Homeಕರ್ನಾಟಕಚಿಕ್ಕಮಗಳೂರು: ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ; ಹೆಸರು ಬರೆದಿಟ್ಟು ಯುವತಿ ಸಾವಿಗೆ ಶರಣು

ಚಿಕ್ಕಮಗಳೂರು: ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ; ಹೆಸರು ಬರೆದಿಟ್ಟು ಯುವತಿ ಸಾವಿಗೆ ಶರಣು

- Advertisement -
- Advertisement -

ಬಿಜೆಪಿ ಕಾರ್ಯಕರ್ತನ ಹೆಸರು ಬರೆದಿಟ್ಟು ಹದಿನೇಳು ವರ್ಷ ವಯಸ್ಸಿನ ಯುವತಿ ಸಾವಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಜೋಗಿಕುಂಬ್ರಿ ಗ್ರಾಮದಲ್ಲಿ ವರದಿಯಾಗಿದೆ. ಆದರೆ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದರೆಂದು ವರದಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ದೀಪ್ತಿ (17) ಆತ್ಮಹತ್ಯೆ ಪ್ರಕರಣ ಸಂಬಂಧಪಟ್ಟಂತೆ ಬಿಜೆಪಿ ಕಾರ್ಯಕರ್ತನ ವಿರುದ್ದ ದೂರು ದಾಖಲಿಸಲು ಕುದುರೆಮುಖ ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಯುವತಿಯ ಪೋಷಕರು ದೂರಿದ್ದಾರೆ.

‘ಬಿಜೆಪಿ ಕಾರ್ಯಕರ್ತ ಹಿತೇಶ್‌ ನನ್ನನ್ನು ಪ್ರೀತಿಸಿ ವಂಚಿಸಿದ್ದಾನೆ’ ಎಂದು ಡೆತ್‌ನೋಟ್‌ ಬರೆದು ಆತ್ಮಹತ್ಯೆಗೆ ಶರಣಾಗಿದ್ದರು. ಜನವರಿ 10ರಂದು ಮನೆಯಲ್ಲಿದ್ದ ಕಳೆನಾಶಕ ಸೇವಿಸಿ ದೀಪ್ತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜನವರಿ 14ರಂದು ಯುವತಿ ಸಾವನ್ನಪ್ಪಿದ್ದಾಳೆ. ಕಳಸ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.

ಸಾಯುವ ಮುನ್ನ ಬರೆದ ಡೆತ್‌ನೋಟ್‌ನಲ್ಲಿ ‘ತನ್ನ ಸಾವಿಗೆ ಹಿತೇಶ್‌ ಕಾರಣ’ ಎಂದು ಬರೆದಿದ್ದರು. ದೀಪ್ತಿ ಪೋಷಕರು ಹಿತೇಶ್‌ ಮೇಲೆ ದೂರು ದಾಖಲಿಸಲು ಕುದುರೆಮುಖ ಪೊಲೀಸ್‌ ಠಾಣೆಗೆ ಹೋಗಿದ್ದು, ದೂರು ದಾಖಲಿಸಿಕೊಳ್ಳಲು ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.

“ದೂರು ಸ್ವೀಕರಿಸದ ಪೊಲೀಸರನ್ನು ಎಸ್‌ಪಿ ತರಾಟೆಗೆ ತೆಗೆದುಕೊಂಡಿದ್ದು, ತದನಂತರ ದೂರು ಸ್ವೀಕರಿಸಿದ್ದಾರೆ. ಆದರೆ, ಇನ್ನೂ ಆರೋಪಿಯನ್ನು ಬಂಧಿಸಿಲ್ಲ” ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಪಿ ಹಿತೇಶ್‌ ಬಿಜೆಪಿ ಹಾಗೂ ಬಜರಂಗದಳದಲ್ಲಿ ಸಕ್ರೀಯ ಕಾರ್ಯಕರ್ತನಾಗಿದ್ದ. ದೀಪ್ತಿ ಹಾಗೂ ಆಕೆಯ ಪ್ರಿಯಕರ ಹಿತೇಶ್‌ ಒಂದೇ ಸಮುದಾಯದವರಾಗಿದ್ದು, ಪರಸ್ಪರ ಪರಿಚಯಸ್ಕರಾಗಿದ್ದರು. ಪರಿಚಯ ಪ್ರೀತಿಗೆ ತಿರುಗಿದ್ದು, ಇಬ್ಬರು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಜಗಳ ಆಗಿದ್ದು, ಈ ವೇಳೆ ಹಿತೇಶ್ ಪ್ರೀತಿಯನ್ನು ನಿರಾಕರಿಸಿದ್ದಾನೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ದೀಪ್ತಿಯ ತಂದೆ ಚನ್ನೇಗೌಡ ಅವರು ಶನಿವಾರ ಕುದುರೆಮುಖ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹಿತೇಶ್ ಎಂಬ ಯುವಕ ತನ್ನ ಮಗಳನ್ನು ಪ್ರೀತಿ ಮಾಡುವುದಾಗಿ ಹೇಳಿ ನಂತರ ವಂಚನೆ ಮಾಡಿದ್ದು, ಇದರಿಂದ ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೀಪ್ತಿ ವಿಷ ಸೇವನೆಗೂ ಮುನ್ನ ತನ್ನ ಮನೆಯಲ್ಲಿ ಡೆತ್‌ನೋಟ್ ಬರೆದಿಟ್ಟಿರುವುದಾಗಿ ಕುಟುಂಬಸ್ತರ ಬಳಿ ತಿಳಿಸಿದ್ದಾಳೆ. ತನ್ನ ಮಗಳ ಸಾವಿಗೆ ಕಾರಣನಾದ ಹಿತೇಶ್‌ನನ್ನು ಬಂಧಿಸಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...