Homeಕರ್ನಾಟಕಮುಖ್ಯಮಂತ್ರಿ ಬೊಮ್ಮಾಯಿ ಕಳೆದ ಮೂರ್ನಾಲ್ಕು ದಿನದಿಂದ ನೋವಿನಲ್ಲಿದ್ದು, ಕಣ್ಣೀರು ಹಾಕುತ್ತಿದ್ದಾರೆ: ರೇಣುಕಾಚಾರ್ಯ

ಮುಖ್ಯಮಂತ್ರಿ ಬೊಮ್ಮಾಯಿ ಕಳೆದ ಮೂರ್ನಾಲ್ಕು ದಿನದಿಂದ ನೋವಿನಲ್ಲಿದ್ದು, ಕಣ್ಣೀರು ಹಾಕುತ್ತಿದ್ದಾರೆ: ರೇಣುಕಾಚಾರ್ಯ

- Advertisement -
- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ಮೂರ್ನಾಲ್ಕು ದಿನದಿಂದ ನೋವಿನಲ್ಲಿದ್ದು, ಕಣ್ಣೀರು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ, ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಶನಿವಾರ ಹೇಳಿದ್ದಾರೆ. “ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದಾಗ, ಅದಕ್ಕೆ ಮುಖ್ಯಮಂತ್ರಿ ಒಪ್ಪಿಕೊಳ್ಳದೆ, ‘ಸರ್ಕಾರದ ಜೊತೆ ನೀವು ಗಟ್ಟಿಯಾಗಿ ನಿಲ್ಲಬೇಕು’ ಎಂದಿದ್ದಾರೆ” ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಸಂಜೆ ಸರಣಿ ಟ್ವೀಟ್ ಮಾಡಿರುವ ರೇಣುಕಾಚಾರ್ಯ, “ಎಬಿವಿಪಿ ಯುವಕರು, ಹಿಂದೂ ಸಂಘಟನೆಗಳು, ಪಕ್ಷದ ಕಾರ್ಯಕರ್ತರಲ್ಲಿ ಕಳಕಳಿಯ ಮನವಿ ಮಾಡುತ್ತೇನೆ. ಪ್ರವೀಣ್ ಹತ್ಯೆ ಮಾಡಿದವರಿಗೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಪ್ರವೀಣ್ ಹತ್ಯೆ ಪ್ರಕರಣ ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಳೆದ ಮೂರ್ನಾಲ್ಕು ದಿನದಿಂದ ಮುಖ್ಯಮಂತ್ರಿಗಳು ನೋವಿನಲ್ಲಿದ್ದಾರೆ. ಯಾರೂಕೂಡ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ. ಕಾಂಗ್ರೆಸ್ ಸರ್ಕಾರ ಇದ್ದಾಗ ಮೂವತ್ತಕ್ಕೂ ಹೆಚ್ಚು ಹಿಂದುಗಳ ಹತ್ಯೆಯಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಸಿಎಂ ಕಣ್ಣೀರು ಹಾಕುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

‘‘ನಾನು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದಾಗ, ‘ನೀವು ಸರ್ಕಾರದ ಒಂದು ಭಾಗ. ನೀವು ನಮ್ಮ ಜೊತೆ ಗಟ್ಟಿಯಾಗಿ ನಿಲ್ಲಬೇಕು’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಸಂಘಪರಿವಾರದವರು, ಮುಖಂಡರು ರಾಜೀನಾಮೆ ಕೊಡಬಾರದೆಂದು ಹೇಳಿದ್ದಾರೆ” ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

“ಯಾರು ಸಮಾಜಘಾತುಕ ಶಕ್ತಿಗಳಿದ್ದಾರೋ ಅವರಿಗೆ ಉತ್ತರಪ್ರದೇಶದ ಮಾದರಿಯಲ್ಲಿ ಕ್ರಮ ಜರುಗಿಸಲಾಗುವುದು. ಸಮಾಜಘಾತುಕ ಶಕ್ತಿಗಳನ್ನು ಎನ್ಕೌಂಟರ್ ಮಾಡುವುದರ ಜೊತೆಗೆ ಅವರ ಕುಟುಂಬದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು” ಎಂದು ರೇಣುಕಾಚಾರ್ಯ ಪ್ರತಿಪಾದಿಸಿದ್ದಾರೆ.

“ಕಾರ್ಯಕರ್ತರೆ ಪಕ್ಷದ ಶಕ್ತಿಯಾಗಿದ್ದು, ನಾನು ಕಾರ್ಯಕರ್ತರಲ್ಲಿ ಅತ್ಯಂತ ವಿನಯದಿಂದ ಮನವಿ ಮಾಡುತ್ತೇನೆ. ರಾಜೀನಾಮೆಯನ್ನು ವಾಪಸ್ ಪಡೆಯಬೇಕು, ನಾವು ನಿಮ್ಮೊಂದಿಗಿದ್ದೇವೆ ಎಂದು ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...