Homeಕರ್ನಾಟಕಚಿಕ್ಕಮಗಳೂರು | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ತಾಯಿ ಸೇರಿ ನಾಲ್ವರು ದೋಷಿ ಎಂದ ಕೋರ್ಟ್‌

ಚಿಕ್ಕಮಗಳೂರು | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ತಾಯಿ ಸೇರಿ ನಾಲ್ವರು ದೋಷಿ ಎಂದ ಕೋರ್ಟ್‌

ಪ್ರಕರಣದ 53 ಆರೋಪಿಗಳ ಪೈಕಿ 49 ಜನರು ಖುಲಾಸೆ

- Advertisement -
- Advertisement -

ರಾಜ್ಯಾದ್ಯಂತ ಸುದ್ದಿಯಾಗಿದ್ದ, 2021ರಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದಿದ್ದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಹೊರಬಿದ್ದಿದೆ.

ಪ್ರಕರಣದಲ್ಲಿ ಬಂಧಿತರಾಗಿದ್ದ 53 ಆರೋಪಿಗಳ ಪೈಕಿ, ಬಾಲಕಿಯ ತಾಯಿ ಸೇರಿದಂತೆ ನಾಲ್ವರನ್ನು ಸ್ಥಳೀಯ ನ್ಯಾಯಾಲಯ ದೋಷಿಗಳು ಎಂದು ಘೋಷಿಸಿದ್ದು, 49 ಜನರನ್ನು ಆರೋಪ ಮುಕ್ತಗೊಳಿಸಿದೆ.

ಶೃಂಗೇರಿ ಸಮೀಪದ ಹಳ್ಳಿಯೊಂದರಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಒಂದರ್ಥದಲ್ಲಿ ತಾಯಿಯೇ ಮಗಳನ್ನು ವೇಶ್ಯಾವಟಿಕೆಗೆ ತಳ್ಳಿದ್ದರು. ಈ ಸಂಬಂಧ ಒಟ್ಟು 35 ಪ್ರಕರಣ ದಾಖಲಾಗಿತ್ತು ಮತ್ತು 53 ಜನರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿತ್ತು. ಅಂದಿನ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಅವರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆದಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಮಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ವಿಶೇಷ) ನಾಲ್ವರನ್ನು ತಪ್ಪಿತಸ್ಥರೆಂದು ಘೋಷಿಸಿದೆ. ಇವರಿಗೆ ಮಾರ್ಚ್ 11ರಂದು ಶಿಕ್ಷೆ ಪ್ರಕಟಗೊಳ್ಳಲಿದೆ. ಸಾಕ್ಷ್ಯಗಳ ಕೊರತೆಯಿಂದ 49 ಜನರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ :

ಜನವರಿ 30, 2021ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಶೃಂಗೇರಿ ತಾಲೂಕಿನ ಗೋಚವಳ್ಳಿ ಸಮೀಪದ ಮನೆಯೊಂದರಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಮಣ್ಯ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 2020ರಿಂದ ಬಾಲಕಿ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿಟ್ಟುಕೊಳ್ಳಲಾಗಿತ್ತು. ಆ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ನಿರಂತರ ಅತ್ಯಾಚಾರ ನಡೆಸಿದ್ದರು ಎನ್ನಲಾಗಿತ್ತು.

ಪೊಲೀಸರು ಪ್ರಕರಣ ತನಿಖೆ ಕೈಗೊಂಡಾಗ ತಾಯಿಯೇ ಪ್ರಮುಖ ಆರೋಪಿ ಎಂಬುವುದು ಬಯಲಾಗಿತ್ತು. ಈ ನಡುವೆ ಶೃಂಗೇರಿಯ ಅಂದಿನ ವೃತ್ತ ನಿರೀಕ್ಷಕರು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರು ಎಂದು ಆರೋಪಿಸಿ ಪ್ರತಿಭಟನೆ ನಡೆದಿತ್ತಲ್ಲದೆ ಅಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ಅಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಶೃತಿ ಪ್ರಕರಣ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: ತುಮಕೂರು: ಸಿದ್ಧಗಂಗಾ ಮಠದ ಜಾತ್ರೆಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...