Homeಕರ್ನಾಟಕಪಾಕಿಸ್ತಾನ ಪರ ಘೋಷಣೆ ಕೂಗುವುದು 'ದೇಶದ್ರೋಹ' ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪಾಕಿಸ್ತಾನ ಪರ ಘೋಷಣೆ ಕೂಗುವುದು ‘ದೇಶದ್ರೋಹ’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಪಾಕಿಸ್ತಾನದ ಪರವಾಗಿ ಮಾತನಾಡುವುದು ತಪ್ಪು, ಅಂತಹ ಕ್ರಮಗಳು ದೇಶದ್ರೋಹಕ್ಕೆ ಸಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ‘ಯುದ್ಧದ ಅಗತ್ಯವಿಲ್ಲ’ ಎಂದು ಹೇಳಿದ್ದಕ್ಕಾಗಿ ಅವರು ವಿವಾದಕ್ಕೆ ಗುರಿಯಾದ ಕೆಲವೇ ದಿನಗಳ ನಂತರ ಅವರ ಹೇಳಿಕೆ ಬಂದಿದ್ದು, ಮಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂಬ ಆರೋಪ ಹೊರಿಸಿ ಯುಕನೊಬ್ಬನ್ನು ಹಿಂದುತ್ವ ಗುಂಪು ಹತ್ಯೆ ಮಾಡಿರುವ ಸಮಯದಲ್ಲೇ ಮತ್ತೊಮ್ಮೆ ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿದ್ದರಾಮಯ್ಯ, “ಮಂಗಳೂರಿನಲ್ಲಿ ನಡೆದ ಗುಂಪುಹತ್ಯೆ ಸಂಬಂಧ ಈಗಾಗಲೇ ಪೊಲೀಸರು ಹಲವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪ ಕೂಡ ಕೇಳಿಬರುತ್ತಿದೆ. ಪಾಕಿಸ್ತಾನವನ್ನು ವಹಿಸಿಕೊಂಡು ಮಾತನಾಡುವುದು ಅಥವಾ ಘೋಷಣೆ ಕೂಗುವುದು ಅಪರಾಧ. ಅಂಥವರನ್ನು ಶಿಕ್ಷಿಸಲು ಕಾನೂನು ವ್ಯವಸ್ಥೆ ಇದೆ. ಆದರೆ, ಯಾರೋ ಒಂದಷ್ಟು ಮಂದಿ ಕಾನೂನು ಕೈಗೆತ್ತಿಕೊಂಡು ಹಲ್ಲೆಗೆ ಮುಂದಾಗುವುದು ಅಥವಾ ಕೊಲೆಗೈಯ್ಯುವುದು ಕೂಡ ಅಪರಾಧವೆ. ಈ ಎರಡಕ್ಕೂ ನಾವು ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ಏಪ್ರಿಲ್ 27 ರಂದು, ಕೇರಳದ ವಯನಾಡಿನ ಪುಲ್ಪಲ್ಲಿ ಗ್ರಾಮದ ಮೂಲದ 23 ವರ್ಷದ ಅಶ್ರಫ್ ಮೇಲೆ ಮಂಗಳೂರಿನ ಹೊರವಲಯದಲ್ಲಿರುವ ಕುಡುಪು ಗ್ರಾಮದ ಭಟ್ರ ಕಲ್ಲುರ್ಟಿ ದೇವಸ್ಥಾನದ ಬಳಿ ಕೋಲುಗಳಿಂದ ಹಲ್ಲೆ ನಡೆಸಲಾಗಿತ್ತು. ಕ್ರಿಕೆಟ್ ಪಂದ್ಯದ ವೇಳೆ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾರೆಂದು ಆರೋಪಿಸಿ ಗುಂಪೊಂದು ಅವರನ್ನು ಹೊಡೆದು ಕೊಂದಿದೆ ಎಂದು ವರದಿಯಾಗಿದೆ. ಆಂತರಿಕ ರಕ್ತಸ್ರಾವ ಮತ್ತು ಆಘಾತದಿಂದ ಉಂಟಾದ ಗಾಯಗಳಿಂದಾಗಿ ಅಶ್ರಫ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 20 ಜನರನ್ನು ಬಂಧಿಸಲಾಗಿದೆ ಮತ್ತು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ದೃಢಪಡಿಸಿದ್ದಾರೆ. “ಬಂಧಿತರು ಮಾತ್ರ ಘೋಷಣೆಯ ಬಗ್ಗೆ ಹೇಳಿದ್ದಾರೆ. ಮೃತ ವ್ಯಕ್ತಿ ಮತ್ತು ಅವರ ಹಿನ್ನೆಲೆಯ ಬಗ್ಗೆ ಪೊಲೀಸರು ಇನ್ನಷ್ಟು ತಿಳಿದುಕೊಳ್ಳುತ್ತಿದ್ದಾರೆ. ತನಿಖೆಯನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗುತ್ತಿದೆ” ಎಂದು ಅವರು ಹೇಳಿದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಮತ್ತು ಅದನ್ನು ಪಕ್ಕಕ್ಕೆ ತಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ.

ಕುಡುಪು ಗುಂಪು ಹತ್ಯೆ ಪ್ರಕರಣ: ವಯನಾಡ್ ಮೂಲದ ಮೃತ ವ್ಯಕ್ತಿಯ ಶವ ಕೊಂಡೊಯ್ದ ಕುಟುಂಬಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...