ಚಿಕ್ಕಬಳ್ಳಾಪುರ ಸ್ಪೋಟ- ಪ್ರಧಾನಿ ಮೋದಿ ಸೇರಿದಂತೆ ಹಲವರ ಸಂತಾಪ

ಮಂಗಳವಾರ ಚಿಕ್ಕಬಳ್ಳಾಪುರದ ಕ್ರಷರ್‌ಗೆ ಅಕ್ರಮವಾಗಿ ಸಾಗಿಸುತ್ತಿದ್ದ ಜಿಲೆಟಿನ್ ಸ್ಪೋಟಗೊಂಡು ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌ ಘಟನೆಗೆ ಸರ್ಕಾರದ ಅಸಡ್ಡೆಯೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ, “ಕರ್ನಾಟಕದ ಚಿಕ್ಕಬಲ್ಲಾಪುರದಲ್ಲಿ ಸಂಭವಿಸಿದ ಅಪಘಾತದಿಂದಾದ ಪ್ರಾಣಹಾನಿ ನೋವು ತಂದಿದೆ. ದುಃಖಿತ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸುತ್ತಿದ್ದು, ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ, “ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರಿ ಸ್ಫೋಟ- 6 ಕಾರ್ಮಿಕರು ಸಾವು; ಮೂವರು ಗಂಭೀರ

ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಕೆ. ಸುಧಾಕರ್‌, “ಜಿಲೆಟಿನ್ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಇದು ಅತ್ಯಂತ ವಿಷಾದಕರ ಘಟನೆಯಾಗಿದ್ದು, ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯ ಜೊತೆ ಘಟನಾ ಸ್ಥಳದಿಂದಲೇ ದೂರವಾಣಿ ಮೂಲಕ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಕಲ್ಲುಗಣಿಯಲ್ಲಿನ ಸ್ಫೋಟಕ್ಕೆ ಯಡಿಯೂರಪ್ಪ, ಈಶ್ವರಪ್ಪನವರೇ ಕಾರಣ 

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, “ಸ್ಫೋಟದಲ್ಲಿ 6 ಅಮಾಯಕ ಜೀವಗಳ ಬಲಿಗೆ ರಾಜ್ಯ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ. ಒಂದೇ ತಿಂಗಳಲ್ಲಿ ಎರಡನೇ ಬಾರಿ ಇಂತಹ ದುರ್ಘಟನೆ ನಡೆದಿದ್ದು, ಆಂತರಿಕ ಸಮಸ್ಯೆಯಲ್ಲಿ ಯಡಿಯೂರಪ್ಪ ಸರ್ಕಾರ ಮೈಮರೆತಿದೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ತಪ್ಪಿತಸ್ಥರ ವಿರುದ್ಧ ನಿಜವಾಗಿಯೂ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಸಚಿವ ಮುಗುಗೇಶ ನಿರಾಣಿ ಅವರು, “ಶಿವಮೊಗ್ಗ ಸ್ಫೋಟದ ನಂತರ ಇಂತಹ ಘಟನೆ ನಡೆದಿರುವುದು ತುಂಬಾ ದುರದೃಷ್ಟಕರ. ಸರ್ಕಾರ ಸೂಕ್ತ ತನಿಖೆ ನಡೆಸಿ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಇದರಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರಿಗುಸುತ್ತೇವೆ. ಎಷ್ಟೇ ಪ್ರಭಾವಿಗಳಗಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಳ್ಳು ಹೇಳಿದ ಬಾಬಾ ರಾಮ್‌ದೇವ್! – ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

ಚಾಮರಾಜ ಪೇಟೆ ಶಾಸಕ ಜಮೀರ್‌ ಅಹ್ಮರ್‌ ಅವರು, “ಜಿಲೆಟಿನ್ ಸ್ಪೋಟಗೊಂಡು 6 ಮಂದಿ ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here