Homeಕರ್ನಾಟಕಮುಖ್ಯಮಂತ್ರಿ ಯಡಿಯೂರಪ್ಪ ಪ್ರಶ್ನಾತೀತ ನಾಯಕ - ಸಚಿವ ಸೋಮಣ್ಣ

ಮುಖ್ಯಮಂತ್ರಿ ಯಡಿಯೂರಪ್ಪ ಪ್ರಶ್ನಾತೀತ ನಾಯಕ – ಸಚಿವ ಸೋಮಣ್ಣ

ಇದು ಪಕ್ಷದ ಹೈಕಮಾಂಡ್‌ಗೂ ಕೂಡ ಇದು ಗೊತ್ತಿದೆ. ಯತ್ನಾಳ್ ಅವರಿಗೆ ಮತ್ತೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ, ಇಂತಹ ಹೇಳಿಕೆಗಳನ್ನು ನೀಡುವವರ ಬಗ್ಗೆ ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ

- Advertisement -
- Advertisement -

ಸಿಎಂ ಬದಲಾವಣೆ ಹೇಳಿಕೆ ಹಳೆಯದು. ಪುನರಾವರ್ತನೆ ಮಾಡಿದರೆ ವ್ಯಕ್ತಿ ಗಾಂಭೀರ್ಯತೆ ಕಳೆದುಕೊಳ್ಳುತ್ತಾರೆ. ಪದೇ ಪದೇ ಹೇಳುವುದು ಒಳ್ಳೆಯ ಲಕ್ಷಣವಲ್ಲ ಎಂದು ಸಚಿವ ವಿ.ಸೋಮಣ್ಣ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಟಾಂಗ್ ನೀಡಿದ್ದಾರೆ.

ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಪ್ರಚಾರ ನಡೆಸಲು ತೆರಳುವುದಕ್ಕೂ ಮೊದಲು ಸಿದ್ದಗಂಗಾ ಮಠದಲ್ಲಿ ಸಿದ್ದಲಿಂಗ ಸ್ವಾಮೀಜಿಯನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಹೇಳಿದ್ದನ್ನೇ ಯಾರೂ ಹೇಳಬಾರದು. ಯತ್ನಾಳ್ ಅವರಿಗೆ ಮತ್ತೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಬಿ.ಎಸ್.ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ. ಪಕ್ಷದ ಹೈಕಮಾಂಡ್‌ಗೂ ಕೂಡ ಇದು ಗೊತ್ತಿದೆ. ಇಂತಹ ಹೇಳಿಕೆಗಳನ್ನು ನೀಡುವವರ ಬಗ್ಗೆ ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಯತ್ನಾಳ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಲಾಗಿದೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.

ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಸಿಎಂ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿಮಾಡಿಸಿದರೆ ಏನಾಗುತ್ತದೆ ಎಂಬ ಸಂದೇಶ ಪಕ್ಷದ ವರಿಷ್ಠರಿಗೆ ಹೋಗಿದೆ. ಹಾಗಾಗಿ ವರಿಷ್ಠರು ಬಿ.ಎಸ್.ಯಡಿಯೂರಪ್ಪ ಬಗ್ಗೆ ಕಾಳಜಿ ವಹಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೂ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಬಿಎಸ್.ವೈ ಶಕ್ತಿ ಸಾಮರ್ಥ್ಯ ಎಲ್ಲರಿಗೂ ಗೊತ್ತಿದೆ. ಹಿಂದೆ ಪ್ರವಾಹ ಬಂದಾಗ ಬೆಟ್ಟಗುಡ್ಡ ಹತ್ತಿಇಳಿದವರು ಬಿಎಸ್.ವೈ. ಎಂಥ ಕೆಟ್ಟ ಪರಿಸ್ಥಿತಿಯಲ್ಲೂ ಸಮರ್ಥವಾಗಿ ನಿಭಾಯಿಸಿದ್ದಾರೆ. ನಮ್ಮ ಸಿಎಂ ಮತ್ತು ಪಕ್ಷ ಜನರ ನಡುವೆ ಕೆಲಸ ಮಾಡುತ್ತದೆ. ಇದು ಜನರಿಗೂ ಗೊತ್ತಿದೆ ಎಂದು ಶ್ಲಾಘಿಸಿದರು.

ಶಿರಾದಲ್ಲಿ ಅನಿರೀಕ್ಷಿತವಾಗಿ ಉಪಚುನಾವಣೆ ಎದುರಾಗಿದೆ. ಸಧ್ಯದ ಸಂದಿಗ್ದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನ ನಿಯಂತ್ರಣಕ್ಕಾಗಿ ದುಡಿಯುತ್ತಿದ್ದಾರೆ. ನಮ್ಮ ಸರ್ಕಾರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಅಭಿವೃದ್ಧಿಯತ್ತ ಜನರ ಒಲವಿದೆ. ಹಾಗಾಗಿ ಆರ್.ಆರ್.ನಗರ ಮತ್ತು ಶಿರಾ ಮತ್ತು ಪದವೀಧರ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಸಾಮಾನ್ಯ ಜನರ ನೋವನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿದೆ. ಜನರ ಸಮಸ್ಯೆ ಗಳನ್ನು ಆಲಿಸಿ ಪರಿಹಾರ ಮಾಡುತ್ತಿದೆ. ಜನರೂ ನಮ್ಮ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡಿದ್ದಾರೆ. ನಮ್ಮದು ಅಭಿವೃದ್ಧಿಯ ಸರ್ಕಾರ ಎಂದು ಸರ್ಕಾರದ ನಡೆಗಳನ್ನು ಬಲವಾಗಿ ಸಮರ್ಥಿಸಿಕೊಂಡರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

0
ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ...