Homeಮುಖಪುಟಛತ್ತೀಸ್‌ಗಢ: ಮದುವೆಗೆ ಒಪ್ಪದ ಅಪ್ರಾಪ್ತೆಯ ಕೂದಲಿಡಿದು ಎಳೆದಾಡಿ, ನಡುರಸ್ತೆಯಲ್ಲಿ ಹಲ್ಲೆ

ಛತ್ತೀಸ್‌ಗಢ: ಮದುವೆಗೆ ಒಪ್ಪದ ಅಪ್ರಾಪ್ತೆಯ ಕೂದಲಿಡಿದು ಎಳೆದಾಡಿ, ನಡುರಸ್ತೆಯಲ್ಲಿ ಹಲ್ಲೆ

- Advertisement -
- Advertisement -

ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಆಕೆಯ ಕೂದಲು ಹಿಡಿದು ರಸ್ತೆಯಲ್ಲಿ ಎಳೆದೊಯ್ದ ಆಘಾತಕಾರಿ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಛತ್ತೀಸ್‌ಗಢದ ರಾಯ್‌ಪುರದ ಗುಧಿಯಾರಿ ಪ್ರದೇಶದ ಬೀದಿಗಳಲ್ಲಿ ನಡೆದಿದೆ. ಹಿಂಸಾಚಾರದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆ ವ್ಯಕ್ತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

16 ವರ್ಷದ ಅಪ್ರಾಪ್ತ ಬಾಲಕಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಕೂದಲು ಹಿಡಿದು ವ್ಯಕ್ತಿಯೊಬ್ಬ ಎಳೆದೊಯ್ದಿದ್ದಾನೆ. ಈ ಘಟನೆಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನೆಟ್ಟಿಗರು ಒತ್ತಾಯಿಸಿದ್ದಾರೆ.

ವೈರಲ್ ಆಗಿರುವ ವೀಡಿಯೊದಲ್ಲಿ, ”ಒಬ್ಬ ವ್ಯಕ್ತಿ ಕತ್ತಿಯನ್ನು ಹಿಡಿದುಕೊಂಡು, ಜನರು ನೋಡುತ್ತಿರುವಂತೆ ಹದಿಹರೆಯದ ಹುಡುಗಿಯ ಕೂದಲು ಹಿಡಿದು ಎಳೆದುಕೊಂಡು ಹೋಗುತ್ತಿರುವುದು” ಕಂಡುಬರುತ್ತದೆ.

ಇದನ್ನೂ ಓದಿ: ಮಧ್ಯಪ್ರದೇಶ: ದಲಿತರು ದೇವಾಲಯ ಪ್ರವೇಶಿಸಿದರೆಂದು ಹಿಂಸಾಚಾರ; 14 ಜನರಿಗೆ ಗಾಯ

ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ, ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷರು, ದುಃಖ ವ್ಯಕ್ತಪಡಿಸಿ ವಿಡಿಯೋ ಕ್ಲಿಪ್‌ಅನ್ನು ಟ್ವೀಟ್ ಮಾಡಿದ್ದಾರೆ. ”ಬಾಲಕಿ ಮೇಲೆ ಹಲ್ಲೆ ನಡೆಸುತ್ತ, ಆ ರಾಕ್ಷಸ ಆಕೆಯನ್ನು ಕೂದಲು ಹಿಡಿದು ಎಳೆದೊಯ್ಯುತ್ತಿದ್ದರೂ ಆ ಸ್ಥಳದಲ್ಲಿದ್ದ ಜನರು ನೋಡುತ್ತಾ ನಿಂತಿದ್ದಾರೆ ಆದರೆ ಅವರ್ಯಾರು ಆಕೆಯ ಸಹಾಯಕ್ಕೆ ಮುಂದೆ ಬಂದಿಲ್ಲ… ಎಲ್ಲಿದೆ ಮಾನವೀಯತೆ? ನಡುರಸ್ತೆಯಲ್ಲಿಯೇ ಇಂತಹ ಅಮಾನವೀಯ ಘಟನೆ ನಡೆಯುತ್ತಿದೆ, ಎಲ್ಲಿದೆ ಪೊಲೀಸ್ ಇಲಾಖೆ, ಎಲ್ಲಿದೆ ಆಡಳಿತ?” ಎಂದು ಸ್ವಾತಿ ಮಲಿವಾಲ್ ಪ್ರಶ್ನಿಸಿದ್ದಾರೆ.

ಹಿಂಸೆಗೊಳಗಾದ ಬಾಲಕಿಯು ಆ ವ್ಯಕ್ತಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯನ್ನು ಮದುವೆಯಾಗುವುದಾಗಿ ಪ್ರಸ್ತಾಪ ಮಾಡಿದ್ದನು, ಆದರೆ ಆಕೆ ಮತ್ತು ಆಕೆಯ ಕುಟುಂಬದವರು ಮದುವೆಗೆ ಒಪ್ಪಲಿಲ್ಲ. ಆಗ ಬಾಲಕಿಯು ಅಲ್ಲಿ ಕೆಲಸ ಬಿಟ್ಟಿದ್ದಾಳೆ. ಆ ನಂತರದಲ್ಲಿ ಈ ಘಟನೆ ಸಂಭವಿಸಿದೆ” ಎಂದು ರಾಯ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪ್ರಶಾಂತ್ ಅಗರವಾಲ್ ಎಎನ್‌ಐಗೆ ತಿಳಿಸಿದ್ದಾರೆ.

ಸಧ್ಯ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಸದ್ಯ ವೈದ್ಯರ ನಿರಂತರ ನಿಗಾದಲ್ಲಿದ್ದಾಳೆ.

ತನ್ನನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಮತ್ತು ತಮ್ಮ ಅಂಗಡಿಯಲ್ಲಿ ಕೆಲಸವನ್ನು ಬಿಟ್ಟಿದ್ದಕ್ಕಾಗಿ ಹತಾಶೆಗೊಂಡ ವ್ಯಕ್ತಿ, ಚೂಪಾದ ವಸ್ತುವಿನಿಂದ ಆಕೆಯ ಮೇಲೆ ದಾಳಿ ಮಾಡಿದ್ದಲ್ಲದೇ, ಬೀದಿಗಳಲ್ಲಿ ಆಕೆಯ ಕೂದಲು ಹಿಡಿದು ಎಳೆದೊಯ್ದಿದ್ದಾನೆ. ಈ ಘಟನೆಯ ವಿಡಿಯೋವನ್ನು ನೂರಾರು ಜನರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಈ ಹಿಂಸಾತ್ಮಕ ನಡವಳಿಕೆಯನ್ನು ಖಂಡಿಸಿದ್ದಾರೆ.

”ಆರೋಪಿಯನ್ನು 47ವರ್ಷದ ಓಂಕಾರ ತಿವಾರಿ ಎಂದು ಪತ್ತೆ ಮಾಡಲಾಗಿದ್ದು, ಆತನ ಮೇಲೆ ಘಟನೆ ಸಂಬಂಧಿತ ಪ್ರಕರಣಗಳು ಮತ್ತು ಶಸ್ತ್ರಾಸ್ತ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ” ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...