Homeಮುಖಪುಟಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

- Advertisement -
- Advertisement -

ಛತ್ತೀಸ್‌ಗಢದ ಬಿಜೆಪಿ ಸರಕಾರ ಮತಾಂತರದ ಬಗ್ಗೆ ಕಠಿಣ ಕ್ರಮಕ್ಕೆ ಮಸೂದೆಯನ್ನು ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ. ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳಲು ಇಚ್ಛಿಸುವ ವ್ಯಕ್ತಿಯು ಕನಿಷ್ಠ 60 ದಿನಗಳ ಮುಂಚಿತವಾಗಿ ವೈಯಕ್ತಿಕ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಬೇಕು, ನಂತರ ಅವರು ಮತಾಂತರದ ನೈಜ ಉದ್ದೇಶ, ಕಾರಣದ ಕುರಿತು ತನಿಖೆಗೆ ಪೊಲೀಸರಿಗೆ ಸೂಚಿಸುತ್ತಾರೆ. ಕಾನೂನು ಬಾಹಿರ ಎಂದು ಕಂಡು ಬಂದರೆ 10 ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವನ್ನು ಮಸೂದೆಯಲ್ಲಿ ಕಲ್ಪಿಸಲಾಗಿದೆ.

ಹೊಸ ಮಸೂದೆಯ ಕರಡು ಸಿದ್ಧವಾಗಿದ್ದು, ಅಂತಿಮವಾಗಿ ವಿಧಾನಸೌಧದಲ್ಲಿ ಮಂಡಿಸುವ ಮುನ್ನ ಕೆಲವು ತಿದ್ದುಪಡಿಗಳನ್ನು ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಮತಾಂತರವಾಗುವ ವ್ಯಕ್ತಿಯು ಕನಿಷ್ಠ ಒಂದು ತಿಂಗಳುಗಳಿಗೆ ಮುಂಚಿತವಾಗಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ. ಅಧಿಕಾರದ ದುರುಪಯೋಗ, ಬಲವಂತ, ಅನಗತ್ಯ ಪ್ರಭಾವ, ಬಲಾತ್ಕಾರ, ಪ್ರಚೋದನೆ ಅಥವಾ ಯಾವುದೇ ಮೋಸದ ವಿಧಾನದಿಂದ ಅಥವಾ ಮದುವೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಕ್ಕೆ ಮಸೂದೆಯು ಬ್ರೇಕ್‌ ಹಾಕುತ್ತದೆ ಎಂದು ಕರಡು ಹೇಳುತ್ತದೆ. ತನಿಖೆಯ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಇದೊಂದು ಕಾನೂನು ಬಾಹಿರ ಪ್ರಕರಣವೆಂದು ಮನಗಂಡರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ.

‘ಛತ್ತೀಸ್‌ಗಢದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಮಸೂದೆ”ಯು ಒಬ್ಬ ವ್ಯಕ್ತಿಯು 60 ದಿನಗಳೊಳಗೆ ಪರಿಶೀಲನೆಗಾಗಿ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಬೇಕು ಎಂದು ಹೇಳುತ್ತದೆ. ಇದನ್ನು ಮಾಡದಿದ್ದರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಬಹುದಾಗಿದೆ. ಇದಲ್ಲದೆ ದೃಢೀಕರಣದ ದಿನಾಂಕದವರೆಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ತನ್ನ ಕಚೇರಿಯ ಸೂಚನಾ ಫಲಕದಲ್ಲಿ ಘೋಷಣೆಯ ಪ್ರತಿಯನ್ನು ಪ್ರದರ್ಶಿಸಲಿದ್ದಾರೆ. ಮತಾಂತರಗೊಳ್ಳುವ ಪ್ರತಿಯೊಬ್ಬರ ದಾಖಲೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟರ್‌  ನಿರ್ವಹಿಸಲಿದ್ದಾರೆ.

ಈ ಬಗ್ಗೆ ಆಕ್ಷೇಪಣೆಯಿದ್ದಲ್ಲಿ ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಅಥವಾ ದತ್ತು ಪಡೆದ ವ್ಯಕ್ತಿ ಎಫ್‌ಐಆರ್ ದಾಖಲಿಸಬಹುದು. ಪ್ರಕರಣವು ಜಾಮೀನು ರಹಿತವಾಗಿರುತ್ತದೆ ಮತ್ತು ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುತ್ತದೆ ಎಂದು ಮಸೂದೆಯು ಉಲ್ಲೇಖಿಸಿದೆ. ಅಪ್ರಾಪ್ತ ವಯಸ್ಕರು, ಮಹಿಳೆಯರು ಅಥವಾ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಜನರನ್ನು  ಅಕ್ರಮವಾಗಿ ಮತಾಂತರ ಮಾಡುವುದು ಕಂಡು ಬಂದರೆ ಕನಿಷ್ಠ ಎರಡು ವರ್ಷ ಮತ್ತು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ.ದಂಡ ವಿಧಿಸಲಾಗುತ್ತದೆ. ಸಾಮೂಹಿಕ ಮತಾಂತರಕ್ಕೆ ಕನಿಷ್ಠ ಮೂರು ವರ್ಷ ಮತ್ತು ಗರಿಷ್ಠ 10 ವರ್ಷ ಶಿಕ್ಷೆ ಹಾಗೂ 50,000ರೂ. ದಂಡ ವಿಧಿಸಲಾಗುತ್ತದೆ. ಇದಲ್ಲದೆ ಧಾರ್ಮಿಕ ಮತಾಂತರದ ಸಂತ್ರಸ್ತರಿಗೆ 5 ಲಕ್ಷ ರೂಪಾಯಿಗಳವರೆಗೆ ಪರಿಹಾರವನ್ನು ನ್ಯಾಯಾಲಯವು ಅನುಮೋದಿಸಬಹುದು. ಆದರೆ ಹಿಂದಿನ ಧರ್ಮಕ್ಕೆ ಮರು ಮತಾಂತರಗೊಳ್ಳಲು ಬಯಸುವವರಿಗೆ ಕಾನೂನು ಅನ್ವಯಿಸುವುದಿಲ್ಲ.

ಕಳೆದ ಕೆಲವು ವರ್ಷಗಳಿಂದ ಛತ್ತೀಸ್‌ಗಢದ ಕೊಂಡಗಾಂವ್ ಮತ್ತು ನಾರಾಯಣಪುರದಂತಹ ಜಿಲ್ಲೆಗಳಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಬುಡಕಟ್ಟು ಜನಾಂಗದವರ ಮೇಲೆ ಹಲ್ಲೆ ನಡೆಸಿರುವ ಹಲವಾರು ನಿದರ್ಶನಗಳನ್ನು ರಾಜ್ಯ ಕಂಡಿದೆ. ಇದಲ್ಲದೆ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಮತಾಂತರವನ್ನು ಚುನಾವಣಾ ವಿಷಯವನ್ನಾಗಿ ಮಾಡಿಕೊಂಡಿತ್ತು. ಜಶ್ಪುರ್‌ನ ಹಿಂದಿನ ರಾಜಮನೆತನದ ದಿವಂಗತ ಕೇಂದ್ರ ಸಚಿವ ದಿಲೀಪ್ ಸಿಂಗ್ ಜೂಡಿಯೊ ಅವರು ತಮ್ಮ ಜಿಲ್ಲೆಯಲ್ಲಿ “ಘರ್ ವಾಪ್ಸಿ” ಅಭಿಯಾನಕ್ಕೆ ಮೊದಲು ಚಾಲನೆ ನೀಡಿದ್ದರು.

ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಈ ಕುರಿತು ಪ್ರತಿಕ್ರಿಯಿಸಿದ್ದು, ಕಳೆದ ಐದು ವರ್ಷಗಳಲ್ಲಿ ಧಾರ್ಮಿಕ ಮತಾಂತರ ಹೆಚ್ಚಾಗಿದೆ. ಕಳೆದ ತಿಂಗಳು ಜಶ್‌ಪುರದಲ್ಲಿ ಘರ್ ವಾಪ್ಸಿ ಅಭಿಯಾನವನ್ನು ಜೂಡೋ ಜಿ ಪ್ರಾರಂಭಿಸಿದರು, ಇದರಿಂದಾಗಿ ನಮ್ಮ ಜಿಲ್ಲೆಯನ್ನು ರಕ್ಷಿಸಲಾಗಿದೆ. ಇಲ್ಲವಾದರೆ ಏಷ್ಯಾದ ಎರಡನೇ ದೊಡ್ಡ ಚರ್ಚ್ ನಮ್ಮ ಜಿಲ್ಲೆಯಲ್ಲಿದೆ ಮತ್ತು ಮತಾಂತರವು ವೇಗವಾಗಿ ನಡೆಯುತ್ತಿತ್ತು. ರಾಜನಾಗಿದ್ದರೂ ಮತಾಂತರಗೊಂಡ ಜನರ ಪಾದಗಳನ್ನು ತೊಳೆದು ಮತ್ತೆ ಹಿಂದೂ ಧರ್ಮಕ್ಕೆ ಕರೆತಂದರು, ಇಂದು ಈ ಕಾರ್ಯ ಮುನ್ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರಗೈದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...