Homeಕರ್ನಾಟಕಮುಖ್ಯವಾಹಿನಿಗೆ ಬಂದ 6 ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು : ಚಿಕ್ಕಮಗಳೂರಿನಲ್ಲಿ ವಿಚಾರಣೆ

ಮುಖ್ಯವಾಹಿನಿಗೆ ಬಂದ 6 ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು : ಚಿಕ್ಕಮಗಳೂರಿನಲ್ಲಿ ವಿಚಾರಣೆ

- Advertisement -
- Advertisement -

ಜನವರಿ 8, 2025ರಂದು ಮುಖ್ಯವಾಹಿನಿಗೆ ಬಂದಿರುವ ಆರು ಮಂದಿ ನಕ್ಸಲರನ್ನು ಚಿಕ್ಕಮಗಳೂರು ಪೊಲೀಸರು ಗುರುವಾರ (ಜ.16) ತಮ್ಮ ವಶಕ್ಕೆ ಪಡೆದುಕೊಂಡು, ವಿಚಾರಣೆಗಾಗಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.

ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದ ಬಳಿಕ ಅವರನ್ನು ಪೊಲೀಸರು ಬೆಂಗಳೂರಿನ ಎನ್‌ಐಎ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ 6 ಮಂದಿಗೂ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು.

ಈ ನಡುವೆ ನಕ್ಸಲರನ್ನು ವಿಚಾರಣೆಗೆ ಒಳಪಡಿಸಲು ತಮ್ಮ ವಶಕ್ಕೆ ನೀಡುವಂತೆ ಚಿಕ್ಕಮಗಳೂರು ಪೊಲೀಸರು ಎನ್‌ಐಎ ನ್ಯಾಯಾಲಯವನ್ನು ಕೋರಿದ್ದರು. ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರು ಮಂದಿಯನ್ನು 6 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ಗುರುವಾರ ರಾತ್ರಿಯೇ ಆರು ಮಂದಿಯನ್ನು ಪೊಲೀಸರು ಚಿಕ್ಕಮಗಳೂರಿಗೆ ಕರೆದೊಯ್ದಿದ್ದಾರೆ. ಕೊಪ್ಪ ಡಿವೈಎಸ್‌ಪಿ ಬಾಲಾಜಿ ಸಿಂಗ್ ಮತ್ತು ಇನ್‌ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಮುಖ್ಯವಾಹಿನಿಗೆ ಬಂದಿರುವ ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ. ವಸಂತ (ತಮಿಳುನಾಡು) ಮತ್ತು ಟಿ.ಎನ್‌ ಜಿಷಾ (ಕೇರಳ) ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಲತಾ ಮುಂಡಗಾರು ವಿರುದ್ದ ಕರ್ನಾಟಕದಲ್ಲಿ 65 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 43 ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿವೆ. ವನಜಾಕ್ಷಿ ವಿರುದ್ದ ಒಟ್ಟು 25 ಪ್ರಕರಣಗಳಿದ್ದು, ಈ ಪೈಕಿ 19 ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾಗಿವೆ. ಸುಂದರಿ ವಿರುದ್ದ 23 ಪ್ರಕರಣಗಳಿದ್ದು, 3 ಚಿಕ್ಕಮಗಳೂರಿನಲ್ಲಿದೆ. ಮಾರೆಪ್ಪ ಅರೋಪಿ ವಿರುದ್ದ ರಾಜ್ಯದಲ್ಲಿ 13 ಪ್ರಕರಣಗಳಿವೆ. ಈ ಪೈಕಿ ಚಿಕ್ಕಮಗಳೂರಿನಲ್ಲಿ 3 ದಾಖಲಾಗಿವೆ. ಕೇರಳದ ಜಿಷಾ ಮತ್ತು ತಮಿಳುನಾಡಿನ ವಸಂತ ವಿರುದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿವೆ. ನಕ್ಸಲರ ವಿರುದ್ದ ಬಹುತೇಕ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಮತ್ತು ಶೃಂಗೇರಿ ಠಾಣೆಗಳಲ್ಲಿ ದಾಖಲಾಗಿವೆ.

‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...