Homeಕರ್ನಾಟಕಚಿಕ್ಕಬಳ್ಳಾಪುರ: ವೇದ ಗಣಿತ ತರಬೇತಿಗೆ ತಾತ್ಕಾಲಿಕ ತಡೆ

ಚಿಕ್ಕಬಳ್ಳಾಪುರ: ವೇದ ಗಣಿತ ತರಬೇತಿಗೆ ತಾತ್ಕಾಲಿಕ ತಡೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಪ್ರತಿ ಗ್ರಾ.ಪಂ ವ್ಯಾಪ್ತಿಯ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದ ಗಣಿತ ಕಲಿಸುವ ಯೋಜನೆಯನ್ನು ತಾತ್ಕಾಲಿಕ ತಡೆಹಿಡಿಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಘುನಾಥರೆಡ್ಡಿಯವರು ಸೂಚಿಸಿದ್ದಾರೆ.

ಈ ಮೊದಲು ಪ್ರತಿ ಗ್ರಾಮ ಪಂಚಾಯ್ತಿವಾರು ಗಣಿತ ಶಿಕ್ಷಕರಿಗೆ ವೇದ ಗಣಿತ ಪಾಠ ಮಾಡಲು ಸೆಪ್ಟಂಬರ್ 15ರಂದು ತರಬೇತಿ ನೀಡಲಾಗಿತ್ತು. ಆದರೆ ಇಲಾಖೆಯ ಮೇಲಾಧಿಕಾಇಗಳ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ವೇದ ಗಣಿತ ತರಗತಿಗಳನ್ನು ತಡೆಹಿಡಿಯಲು ಸೂಚಿಸಲಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ರಿಂದ 8ನೇ ತರಗತಿವರೆಗಿನ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಿತ ವೇದ ಗಣಿತ ತರಬೇತಿ ನೀಡುವ ಜವಾಬ್ದಾರಿಯನ್ನು ಹಿರಿಯೂರಿನ ಎ.ವಿ.ಎಂ ಅಕಾಡೆಮಿಗೆ ವಹಿಸಲಾಗಿದೆ. ಆ ಸಂಸ್ಥೆಯು ಸರ್ಕಾರಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಅವರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ. ಎ.ವಿ.ಎಂ ಸಂಸ್ಥೆಗೆ ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದ್ದು ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.

ಇನ್ನು ಶಿಕ್ಷಕರಿಗೆ ತರಬೇತಿ, ಕಲಿಕಾ ಕಿಟ್ ಮತ್ತು ಸಮವಸ್ತ್ರ ನೀಡುವ ಸರ್ಕಾರೇತರ ಸಂಸ್ಥೆಗೆ ಪ್ರತಿ ಗ್ರಾಮ ಪಂಚಾಯ್ತಿಗಳು ಸಹ ತಲಾ ಒಂದೊಂದು ಲಕ್ಷ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಇನ್ನೊಂದೆಡೆ ಈ ವೇದಗಣಿತ ಕಲಿಕೆಯಿಂದ ಮಕ್ಕಳು ನಿಜವಾದ ಗಣಿತ ಕಲಿಯದಿರಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. “ವೇದಗಣಿತ ಕಲಿಕೆಯಿಂದ ಏನೂ ಉಪಯೋಗವಿಲ್ಲ. ಅದರಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದ ವಿದ್ಯಾರ್ಥಿಗಳಿಗೆ ಶಾರ್ಟ್‌ಕಟ್ ವಿಧಾನದಲ್ಲಿ ಗುಣಾಕಾರ ಮತ್ತು ಭಾಗಕಾರವನ್ನು ಹೇಳಿಕೊಡಲಾಗುತ್ತದೆ. ಆದರೆ ಅದರಿಂದ ಗಣಿತಕ್ಕೆ ಬೇಕಾದ ತಾರ್ಕಿಕ ಚಿಂತನೆಗಳು ಅಭಿವೃದ್ಧಿಯಾಗುವುದಿಲ್ಲ” ಎಂದು ಬೆಂಗಳೂರಿನ ಭಾರತೀಯ ವಿದ್ಯಾಭವನದ ಗಾಂಧಿ ಸೆಂಟರ್ ಅಫ್ ಸೈನ್ಸ್ ಅಂಡ್ ಹ್ಯೂಮನ್ ವ್ಯಾಲ್ಯೂಸ್ ವಿಭಾಗದ ಗೌರವ ನಿರ್ದೇಶಕರೂ ಹಾಗೂ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯಲ್ಲಿ ಗೌರವ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ಬಾಲಚಂದ್ರ ರಾವ್ ರವರು ಅಭಿಪ್ರಾಯಪಟ್ಟಿದ್ದಾರೆ.

ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ಮುಂಬೈನ ಗಣಿತಶಾಸ್ತ್ರದ ಪ್ರಾಧ್ಯಾಪಕರಾದ ಎಸ್.ಜಿ.ದಾನಿಯವರು ವೇದಗಣಿತ ಎಂದು ಕರೆಯುವುದನ್ನೆ ವಿರೋಧಿಸುತ್ತಾರೆ. ಅದು ವೇದ ಕಾಲದ್ದು ಅಲ್ಲ ಮತ್ತು ಗಣಿತವೂ ಅಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ. “ವೇದಗಣಿತ ಎಂಬ ಪುಸ್ತಕದಲ್ಲಿ ಬಳಸಲಾದ ವಿಧಾನಗಳು ಪ್ರಾಚೀನ ಕಾಲದ ಅಂಕಗಣಿತದ ತಂತ್ರಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಪುಸ್ತಕದಲ್ಲಿನ ಅಂಕಗಣಿತದ ತಂತ್ರಗಳಲ್ಲಿ ಬಳಸಲಾದ ಸಂಕೇತದಿಂದ ಸ್ಪಷ್ಟವಾಗುತ್ತದೆ. ಪ್ರಪಂಚದ ಯಾವುದೇ ಶಾಲೆಗಳಲ್ಲಿಯೂ ಈ ಗಣಿತವನ್ನು ಕಲಿಸುತ್ತಿಲ್ಲ” ಎಂಬುದು ಅವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...