- Advertisement -
- Advertisement -
ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಹಗರಣ ಆರೋಪದಲ್ಲಿ ಬಂಧಿತರಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರನ್ನು ಅಕ್ಟೋಬರ್ 17ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಿ ಎಂದು ಆದೇಶಿಸಲಾಗಿದೆ. ಇನ್ನು ಜಾಮೀನು ಕೋರಿ ಚಿದಂಬರಂ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದರು.
ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್, ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದು, ಶೀಘ್ರ ವಿಚಾರಣೆ ನಡೆಸುವಂತೆ ಕೋರಿದ್ದಾರೆ. ಪೀಠದಲ್ಲಿ ಸಂಜೀವ್ ಖನ್ನಾ, ಕೃಷ್ಣ ಮುರಾರಿ ಇದ್ದು ಜಾಮೀನು ಅರ್ಜಿಯನ್ನು ಪಟ್ಟಿ ಮಾಡಲು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಕಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 30ರಂದು ಚಿದಂಬರಂ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ ಚಿದಂಬರಂ ನ್ಯಾಯಾಂಗ ಬಂಧನ ಮುಂದುವರಿದಿದ್ದು, ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.


