Homeಮುಖಪುಟಛತ್ತೀಸ್‌ಗಢ - ಕೈದಿಗಳ 'ಸುಧಾರಣೆ'ಗಾಗಿ ಜೈಲುಗಳಲ್ಲಿ ಆರೆಸ್ಸೆಸ್‌ ಮುಖವಾಣಿ!

ಛತ್ತೀಸ್‌ಗಢ – ಕೈದಿಗಳ ‘ಸುಧಾರಣೆ’ಗಾಗಿ ಜೈಲುಗಳಲ್ಲಿ ಆರೆಸ್ಸೆಸ್‌ ಮುಖವಾಣಿ!

- Advertisement -
- Advertisement -

ಬಿಜೆಪಿ ಆಡಳಿತದ ಛತ್ತೀಸ್‌ಗಢದ ಜೈಲು ಇಲಾಖೆಯು ಆರೆಸ್ಸೆಸ್‌ ಮುಖವಾಣಿ ಪಾಂಚಜನ್ಯ (ಹಿಂದಿ ಭಾಷೆ) ಮತ್ತು ಆರ್ಗನೈಸರ್ (ಇಂಗ್ಲಿಷ್‌ ಭಾಷೆ) ಪತ್ರಿಕೆಗಳನ್ನು ಕೈದಿಗಳಿಗಾಗಿ ಗ್ರಂಥಾಲಯಗಳಿಗೆ ಸೇರಿಸಲು ನಿರ್ಧರಿಸಿದೆ. ರಾಜ್ಯದ ಜೈಲು ಗ್ರಂಥಾಲಯಗಳು ವೈವಿಧ್ಯಮಯ ವಿಷಯಗಳ ಕುರಿತು ಪುಸ್ತಕಗಳು ಮತ್ತು ಪ್ರಕಟಣೆಗಳ ಸಂಗ್ರಹಗಳನ್ನು ಹೊಂದಿವೆ ಎಂದು ಹೇಳಲಾಗಿದೆ. ಛತ್ತೀಸ್‌ಗಢ – ಕೈದಿಗಳ

ರಾಜ್ಯ ಮಹಾನಿರ್ದೇಶಕ (ಜೈಲು) ಹಿಮಾಂಶು ಗುಪ್ತಾ ಅವರು ಇತ್ತೀಚೆಗೆ ನಡೆಸಿದ ತಪಾಸಣೆಯ ಸಮಯದಲ್ಲಿ ಜೈಲುಗಳಲ್ಲಿರುವ ಗ್ರಂಥಾಲಯಗಳಲ್ಲಿ ಪಾಂಚಜನ್ಯ ಮತ್ತು ಆರ್ಗನೈಸರ್ ಇಲ್ಲ ಎಂದು ಕಂಡುಕೊಂಡಿದ್ದರು. ಹಾಗಾಗಿ ಎಲ್ಲಾ 33 ರಾಜ್ಯ ಕಾರಾಗೃಹಗಳಲ್ಲಿ ಈ ನಿಯತಕಾಲಿಕೆಗಳು ಲಭ್ಯವಾಗುವಂತೆ ಮಾಡಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಐದು ಕೇಂದ್ರ, 20 ಜಿಲ್ಲಾ ಜೈಲುಗಳು ಮತ್ತು ಎಂಟು ಉಪ ಜೈಲುಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಖೈದಿಗಳನ್ನು ಸುಧಾರಿಸುವ, ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ, ಅವರ ಕಲಿಕೆಯನ್ನು ಸುಧಾರಿಸುವ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುವಲ್ಲಿ ಆರೆಸ್ಸೆಸ್‌ ಮುಖವಾಣಿ ಸಹಾಯ ಮಾಡಲಿದೆ ಎಂದು ಡಿಜಿ ಹೇಳಿದ್ದಾರೆ. ಬಿಡುಗಡೆಯಾದ ನಂತರ ಮುಖ್ಯವಾಹಿನಿಯ ಸಮಾಜದಲ್ಲಿ ತಮ್ಮನ್ನು ತಾವು ಪುನರ್ವಸತಿ ಮಾಡಿಕೊಳ್ಳಲು ಇದು ಕೈದಿಗಳನ್ನು ಪ್ರೋತ್ಸಾಹಿಸುತ್ತದೆ ಎಂದು ಅವರು ಹೇಳಿದ್ದಾರೆ.

ಈ ಕ್ರಮವು ಕೈದಿಗಳಲ್ಲಿ ‘ಸನಾತನ ಭಾರತೀಯ ಸಂಸ್ಕೃತಿ ಮತ್ತು ದೇಶಭಕ್ತಿ’ಯ ಬಗ್ಗೆ ಜಾಗೃತಿ ಮೂಡಿಸುತ್ತದೆ ಎಂದು ಜೈಲು ಆಡಳಿತ ಹೇಳಿಕೊಂಡಿವೆ. ಛತ್ತೀಸ್‌ಗಢ – ಕೈದಿಗಳ

ಜೈಲಿನ ಗ್ರಂಥಾಲಯವು ಸಾಮಾನ್ಯವಾಗಿ ಪ್ರತಿ ತಿಂಗಳು ಪತ್ರಿಕೆಗಳು, ನಿಯತಕಾಲಿಕೆಗಳು ಮತ್ತು ಪುಸ್ತಕಗಳನ್ನು ಖರೀದಿಸುತ್ತದೆ. ಜೈಲಿನ ಗ್ರಂಥಾಲಯದಲ್ಲಿ ಸರಾಸರಿ ಪ್ರತಿ 50 ಕೈದಿಗಳಿಗೆ ಒಂದು ಪತ್ರಿಕೆ ಮತ್ತು ಒಂದು ನಿಯತಕಾಲಿಕೆ ಲಭ್ಯವಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದಾಗ್ಯೂ, ಈ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ದೇಶದ ಜನರು ಆರೆಸ್ಸೆಸ್‌ ಸಂಬಂಧಿತ ಪ್ರಕಟಣೆಗಳಾದ ಪಾಂಚಜನ್ಯ ಮತ್ತು ಆರ್ಗನೈಸರ್‌ನಿಂದ ಪ್ರಚಾರ ಮಾಡಲ್ಪಟ್ಟ ವಿಭಜಕ ಆಲೋಚನೆಗಳು ಮತ್ತು ದ್ವೇಷಪೂರಿತ ಕಾರ್ಯಸೂಚಿಯನ್ನು ಓದಲು ಬಯಸುವುದಿಲ್ಲ ಎಂದು ಹೇಳಿದೆ.

“ಆರ್‌ಎಸ್‌ಎಸ್ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾಗದ್ದು, ಛತ್ತೀಸ್‌ಗಢದಲ್ಲಿ ಆಡಳಿತಾರೂಢ ಬಿಜೆಪಿ ಪ್ರತಿ ಜೈಲಿನಲ್ಲಿ ಎರಡು ವಾರಪತ್ರಿಕೆಗಳನ್ನು ಜೋಡಿಸುವ ಹೆಸರಿನಲ್ಲಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತದೆ” ಎಂದು ಕಾಂಗ್ರೆಸ್‌ನ ಸುಶೀಲ್ ಆನಂದ್ ಶುಕ್ಲಾ ಹೇಳಿದ್ದಾರೆ.

1948 ರಲ್ಲಿ ಪ್ರಾರಂಭವಾದ ಪಾಂಚಜನ್ಯ ಮತ್ತು 1947 ರಲ್ಲಿ ಸ್ಥಾಪಿಸಲಾದ ಆರ್ಗನೈಸರ್ ಅನ್ನು ರಮಣ್ ಸಿಂಗ್ ಅವರ ಹಿಂದಿನ 15 ವರ್ಷಗಳ ಬಿಜೆಪಿ ಆಡಳಿತದಲ್ಲಿ ಛತ್ತೀಸ್‌ಗಢ ಜೈಲು ಗ್ರಂಥಾಲಯಗಳಿಗೆ ಪರಿಗಣಿಸಲಾಗಿರಲಿಲ್ಲ.

ಇದನ್ನೂಓದಿ:  ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ- ಕಣ್ಣುಗುಡ್ಡೆ ಕಿತ್ತು ಹತ್ಯೆ; ರಾಮ, ಸೀತೆ ಎಲ್ಲಿ ಇರುವಿರಿ? – ಗಳಗಳನೆ ಅತ್ತ ಸಂಸದ!

ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ- ಕಣ್ಣುಗುಡ್ಡೆ ಕಿತ್ತು ಹತ್ಯೆ; ರಾಮ, ಸೀತೆ ಎಲ್ಲಿ ಇರುವಿರಿ? – ಗಳಗಳನೆ ಅತ್ತ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...