Homeಮುಖಪುಟಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

”ಮೂಲವಾಸಿ ಬಚಾವೋ ಮಂಚ್” ಎಂಬ ಆದಿವಾಸಿ ಸಮುದಾಯದ ಸಂಘಟನೆಯನ್ನು ಛತ್ತೀಸ್‌ಗಢದ ಬಿಜೆಪಿ ಸರ್ಕಾರ ಒಂದು ವರ್ಷದವರೆಗೆ ನಿಷೇಧಿಸಿದೆ. ಅಕ್ಟೋಬರ್ 30 ರಂದು ಛತ್ತೀಸ್‌ಗಢ ವಿಶೇಷ ಸಾರ್ವಜನಿಕ ಭದ್ರತಾ ಕಾಯಿದೆ, 2005 ರ ಅಡಿಯಲ್ಲಿ ನಿಷೇಧವನ್ನು ವಿಧಿಸಲಾಗಿದ್ದು, ಸಂಘಟನೆಯು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಡೆಸಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು “ನಿರಂತರವಾಗಿ ವಿರೋಧಿಸುತ್ತಿದ್ದು, ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಸರ್ಕಾರ ಆರೋಪಿಸಿದೆ. ಈ ಬಗ್ಗೆ ಹೋರಾಟಗಾರರು ಮತ್ತು ಜನಪರ ಸಂಘಟನೆಗಳು ತೀವ್ರ ಆಕ್ರೊಶ ವ್ಯಕ್ತಪಡಿಸಿವೆ.

ಅಭಿವೃದ್ಧಿ ಯೋಜನೆಗಳಿಗಾಗಿ ನಿರ್ಮಿಸಲಾದ ಭದ್ರತಾ ಶಿಬಿರಗಳ ವಿರುದ್ಧ ಸಂಘಟನೆಯು ಜನರನ್ನು ಪ್ರಚೋದಿಸುತ್ತಿದೆ ಎಂದು ಸರ್ಕಾರ ಆರೋಪಿಸಿದೆ. ಸಂಘಟನೆಯು ಕಾನೂನು ಜಾರಿಯಲ್ಲಿ ಮಧ್ಯಪ್ರವೇಶಿಸುತ್ತಿದ್ದು, ಜೊತೆಗೆ ಕಾನೂನಿನಿಂದ ಸ್ಥಾಪಿಸಲಾದ ಸಂಸ್ಥೆಗಳಿಗೆ ಅಸಹಕಾರವನ್ನು ಉತ್ತೇಜಿಸುತ್ತಿದೆ ಎಂದು ಸರ್ಕಾರ ಹೇಳಿದೆ. “ಈ ಮೂಲಕ ಸಂಘಟನೆಯು ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಮತ್ತು ನಾಗರಿಕರ ಸುರಕ್ಷತೆಗೆ ಧಕ್ಕೆಯುಂಟುಮಾಡುತ್ತದೆ. ಇದು ರಾಜ್ಯದ ಭದ್ರತೆಗೆ ಹಾನಿಕರವಾಗಿದೆ” ಎಂದು ಸರ್ಕಾರ ಹೇಳಿದೆ. ಛತ್ತೀಸ್‌ಗಢ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಹೋರಾಟಗಾರರು ಮತ್ತು ಜನಪರ ಸಂಘಟನೆಗಳು, ಮೂಲವಾಸಿ ಬಚಾವೋ ಮಂಚ್ ಮೇಲಿನ ನಿಷೇಧವನ್ನು ಸರ್ವಾಧಿಕಾರ ಎಂದು ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವನ್ನು ವಿಮರ್ಶೆ ಮಾಡುವ ಧ್ವನಿಗಳನ್ನು ಮೌನಗೊಳಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಮೂಲವಾಸಿ ಬಚಾವೋ ಮಂಚ್ ಅನ್ನು ನಿಷೇಧಿಸುವುದಕ್ಕೆ ಆಧಾರವೇನಿದೆ? ಬಸ್ತಾರ್‌ನ ಆದಿವಾಸಿಗಳು ಈ ಸಂಘಟನೆಯನ್ನು ರೂಪಿಸಲು ಮಾಡುವಂತೆ ಮಾಡಿದವರು ಯಾರು? ಸರ್ಕಾರ ಆದಿವಾಸಿಗಳ ಬೇಡಿಕೆಗಳನ್ನು ಆಲಿಸಿದ್ದರೆ, ಗಣಿಗಾರಿಕೆ ನಿಲ್ಲಿಸಿದ್ದರೆ, ಕ್ಯಾಂಪ್‌ಗಳನ್ನು ನಿರ್ಮಿಸುವುದನ್ನು ನಿಲ್ಲಿಸಿ ಸಿಲ್ಗರ್‌ನಲ್ಲಿ ನಾಲ್ವರನ್ನು ಕೊಲ್ಲದೆ ಇದ್ದರೆ, ಮೂಲವಾಸಿ ಬಚಾವೊ ಮಂಚ್‌ನ ಅಗತ್ಯವೆ ಇರಲಿಲ್ಲ” ಎಂದು ಸಂಘಟನೆಯ ಕಾರ್ಯಕರ್ತೆ ಸೋನಿ ಸೋರಿ ಹೇಳಿದ್ದಾರೆ.

2021ರ ಮೇ ತಿಂಗಳಲ್ಲಿ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿರುವ ಸಿಲ್ಗರ್ ಗ್ರಾಮದ ಬಳಿ ಪೋಲಿಸ್ ಗುಂಡಿನ ದಾಳಿಯಲ್ಲಿ ನಾಲ್ವರು ಕೊಲ್ಲಲ್ಪಟ್ಟಿದ್ದರು. ಈ ಪ್ರದೇಶದಲ್ಲಿ ಭದ್ರತಾ ಶಿಬಿರವನ್ನು ಸ್ಥಾಪಿಸುವುದನ್ನು ಆದಿವಾಸಿಗಳ ಗುಂಪು ಪ್ರತಿಭಟಿಸಿದ ನಂತರ ಈ ಗುಂಡಿನ ದಾಳಿ ನಡೆದಿತ್ತು.

ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣದ ವಿರುದ್ಧದ ವೇದಿಕೆಯು ಮೂಲವಾಸಿ ಬಚಾವೋ ಮಂಚ್‌ನ ಕಾರ್ಯಕರ್ತರಾದ ಸುನೀತಾ ಪೊಟ್ಟಂ ಮತ್ತು ಸುರ್ಜು ಟೇಕಂ ಸೇರಿದಂತೆ ಹಲವಾರು ಸದಸ್ಯರನ್ನು ಕಟ್ಟುಕಥೆ ಕಟ್ಟಿ ಬಂಧಿಸಲಾಗಿದೆ ಎಂದು ಆರೋಪಿಸಿದೆ.

ಜೂನ್‌ನಲ್ಲಿ, ಮಾವೋವಾದಿ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿ ಸುನೀತಾ ಪೊಟ್ಟಮ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ, ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಅಪರಾಧಗಳ 12 ಪ್ರಕರಣಗಳಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಏಪ್ರಿಲ್‌ನಲ್ಲಿ ಪೊಲೀಸರು ಸುರ್ಜು ಟೇಕಮ್‌ನನ್ನು ಕೂಡಾ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿದ್ದರು.

ಸಿಲ್ಗರ್ ಹತ್ಯೆಯ ನಂತರ ಮೂಲವಾಸಿ ಬಚಾವೋ ಮಂಚ್ ಸಿಲ್ಗರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸುತ್ತಿದೆ ಮತ್ತು ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಅರೆಸೈನಿಕ ಶಿಬಿರಗಳ ವಿರುದ್ಧ 30 ಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಆಯೋಜಿಸಿತ್ತು.

“ತಮ್ಮ ಹಳ್ಳಿಗಳಲ್ಲಿ ಪ್ರತಿಭಟನೆಗೆ ಕುಳಿತಿರುವ ಜನರ ನಡೆಯನ್ನು ಕಾನೂನುಬಾಹಿರವೆಂದು ಹೇಗೆ ಘೋಷಿಸಲು ಸಾಧ್ಯ” ಎಂದು ಸಮಾಜಶಾಸ್ತ್ರಜ್ಞೆ ಮತ್ತು ಹೋರಾಟಗಾರ್ತಿ ನಂದಿನಿ ಸುಂದರ್ ಸೋಮವಾರ ಪ್ರಶ್ನಿಸಿದ್ದಾರೆ. ಸಂಘಟನೆಯು ಅಭಿವೃದ್ಧಿಯನ್ನು ತಡೆಯುತ್ತಿದೆ ಎಂಬ ಸರ್ಕಾರದ ಆರೋಪ ಸುಳ್ಳಾಗಿದ್ದು, ಸಂಘಟನೆಯು ಭದ್ರತಾ ಶಿಬಿರಗಳ ಬದಲಿಗೆ ಶಾಲೆಗಳು ಮತ್ತು ಆರೋಗ್ಯ ಸೇವೆಗಳಿಗೆ ಒತ್ತಾಯಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...