Homeಕರ್ನಾಟಕಚಿಕ್ಕಬಳ್ಳಾಪುರ: ಮೂರನೇ ಮಗುವೂ ಹೆಣ್ಣು; ಬಲವಂತದ ಗರ್ಭಪಾತ: ಮಹಿಳೆ ಸಾವು!

ಚಿಕ್ಕಬಳ್ಳಾಪುರ: ಮೂರನೇ ಮಗುವೂ ಹೆಣ್ಣು; ಬಲವಂತದ ಗರ್ಭಪಾತ: ಮಹಿಳೆ ಸಾವು!

ಮೂರನೇ ಮಗುವೂ ಹೆಣ್ಣಾದರೆ ಎಂಬ ಕಾರಣಕ್ಕೆ ಅಕ್ರಮವಾಗಿ ಲಿಂಗಪತ್ತೆ ಮಾಡಿಸಿದ್ದರು. ಅದರಲ್ಲಿ ಮೂರನೆಯದೂ ಹೆಣ್ಣುಮಗು ಎಂದು ತಿಳಿದಾಗ ಬಲವಂತವಾಗಿ ಗರ್ಭಪಾತ ಮಾಡಿಸಿದ್ದರು

- Advertisement -
- Advertisement -

ಗರ್ಭಪಾತಕ್ಕೆ ಒಳಗಾದ 28 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು, ಮೂರನೆಯ ಮಗುವೂ ಹೆಣ್ಣು ಎಂಬ ಕಾರಣಕ್ಕೆ ಬಲವಂತ ಗರ್ಭಪಾತ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬಾಗೆಪಲ್ಲಿಯ ಪೋಲವರಪಲ್ಲಿ ಗ್ರಾಮದ ನಿವಾಸಿ ಶ್ರೀಕನ್ಯಾ ಅವರು 2014 ರಲ್ಲಿ ಕೊಥಪಲ್ಲಿ ಗ್ರಾಮದ ನಿವಾಸಿ 38 ವರ್ಷದ ಸೋಮಶೇಖರ್ ಅವರನ್ನು ವಿವಾಹವಾಗಿದ್ದರು. ನಂತರ ಇಬ್ಬರು ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಅಕೆಯ ಗಂಡನ ಕುಟುಂಬದವರು ಗಂಡು ಮಗುವನ್ನು ಬಯಸಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ಮಹಿಳೆಗೆ ಎರಡು ಹೆಣ್ಣು ಮಗು ಜನಿಸಿತ್ತು. ಆದರೆ ಅಕೆಯ ಗಂಡನಿಗೆ ಗಂಡು ಮಗುವಿನ ಮೇಲೆ ವ್ಯಾಮೋಹವಿತ್ತು. ಹಾಗಾಗಿ ಮೂರನೇ ಮಗುವೂ ಹೆಣ್ಣಾದರೆ ಎಂಬ ಕಾರಣಕ್ಕೆ ಅಕ್ರಮವಾಗಿ ಲಿಂಗಪತ್ತೆ ಮಾಡಿಸಿದ್ದರು. ಅದರಲ್ಲಿ ಮೂರನೆಯದೂ ಹೆಣ್ಣುಮಗು ಎಂದು ತಿಳಿದಾಗ ಬಲವಂತವಾಗಿ ಗರ್ಭಪಾತ ಮಾಡಿಸಿದ್ದರು. ಇದರ ನಂತರ ಮಹಿಳೆಯ ಆರೋಗ್ಯ ದಿನೇ-ದಿನೇ ಹದಗೆಟ್ಟು ಕೊನೆಗೆ ಸಾವನ್ನಪ್ಪಿದಳು” ಎಂದು ತನಿಖಾಧಿಕಾರಿ ಹೇಳಿದರು.

ಇದನ್ನೂ ಓದಿ: ಶ್ವೇತಭವನ ಕಚೇರಿಯ ಮೊದಲ ಮಹಿಳೆ ನಾನಾಗಿರಬಹುದು, ಆದರೆ ಕೊನೆಯವಳಲ್ಲ: ಕಮಲಾ ಹ್ಯಾರಿಸ್

ಘಟನೆಯ ನಂತರ, ಶ್ರೀಕನ್ಯಾ ಅವರ ತಂದೆ ಶ್ರೀನಿವಾಸ್ ಬಾಗೆಪಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆಯಲ್ಲಿ ಬಲಿಪಶುವಿನ ಸ್ವಂತ ತಾಯಿ ಮತ್ತು ಸಹೋದರ ಗರ್ಭಪಾತ ಮಾಡಿಸಿದ್ದರು ಎಂದು ತಿಳಿದುಬಂದಿದೆ.

ಕೇಂದ್ರ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸೆಮಂತ್ ಕುಮಾರ್ ಸಿಂಗ್ ಮಾತನಾಡಿ, “ವಿವರವಾದ ತನಿಖೆಗೆ ಆದೇಶಿಸಲಾಗಿದ್ದು, ಈ ಘೋರ ಅಪರಾಧದಲ್ಲಿ ಭಾಗಿಯಾಗಿರುವ ಎಲ್ಲರನ್ನು ಬಂಧಿಸಲಾಗುವುದು. ಪ್ರಸ್ತುತ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಹೇಳಿದರು.


ಇದನ್ನೂ ಓದಿ: ಹರಿಯಾಣ: ದಲಿತ ಮಹಿಳೆ, ಅಪ್ರಾಪ್ತೆ ಮೇಲೆ ಕಸ್ಟಡಿಯಲ್ಲಿಯೇ ಸಾಮೂಹಿಕ ಅತ್ಯಾಚಾರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...