Homeಕರ್ನಾಟಕಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

ಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

- Advertisement -
- Advertisement -

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ ಶುಕ್ರವಾರದಂದು ಪತ್ರಿಕಾ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಸವಣ್ಣನವರ ಬಗ್ಗೆ ಉಲ್ಲೇಖಿಸುತ್ತಾ, “ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ” ಎಂದು ಹೇಳಿದ್ದರು.

ಆದರೆ ಮುಖ್ಯಮಂತ್ರಿಯ ಈ ಹೇಳಿಕೆ ಅರ್ಧ ಸತ್ಯವಾಗಿದ್ದು, ರೋಹಿತ್ ಚಕ್ರತೀರ್ಥ ಸಮಿತಿಯು ಹೊಸ ಪಠ್ಯದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ ಎಂಬುದು ಕಂಡುಬಂದಿದೆ. ಸ್ವತಃ ಬರಗೂರು ರಾಮಚಂದ್ರಪ್ಪನವರು ಸಹ ಈ ಕುರಿತು ಸ್ಪಷ್ಟನೆ ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಹೇಳಿದ್ದೇನು? 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಹೇಳಿಕೆಯಲ್ಲಿ ಹಲವು ವಿಚಾಗಳನ್ನು ಮಾತನಾಡುತ್ತಾ, “ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು” ಎಂದು ಮುಖ್ಯಮಂತ್ರಿ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದರು.

ಜೊತೆಗೆ ಆಕ್ಷೇಪಣೆ ಹಾಗೂ ಆರೋಪಕ್ಕೆ ಸರ್ಕಾರದ ಸ್ಪಷ್ಟೀಕರಣ ಎಂಬ ಪಟ್ಟಿಯಲ್ಲಿ, ಬಸವಣ್ಣನವರನ್ನು ಕುರಿತು ನೀಡಿರುವ ವಿಷಯಾಂಶದಲ್ಲಿ ವಿವಾದಾತ್ಮಕ ಅಂಶಗಳಿವೆ ಎನ್ನುವ ಆರೋಪಕ್ಕೆ ಉತ್ತರವಾಗಿ, “ಹಿಂದಿನ ಪಠ್ಯಪುಸ್ತಕದಲ್ಲಿದ್ದ ಬಸವೇಶ್ವರ ಪಾಠ ಹಾಗೂ ಈಗ ಅಳವಡಿಸಿರುವ ಪಾಠ ಎರಡರಲ್ಲಿಯೂ ‘ವೀರಶೈವ ಧರ್ಮ’ ಎಂಬ ಉಲ್ಲೇಖವಿದೆ. ಎರಡೂ ಪಠ್ಯಪುಸ್ತಕದಲ್ಲಿ ಬಸವಣ್ಣನವರು ‘ಲಿಂಗದೀಕ್ಷೆ ಪಡೆದರು’ ಎಂಬ ಉಲ್ಲೇಖವಿದೆ” ಎಂದು ಹೇಳಿದೆ.

ಸರ್ಕಾರ ನೀಡಿರುವ ಲಿಖಿತ ಸ್ಪಷ್ಟೀಕರಣ

ಇದನ್ನೂ ಓದಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಕುರಿತು ಸಾಮಾನ್ಯವಾದ ಅಂಶಗಳಿವೆಯೆ?

  • ಒಂಬತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದ ‘ಬಸವೇಶ್ವರರು’ ಎಂಬ ಪಾಠದಲ್ಲಿ ‘320’ ಪದಗಳಿದ್ದವು. ಆದರೆ ಇದನ್ನು ತಿದ್ದಿರುವ ಚಕ್ರತೀರ್ಥ ಸಮಿತಿ, ಪಾಠವನ್ನು ‘238’ ಪದಗಳಿಗೆ ಪಾಠವನ್ನು ಇಳಿಸಿದೆ.
  • ಸರ್ಕಾರ ಸ್ಪಷ್ಟನೆ ನೀಡಿದಂತೆ  ‘ಶೈವಗುರುಗಳಿಂದ ಲಿಂಗ ದೀಕ್ಷೆ ಪಡೆದರು’ ಎಂಬ ಪದ ಹಳೆಯ ಪಠ್ಯದಲ್ಲಿ ಇದೆಯಾದರೂ, ಅದಕ್ಕಿಂತಲೂ ಮುಂಚೆ ಇದ್ದ, “ಬಸವೇಶ್ವರರು ತಮ್ಮ ಉಪನಯನದ ನಂತರ ಯಜ್ಞೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ ನಡೆದರು” ಎಂಬ ವಾಕ್ಯದ ‘ಯಜ್ಞೋಪವೀತವನ್ನು ಕಿತ್ತೆಸೆದು’ ಎಂಬ ಪದವನ್ನು ತೆಗೆಯಲಾಗಿದೆ.
  • ವೀರಶೈವ ಧರ್ಮವನ್ನು ಹಳೆಯ ಪಠ್ಯವು ವೀರಶೈವ ಸಿದ್ದಾಂತ ಎಂದು ಕರೆದರೆ, ಹೊಸ ಪಠ್ಯವು ವೀರಶೈವ ಮತ ಎಂದು ಕರೆದಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯ ಧಾರ್ಮಿಕ ಆಚರಣಾ ವಿಧಿವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು” ಎಂಬ ಇಡೀ ಭಾಗವನ್ನು ಹೊಸ ಪಠ್ಯದಲ್ಲಿ ಕತ್ತರಿಸಿ ತೆಗೆಯಲಾಗಿದೆ.
  • ಜೊತೆಗೆ, “ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು” ಎಂಬ ವಾಕ್ಯದ ಬದಲಿಗೆ, “ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು” ಎಂಬ ವಾಕ್ಯವನ್ನು ಬಳಸಲಾಗಿದೆ.
  • ಜೊತೆಗೆ, ಸಂಸ್ಕೃತ ಮತ್ತು ಕನ್ನಡಗಳನ್ನು ಕಲಿತು ತಮ್ಮ ಉಪನಯನವಾದ ನಂತರ ಕೂಡಲ ಸಂಗಮಕ್ಕೆ ನಡೆದರು’ ಎಂದು ಹೊಸ ಪಠ್ಯದಲ್ಲಿ ಸೇರಿಸಲಾಗಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ತಮ್ಮ ಇಡೀ ಜೀವಮಾನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ ಧರ್ಮದ ಪುನಶ್ಚೇತನಕ್ಕೆ ಟೊಂಕಕಟ್ಟಿದರು” ಎಂಬ ವಾಕ್ಯವನ್ನು ಕತ್ತರಿಸಲಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಹೇಳಿಕೆಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ: ಮುಖಾಮುಖಿ ಮಾತುಕತೆಗೆ ಒತ್ತಾಯ

  • ಹಳೆಯ ಪಠ್ಯದಲ್ಲಿ ಇದ್ದ, “‘ದೇಹವೇ ದೇಗುಲ’ ಎಂದು ಸಾರಿದ ಬಸವಣ್ಣನವರು ಈ ತತ್ವವನ್ನು ಅನುಷ್ಠಾನಕ್ಕೆ  ತರಲು ಪ್ರಯತ್ನಿಸಿದರು. ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ” ಎಂಬ ವಾಕ್ಯವನ್ನು ಕತ್ತರಿಸಲಾಗಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ಧಾರ್ಮಿಕ ಅಂಕುಡೊಂಕುಗಳನ್ನು ಚರ್ಚಿಸುತ್ತಿದ್ದರು ಹಾಗೂ ಅವುಗಳಿಗೆ ಚಿಕಿತ್ಸಕ ಸಂದೇಶಗಳ ಮೂಲಕ ಪರಿಹಾರವನ್ನು ಸೂಚಿಸುತ್ತಿದ್ದರು” ಎಂಬ ವಾಕ್ಯವನ್ನು ಕತ್ತರಿಸಿ, “ಅನೇಕ ವಚನಗಳ ಮೂಲಕ ವಚನಕಾರರು ಅಂದಿನ ಸಮಾಜದಲ್ಲಿ ಆಚರಣೆಯಲ್ಲಿದ್ದ ಲೋಪ ದೋಷಗಳನ್ನು ಎತ್ತಿತೋರಿಸಿ ಅರಿವು ಮೂಡಿಸಲು ಪ್ರಯತ್ನಿಸಿದರು” ಎಂದಯ ಬರೆಯಲಾಗಿದೆ. ಇದರಲ್ಲಿ ಧಾರ್ಮಿಕ ಅಂಕುಡೊಂಕು ಎಂಬ ಪದನ್ನು ಕತ್ತರಿಸಲಾಗಿದೆ.

  • ಹಳೆಯ ಪಠ್ಯದಲ್ಲಿ ಇದ್ದ, ‘‘ಶರಣರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು” ಎಂಬ ಪದವನ್ನು ಕತ್ತರಿಸಲಾಗಿದೆ.
  • ರೋಹಿತ್ ಚಕ್ರತೀರ್ಥ ಸಮಿತಿಯು, “ಮುಂದಿನ ಶತಮಾನಗಳಲ್ಲಿ ತಲೆ ಎತ್ತಿದ ಮಠಗಳು ಸಾಮಾಜಿಕ ಸುಧಾರಣೆ ಮತ್ತು ಶಿಕ್ಷಣಕ್ಕೂ ಬೆಂಬಲ ನೀಡುತ್ತಾ ಬಂದಿವೆ” ಎಂಬ ಹೊಸ ಪದಗಳನ್ನು ಸೇರಿಸಲಾಗಿದೆ.
  • ಹಳೆಯ ಪಠ್ಯದಕಲ್ಲಿ ಇದ್ದ, “ಒಟ್ಟಾರೆ ಸಮಾನತೆಯ ಆಶಯವನ್ನು ಸಿದ್ಧಾಂತವಾಗಿಸಿಕೊಂಡಿದ್ದ ಬಸವೇಶ್ವರರು ಮತ್ತು ವಚನಕಾರರು ಸಮಾಜ, ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ” ಎಂಬ ಪದವನ್ನು ಚಕ್ರತೀರ್ಥ ಸಮಿತಿ ಕತ್ತರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...