ಛತ್ತೀಸ್‌ಗಢ ರಾಜ್ಯದ ರಾಯಗಢ ಜಿಲ್ಲೆಯಲ್ಲಿ 27 ವರ್ಷದ ಬುಡಕಟ್ಟು ಮಹಿಳೆ ಮೇಲೆ ಆರು ಮಂದಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಪುಸೌರ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಸೋಮವಾರ ಸಂತ್ರಸ್ತೆ ರಕ್ಷಾಬಂಧನ ಹಬ್ಬವನ್ನು ಆಚರಿಸಿದ ನಂತರ ಸ್ಥಳೀಯ ಜಾತ್ರೆಗೆ ಭೇಟಿ ನೀಡಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಇಲ್ಲಿನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಮಂಗಳವಾರ ಮಹಿಳೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು. ದೂರಿನ ಪ್ರಕಾರ, ಕೆಲವು ವ್ಯಕ್ತಿಗಳು ಆಕೆಯನ್ನು ಅಡ್ಡಗಟ್ಟಿ ಬಲವಂತವಾಗಿ ಹತ್ತಿರದ ಕೊಳದ ದಡಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಇದುವರೆಗೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
रायगढ़ के पुसौर ब्लॉक में हुई बलात्कार की यह घटना बहुत गंभीर है।
दोषियों को तत्काल गिरफ़्तार करना चाहिए और सज़ा मिलने तक पीड़िता को संरक्षण मिलना चाहिए। चिकित्सा सहित हर संभव सहायता भी।https://t.co/cvYJuxRbgd
— Bhupesh Baghel (@bhupeshbaghel) August 20, 2024
ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 70(1) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಘಟನೆಯನ್ನು ಅತ್ಯಂತ ಗಂಭೀರವಾಗಿದೆ ಮತ್ತು ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.
“ರಾಯಗಢ್‌ನ ಪುಸೌರ್ ಪ್ರದೇಶದಲ್ಲಿ ನಡೆದ ಅತ್ಯಾಚಾರ ಘಟನೆಯು ತುಂಬಾ ಗಂಭೀರವಾಗಿದೆ. ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು ಮತ್ತು ಆರೋಪಿಗಳಿಗೆ ಶಿಕ್ಷೆಯಾಗುವವರೆಗೆ ಸಂತ್ರಸ್ತೆಗೆ ರಕ್ಷಣೆ ನೀಡಬೇಕು. ಸಂತ್ರಸ್ತೆಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಬೇಕು” ಎಂದು ಬಘೇಲ್ ತಮ್ಮ ‘ಎಕ್ಸ್’ ನಲ್ಲಿ ಬರೆದಿದ್ದಾರೆ.
ಇದನ್ನೂ ಓದಿ;


