೆ ಗುರುವಾರ ಹಲ್ಲೆ ನಡೆಸಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಹಲ್ಲೆಯ ವೀಡಿಯೊಗಳನ್ನು ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದರ ನಂತರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಮುದಾಯದ ಮುಖ್ಯಸ್ಥರನ್ನು ದೂರುದಾರರನ್ನಾಗಿ ನೇಮಿಸಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಶಕ್ತಿ ಪೊಲೀಸ್ ವರಿಷ್ಠಾಧಿಕಾರಿ ಅಂಕಿತಾ ಶರ್ಮಾ ಹೇಳಿದ್ದಾರೆ ಎಂದು ದಿ ಹಿಂದೂ ಉಲ್ಲೇಖಿಸಿದೆ. ಭಾರತೀಯ ನ್ಯಾಯ ಸಂಹಿತಾದ ಕೊಲೆ ಯತ್ನ ಸೆಕ್ಷನ್‌ ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ-1989 ಹಾಗೂ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಥಳಿತಕ್ಕೊಳಗಾದ ದಲಿತ ಯುವಕನ ವ್ಯಕ್ತಿಯ ಎಡ ಕಣ್ಣು ಮತ್ತು ದೇಹಕ್ಕೆ ಗಾಯಗಳಾಗಿದ್ದು, ರಾಯಗಢ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ಹೇಳಿದೆ. ಯುವಕನೂ ಬಾಲಕಿಯ ಮನೆಗೆ ಭೇಟಿ ನೀಡಿದ್ದಾಗ ಮನೆಯವರ ಕುಟುಂಬವು ಅವರನ್ನು ಬಂಧಿಸಿದೆ ಎಂದು ಆತನ ಸಂಬಂಧಿಕರು ತಿಳಿಸಿದ್ದಾರೆ.

ರಾತ್ರಿಯಿಡೀ ಯುವಕನನ್ನು ಬಂಧಿಸಿ ನೀರಿನ ಪೈಪ್‌ಗಳು, ಲಾಠಿ, ಪಾದರಕ್ಷೆಗಳು ಮತ್ತು ಸೂಜಿಗಳಿಂದ ಹಲ್ಲೆ ಮಾಡಲಾಯಿತು ಎಂದು ಸಂತ್ರಸ್ತ ಯುವಕನ ಸಹೋದರ ಹೇಳಿದ್ದಾರೆ.

“ನಾವು ಸತ್ನಾಮಿ ಸಮುದಾಯದವರು [ಛತ್ತೀಸ್‌ಗಢದ ಪರಿಶಿಷ್ಟ ಜಾತಿ ಗುಂಪು] ಮತ್ತು ಅವರು ಇತರ ಹಿಂದುಳಿದ ವರ್ಗಗಳಿಗೆ ಸೇರಿರುವ ಚಂದ್ರ ಸಮುದಾಯದವರು. ಆದ್ದರಿಂದ, ಅವರಿಬ್ಬರ ಪ್ರೇಮ ಸಂಬಂಧವನ್ನು ವಿರೋಧಿಸಿದರು. ನನ್ನ ಸಹೋದರನ ಮೇಲೂ ಜಾತಿ ನಿಂದನೆ ಮಾಡಲಾಗಿದ್ದು, ಅವರು ಅವನನ್ನು ವಿವಸ್ತ್ರಗೊಳಿಸಿ ನಂತರ ಚಿತ್ರೀಕರಿಸಿದರು.” ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ವೀಡಿಯೊ ತುಣುಕುಗಳಲ್ಲಿ ಒಂದರಲ್ಲಿ, ಯುವಕ ನೀರು ಕೇಳುತ್ತಿರುವುದನ್ನು ದಾಖಲಾಗಿದ್ದು, ಅವರ ವಿನಂತಿಯನ್ನು ಅವರು ನಿರಾಕರಿಸುತ್ತಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಒಬ್ಬ ವ್ಯಕ್ತಿ ಹಗ್ಗದಂತಹ ವಸ್ತುವಿನಿಂದ ಆತನನ್ನು ಥಳಿಸುತ್ತಿರುವುದು ಕೂಡಾ ದಾಖಲಾಗಿದ್ದು, ಇನ್ನೊಂದು ಕ್ಲಿಪ್‌ನಲ್ಲಿ ಸೂಜಿಯಿಂದ ಚುಚ್ಚಲಾಗಿದೆ ಎಂದು ಹೇಳುವುದನ್ನು ಕೇಳಬಹುದಾಗಿದೆ. ಛತ್ತೀಸ್‌ಗಢ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯ್ದೆ ವಿರುದ್ಧ ಭುಗಿಲೆದ್ದ ಪ್ರತಿಭಟನೆ: 10 ಪೊಲೀಸರಿಗೆ ಗಾಯ

ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯ್ದೆ ವಿರುದ್ಧ ಭುಗಿಲೆದ್ದ ಪ್ರತಿಭಟನೆ: 10 ಪೊಲೀಸರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...