Homeಮುಖಪುಟಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ವೈಫಲ್ಯವಿಲ್ಲ, 25-30 ಮಾವೋವಾದಿಗಳ ಹತ್ಯೆ- CRPF ಮುಖ್ಯಸ್ಥ

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ವೈಫಲ್ಯವಿಲ್ಲ, 25-30 ಮಾವೋವಾದಿಗಳ ಹತ್ಯೆ- CRPF ಮುಖ್ಯಸ್ಥ

ಎನ್‌ಕೌಂಟರ್‌ನಲ್ಲಿ 22 ಮಂದಿ ಯೋಧರು ಬಲಿಯಾಗಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಇದೊಂದು ರೂಪುರೇಷೆಯಿಲ್ಲದ ಕಾರ್ಯಾಚರಣೆ ಎಂದಿದ್ದಾರೆ.

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ 22 ಮಂದಿ ಯೋಧರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಾತನಾಡಿರುವ ಸಿಆರ್‌ಪಿಎಫ್ ಮುಖ್ಯಸ್ಥ ಕುಲದೀಪ್ ಸಿಂಗ್ ತಮ್ಮ ಕಡೆಯಿಂದ ಭದ್ರತೆಯಲ್ಲಿ ಯಾವುದೇ ವೈಫಲ್ಯ ಕಂಡುಬಂದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಕಾರ್ಯಾಚರಣೆಯಲ್ಲಿ 25-30 ಮಾವೋವಾದಿಗಳು ಹತರಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಛತ್ತಿಸ್‌ಗಢ ರಾಜಧಾನಿ ರಾಯ್‌ಪುರದಿಂದ 400 ಕಿ.ಮೀ ದೂರದಲ್ಲಿರುವ ಬಿಜಾಪುರದಲ್ಲಿ ಶನಿವಾರ ಮಾವೋವಾದಿಗಳೊಂದಿಗೆ ನಡೆದ ಸಂಘರ್ಷದಲ್ಲಿ ಕನಿಷ್ಠ 22 ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದರು.

“ಕೆಲವು ರೀತಿಯ ಗುಪ್ತಚರ ಅಥವಾ ಕಾರ್ಯಾಚರಣೆಯ ವೈಫಲ್ಯವಿದೆ ಎಂದು ಹೇಳುವುದರಲ್ಲಿ ಯಾವುದೇ ಅರ್ಥವಿಲ್ಲ. ಇದು ಕೆಲವು ಗುಪ್ತಚರ ವೈಫಲ್ಯವಾಗಿದ್ದರೆ, ಮಾವೋವಾದಿಗಳ ಎನ್‌ಕೌಂಟರ್ ಕಾರ್ಯಾಚರಣೆಗೆ ಪಡೆಗಳು ಹೋಗುತ್ತಿರಲಿಲ್ಲ. ಕಾರ್ಯಾಚರಣೆಯ ವೈಫಲ್ಯವಿದ್ದರೆ, ಅನೇಕ ಮಾವೋವಾದಿಗಳು ಹತರಾಗುತ್ತಿರಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಛತ್ತಿಸ್‌ಗಢ: ಮಾವೋವಾದಿಗಳೊಂದಿಗಿನ ಸಂಘರ್ಷದಲ್ಲಿ 22 ಯೋಧರ ಸಾವು

ಎನ್‌ಕೌಂಟರ್‌ನಲ್ಲಿ ಮಾವೋವಾದಿಗಳ ಸಾವು-ನೋವುಗಳ ಕುರಿತು ಮಾತನಾಡಿದ ಕುಲ್‌ದೀಪ್ ಸಿಂಗ್, “ಗಾಯಗೊಂಡವರನ್ನು ಮತ್ತು ಮೃತ ದೇಹಗಳನ್ನು ಸ್ಥಳದಿಂದ ಸಾಗಿಸಲು ಮಾವೋವಾದಿಗಳು ಮೂರು ಟ್ರಾಕ್ಟರುಗಳನ್ನು ಬಳಸಿದ್ದಾರೆ. ಕಾರ್ಯಾಚರಣೆಯಲ್ಲಿ ಹತ್ಯೆಗೊಳಗಾದ ಮಾವೋವಾದಿಗಳ ನಿಖರ ಸಂಖ್ಯೆಯನ್ನು ಇದೀಗ ಹೇಳುವುದು ಕಠಿಣ. ಆದರೆ ಅದು 25-30ಕ್ಕೆ ಕಡಿಮೆಯಾಗಿಲ್ಲ” ಎಂದಿದ್ದಾರೆ.

ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಹೋರಾಡಿದ ಯೋಧರನ್ನು ಭೇಟಿಯಾಗಲಿದ್ದೇನೆ ಎಂದು ಡಿಜಿ ಹೇಳಿದರು.

ಎನ್‌ಕೌಂಟರ್‌ನಲ್ಲಿ 22 ಮಂದಿ ಯೋಧರು ಬಲಿಯಾಗಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಇದೊಂದು ರೂಪುರೇಷೆಯಿಲ್ಲದ ಕಾರ್ಯಾಚರಣೆ ಎಂದಿದ್ದಾರೆ.

ಗುಪ್ರಚರ ವೈಫಲ್ಯವಿಲ್ಲ ಎಂಬ ಸಿಆರ್‌ಪಿಎಫ್ ಮುಖ್ಯಸ್ಥ ಕುಲದೀಪ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಗುಪ್ತಚರ ವೈಫಲ್ಯವಿಲ್ಲದಿದ್ದರೆ 1: 1 ಸಾವಿನ ಅನುಪಾತ ಇದೆ ಎಂದರೆ, ಅದು ಸರಿಯಾಗಿ ರೂಪಿಸದ ಮತ್ತು ಅಸಮರ್ಥವಾಗಿ ಕಾರ್ಯಗತಗೊಂಡ ಕಾರ್ಯಾಚರಣೆಯಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...