ರಾಜ್ಯಾದ್ಯಂತ ನಾಳೆ ಪ್ರಾರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭ ಹಾರೈಸಿದ್ದಾರೆ. ಈ ಹಿಂದೆಯೇ ನಡೆಯಬೇಕಾಗಿದ್ದ ಪರೀಕ್ಷೆಗಳು ಕೊರೊನಾ ವೈರಸ್ ನಿಂದಾಗಿ ಮುಂದೂಡಲ್ಪಟ್ಟಿದ್ದವು.
ಲಾಕ್ ಡೌನ್ ಕಾರಣದಿಂದ ಮುಂದೂಡುಲ್ಪಟ್ಟಿದ್ದ ಪರೀಕ್ಷೆಗಳನ್ನು ನಡೆಸಲು ಸರ್ಕಾರವೂ ಎಲ್ಲಾ ಸಿದ್ದತೆಗಳನ್ನು ಮಾಡಿದೆ ಎಂದಿರುವ ಅವರು, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಬಳಸುವಂತೆ ಹಾಗೂ ವ್ಯಕ್ತಿಗತ ಅಂತರಗಳನ್ನು ಕಾಪಾಡಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿದ್ಯಾರ್ಥಿಗಳನ್ನು ಕೇಳಿಕೊಂಡಿದ್ದಾರೆ.
“ಎಸ್ಸೆಸ್ಸೆಲ್ಸಿ ಪರೀಕ್ಷೆಯೂ ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾಗಿದ್ದು, ಪರೀಕ್ಷೆಯನ್ನು ಆತಂಕ ಮತ್ತು ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ” ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.
ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಶುಭ ಹಾರೈಕೆಗಳು .
ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನೂ ಮಾಡಿದೆ. 1/2
— CM of Karnataka (@CMofKarnataka) June 24, 2020
ಪುದುಚೇರಿ, ತಮಿಳುನಾಡು ಹಾಗೂ ಆಂದ್ರ ಪ್ರದೇಶ ರಾಜ್ಯಗಳು ಹತ್ತನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಿವೆ.
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಬಾರದು ಎಂದು ಹಲವಾರು ಸಾಮಾಜಿಕ ಕಾರ್ಯಕರ್ತರು ಕೇಳಿಕೊಂಡಿದ್ದು, ಕೊರೊನಾ ಹೆಚ್ಚುತ್ತಿರುವ ಈ ಸಮಯದಲ್ಲಿ ರಾಜ್ಯ ಸರ್ಕಾರ ಪರೀಕ್ಷೆ ನಡೆಸಲು ನಿರ್ಧರಿಸಿ ಅಪ್ರಾಪ್ತ ಮಕ್ಕಳು, ಪೋಷಕರು ಹಾಗೂ ಶಿಕ್ಷಣಾಧಿಕಾರಿಗಳ ಜೀವವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದ್ದರು.
ಓದಿ: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ


