Homeಕರ್ನಾಟಕಚಿಕ್ಕಬಳ್ಳಾಪುರ: ತಮ್ಮ ಜಮೀನಿನಲ್ಲಿ ಆಟವಾಡಿದ ದಲಿತ ಬಾಲಕನನ್ನು ಕರೆಂಟ್ ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

ಚಿಕ್ಕಬಳ್ಳಾಪುರ: ತಮ್ಮ ಜಮೀನಿನಲ್ಲಿ ಆಟವಾಡಿದ ದಲಿತ ಬಾಲಕನನ್ನು ಕರೆಂಟ್ ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

- Advertisement -
- Advertisement -

ಮಕ್ಕಳೊಂದಿಗೆ ಆಟವಾಡುತ್ತಾ ಸವರ್ಣೀಯರ ಜಮೀನಿಗೆ ತೆರಳಿದ್ದಕ್ಕೆ ದಲಿತ ಬಾಲಕನನ್ನು ಹಿಡಿದು ಕರೆಂಟ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಪದೇನಹಳ್ಳಿಯಲ್ಲಿ ಗುರುವಾರ ಸಂಜೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ತಮ್ಮ ಮಗನಿಗೆ ಹಲ್ಲೆ ನಡೆಸುವಾಗ ತಡೆಯಲು ಹೋದ ಬಾಲಕನ ತಾಯಿಗೂ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂವರು ಆರೋಪಿಗಳನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ‘ಅಂಬೇಡ್ಕರ್‌ ಸೇವಾ ಸಮಿತಿ-ಕರ್ನಾಟಕ’ದ ಸಂಸ್ಥಾಪಕರಾದ ಸಂದೇಶ್‌‌ ಅವರು,“ಬಾಲಕನ ಮೇಲೆ ಸವರ್ಣೀಯರು ಹಲ್ಲೆ ಮಾಡುತ್ತಿರುವುದು ಇದುವೆ ಮೊದಲ ಬಾರಿ ಏನೂ ಅಲ್ಲ. ಈ ಹಿಂದೆಯು ಅವರ ಮೇಲೆ ದಾಳಿಗಳು ನಡೆದಿವೆ” ಎಂದು ಹೇಳಿದ್ದಾರೆ.

‘‘ಸಂಸ್ರಸ್ತ ದಲಿತ ಕುಟುಂಬದ ಜಮೀನು ಸವರ್ಣೀಯರ ಜಮೀನಿನ ಪಕ್ಕ ಇರುವುದರಿಂದ ಕಿರುಕುಳ ನಡೆಯುತ್ತಲೆ ಇತ್ತು. ಕುಟುಂಬಕ್ಕೆ ಸವರ್ಣೀಯರು ಹಿಂದಿನಿಂದಲೂ ಕೊಲೆ ಬೆದರಿಕೆ ಹಾಕುತ್ತಲೇ ಬಂದಿದ್ದಾರೆ ಎಂದು ತಿಳಿದು ಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಭಾವಚಿತ್ರ

ಸಂತ್ರಸ್ತ ಬಾಲಕನ ತಾಯಿ ಮಾತನಾಡಿ,“ನಮ್ಮ ಹುಡುಗನನ್ನು ಬಿಡಿಸಿಕೊಳ್ಳಲು ಹೋಗಿದ್ದೆ. ಈ ವೇಳೆ ನನಗೂ ಚಾಕುವಿನಿಂದ ಇರಿದಿದ್ದಾರೆ” ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಚಿಂತಾಮಣಿ ಗ್ರಾಮಾಂತರ ಠಾಣೆಯ ಪಿಎಸ್‌ಐ ರೇಣುಕಯ್ಯ,“ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಎಸ್‌‌ಸಿ ಸಮುದಾಯದ ಬಾಲಕನನ್ನು ಹಿಡಿದು ಕಟ್ಟಿಹಾಕಿ ಥಳಿಸಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದ ಬಾಲಕನ ತಂದೆ-ತಾಯಿಗೂ ಹಲ್ಲೆ ನಡೆಸಿದ್ದಾರೆ” ಎಂದು ಹೇಳಿದರು.

“ಹಲ್ಲೆ ನಡೆಸಿರುವುದು ಸವರ್ಣೀಯ ಸಮುದಾಯದವರಾಗಿದ್ದು, ನಾಗರಾಜ, ನಾರಾಯಣ ಸ್ವಾಮಿ ಸೇರಿದಂತೆ ಒಟ್ಟು ಮೂವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ-21; ಹತ್ರಾಸ್ ಫೈಲ್: ಬಿಜೆಪಿ ಆಡಳಿತದ ’ಬೇಟಿ ಬಚಾವೋ’ಗೊಂದು ಉದಾಹರಣೆ

ಬಾಲಕನ ತಮ್ಮ ಸಣ್ಣ ಮಗುವಿನ ಒಡವೆಗಳನ್ನು ಕಳ್ಳತನ ಮಾಡಿದ್ದಾರೆ ಎಂದು ದಲಿತ ಕುಟುಂಬದ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐ ರೇಣುಕಯ್ಯ ನಾನುಗೌರಿ.ಕಾಂಗೆ ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...