Homeಕರ್ನಾಟಕಚಿಕ್ಕಬಳ್ಳಾಪುರ: ಆದಿಯೋಗಿ ಕಾಮಗಾರಿಗೆ ತಡೆ ನೀಡಿದ ರಾಜ್ಯ ಹೈಕೋರ್ಟ್‌

ಚಿಕ್ಕಬಳ್ಳಾಪುರ: ಆದಿಯೋಗಿ ಕಾಮಗಾರಿಗೆ ತಡೆ ನೀಡಿದ ರಾಜ್ಯ ಹೈಕೋರ್ಟ್‌

ಪ್ರತಿಮೆಯನ್ನು ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ ಅನಾವರಣಗೊಳಿಸಲಿದ್ದರು ಹಾಗೂ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಕೂಡಾ ಪಾಲ್ಗೊಳ್ಳಲಿದ್ದರು

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದ ಆವಲಗುರ್ಕಿ ಬಳಿ ನಿರ್ಮಾಣವಾಗುತ್ತಿರುವ ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ನಡೆಸಬಾರದು ಎಂದು ರಾಜ್ಯ ಹೈಕೋರ್ಟ್‌ ಆದೇಶಿಸಿದೆ. ಈ ಪ್ರತಿಮೆಯನ್ನು ಉಪ ರಾಷ್ಟ್ರಪತಿ ಜಗದೀಪ್ ಧನಕರ್‌‌ ಅವರು ಜನವರಿ 15 ರಂದು ಉದ್ಘಾಟಿಸಲಿದ್ದರು. ಪ್ರತಿಮೆ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರವು ಇಶಾ ಯೋಗ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿದ್ದು, ಇದು ರೈತರ ಬದುಕಿಗೆ ಮತ್ತು ಪರಿಸರಕ್ಕೆ ಹಾನಿ ಮಾಡುತ್ತದೆ ಎಂದು ಆರೋಪಿಸಿ ಜಿಲ್ಲೆಯ ಐವರು ರೈತರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಂದಿಬೆಟ್ಟಕ್ಕೆ ಐತಿಹಾಸಿಕ ಮಹತ್ವವಿದ್ದು, ಇಶಾ ಯೋಗ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಕೆರೆ, ಕುಂಟೆ, ಕಂಟಿಗಳು ಹಾಗೂ ಗೋಮಾಳ ವ್ಯಾಪ್ತಿಯ ಜಮೀನನ್ನು ಮಂಜೂರು ಮಾಡಿದೆ. ಇದರ ಸುತ್ತಮುತ್ತಲಿನ ಜಮೀನನ್ನು ಪರಭಾರೆ ಮಾಡಿರುವ ಕಾರಣ ರೈತರ ಬದುಕಿಗೆ ಹಾಗೂ ಪರಿಸರಕ್ಕೆ ಭರಿಸಲಾಗದ ಹಾನಿಯಾಗಲಿದೆ. ಪರಿಸರದ ಸೂಕ್ಷ್ಮ ವಲಯಕ್ಕೆ ಒಳಪಡುವ ಪ್ರದೇಶವನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಕಾನೂನು ಬಾಹಿರವಾಗಿದ್ದು, ಇಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಆದೇಶಿಸಬೇಕು” ಎಂದು ರೈತರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ರೈತರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಒಕ್ಕೂಟ ಸರ್ಕಾರದ ಪರಿಸರ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇಶಾ ಯೋಗ ಕೇಂದ್ರ ಸೇರಿದಂತೆ ಒಟ್ಟು ಹದಿನಾರು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ವಿಚಾರಣೆಯನ್ನು ಮುಂದೂಡಿದೆ.

ಇಶಾ ಫೌಂಡೇಶನ್‌ ನಿರ್ಮಿಸಿರುವ 112 ಅಡಿ ಎತ್ತರದ ಪ್ರತಿಮೆಯನ್ನು ಜನವರಿ 15 ರಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಅನಾವರಣಗೊಳಿಸಲಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಪಾಲ್ಗೊಳ್ಳಲಿದ್ದರು. ಈ ಪ್ರತಿಮೆಯು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದ ನಿಖರವಾದ ಪ್ರತಿರೂಪವಾಗಿದೆ ಎಂದು ಫೌಂಡೇಶನ್ ಹೇಳಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...