HomeಅಂಕಣಗಳುKarnataka against SIRಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

- Advertisement -
- Advertisement -

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು.

ಎಸ್‌ಐಆರ್ ಪರಿಶೋಧನೆ ಮತ್ತು ಪ್ರತಿರೋಧ ಜಾಥಾದ ಭಾಗವಾಗಿ ಚಿಕ್ಕಮಗಳೂರಿನಲ್ಲಿ ಭಾನುವಾರ (ಸೆ.27) ನಡೆದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಗ್ಯಾನೇಶ್ ಕುಮಾರ್ ನಿಜವಾದ ಮತ ಕಳ್ಳ. ಗಣೇಶ ವಿಸರ್ಜನೆ ಮಾಡಿದ್ದೇವೆ, ಶೀಘ್ರದಲ್ಲೇ ಗ್ಯಾನೇಶ್ ಕುಮಾರ್ ಅವರನ್ನೂ ವಿಸರ್ಜನೆ ಮಾಡುತ್ತೇವೆ” ಎಂದು ಹೇಳಿದರು.

ಮುಖ್ಯ ಚುನಾವಣಾ ಆಯುಕ್ತರ ನೇಮಕ, ಚುನಾವಣಾ ಆಯೋಗದ ಸ್ವಾಯತ್ತತೆ ಹಾಗೂ ಚುನಾವಣಾ ಆಯುಕ್ತರಿಗೆ ಸಂಬಂಧಿಸಿದ ಕಾನೂನು ತಿದ್ದುಪಡಿಗಳ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದರು. “ಏನು ಮಾಡಬೇಕು ಎಂಬುದನ್ನು ಮೊದಲೇ ನಿರ್ಧರಿಸಿಕೊಂಡು, ಅದಕ್ಕಾಗಿಯೇ ಮೊದಲೇ ಮಯ್ಯೆಗೆ ಎಣ್ಣೆ ಹಚ್ಚಿಕೊಂಡಿದ್ದರು” ಎಂದು ಆರೋಪಿಸಿದರು.

ಮತದಾರರ ಪಟ್ಟಿಯಿಂದ ದೊಡ್ಡ ಸಂಖ್ಯೆಯಲ್ಲಿ ಹೆಸರುಗಳನ್ನು ತೆಗೆದುಹಾಕಿರುವ ಆರೋಪದ ಕುರಿತು ಮಾತನಾಡಿದ ಪ್ರಕಾಶ್ ರಾಜ್, ಕೊಲೆ ಮಾಡುವವರು ಕೃತ್ಯವೆಸಗಿದಾಗ ಸಿಕ್ಕಿಹಾಕಿಕೊಳ್ಳುವುದಿಲ್ಲ; ಅದರ ಸಾಕ್ಷಿಗಳನ್ನು ನಾಶ ಮಾಡುವಾಗ ಸಿಕ್ಕಿಕೊಳ್ಳುತ್ತಾರೆ. ಪ್ರಜಾಪ್ರಭುತ್ವವನ್ನು ಕೊಲೆ ಮಾಡಿದವರು ಈಗ ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ” ಎಂದರು.

ಎಸ್‌ಐಆರ್ ಒಂದೊಂದು ದಿನಕ್ಕೂ ಒಂದೊಂದು ತಿರುವು ಪಡೆಯುತ್ತಿದೆ. ನುಸುಳುಕೋರರನ್ನು ಪತ್ತೆ ಹಚ್ಚುತ್ತೇವೆ ಎಂದು ಪ್ರಾರಂಭಿಸಿದ ಪ್ರಕ್ರಿಯೆಯಲ್ಲಿ ಒಬ್ಬ ನುಸುಳುಕೋರನನ್ನೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಸುಳ್ಳು ನೆಪಗಳನ್ನು ಹೇಳಿಕೊಂಡು ಇಡೀ ದೇಶದ ಜನರನ್ನು ಪರೀಕ್ಷೆಗೆ ಕೂರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಐಆರ್ ಪ್ರಕ್ರಿಯೆಯ ಎರಡನೇ ಹಂತದಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಬೆಳವಣಿಗೆಗಳನ್ನು ಉಲ್ಲೇಖಿಸಿದ ಪ್ರಕಾಶ್ ರಾಜ್, ಕರ್ನಾಟಕದಲ್ಲಿ ಅಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬ ಕಾರಣಕ್ಕೆ ವಿವಿಧ ನಾಗರಿಕ ಸಂಘಟನೆಗಳು ಆಯೋಗದ ಅವಸರದ ಬಗ್ಗೆ ಪ್ರಶ್ನೆ ಎತ್ತಿದ್ದವು ಎಂದು ತಿಳಿಸಿದರು.

ಕರ್ನಾಟಕದಲ್ಲೂ ಎಸ್‌ಐಆರ್ ಪ್ರಕ್ರಿಯೆಯನ್ನು ಅವಸರದಲ್ಲಿ ನಡೆಸಲಾಗಿದೆ. ಬಿಎಲ್‌ಒಗಳಿಗೆ ಸಮರ್ಪಕವಾಗಿ ಕೆಲಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ದೊಡ್ಡ ಸಂಖ್ಯೆಯ ಜನರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಆತಂಕ ಎದುರಾಗಿದೆ ಎಂದರು.

ಒಂದೂವರೆ ಕೋಟಿ ಜನರನ್ನು ಈಗ ಸರತಿ ಸಾಲಿನಲ್ಲಿ ನಿಲ್ಲಿಸಲಾಗಿದೆ. ನಾವು ಕರ್ನಾಟಕದಾದ್ಯಂತ ‘ಮತ ಕಾವಲು ಸಮಿತಿ’ ಹೆಸರಿನಲ್ಲಿ ಆಗಿರುವ ಅನ್ಯಾಯವನ್ನು ಬಹಿರಂಗಪಡಿಸುತ್ತಿದ್ದೇವೆ. ಚುನಾವಣಾ ಆಯೋಗ ಮಾಡಿರುವ ತಪ್ಪುಗಳನ್ನು ನೇರವಾಗಿ ಜನರನ್ನು ಭೇಟಿ ಮಾಡಿ ದಾಖಲಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ಪ್ರವಾಸದ ವೇಳೆ ತಮಗೆ ಎದುರಾದ ಕೆಲವು ಪ್ರಕರಣಗಳನ್ನು ವಿವರಿಸಿದ ಪ್ರಕಾಶ್ ರಾಜ್, ಮತದಾರರ ಪಟ್ಟಿಯ ಪರಿಷ್ಕರಣೆಯಿಂದ ಸಾಮಾನ್ಯ ಜನರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಟ್ರಾನ್ಸ್‌ಜೆಂಡರ್ ಮಹಿಳೆಯೊಬ್ಬರ ಹೆಸರು ಹಾಗೂ ಗುರುತಿನ ಬದಲಾವಣೆಯಿಂದ ಉಂಟಾದ ಸಮಸ್ಯೆ, ಕಲಬುರಗಿಯಲ್ಲಿ ಗುಡಿಸಲು ಸುಟ್ಟುಹೋದ ಹಿರಿಯ ಮಹಿಳೆಯ ವಿಳಾಸದ ಕುರಿತು ನೋಟಿಸ್ ನೀಡಿರುವುದು ಹಾಗೂ ಮತ್ತೊಬ್ಬ ವೃದ್ಧೆಯ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಅವರು ಉದಾಹರಣೆಯಾಗಿ ನೀಡಿದರು.

“ಒಬ್ಬೊಬ್ಬರ ಮಾತು ಕೇಳಿದರೆ ಕಣ್ಣೀರು ಬರುತ್ತದೆ. ಒಬ್ಬ ವೃದ್ಧೆ ನನಗೆ, ನನ್ನ ಹೆಸರು ಮತದಾರರ ಪಟ್ಟಿಯಿಂದ ಹೋಗಿದೆ. ಮುಂದೆ ನನಗೆ ಪಿಂಚಣಿ ಬರುತ್ತದೆಯೇ?’ ಎಂದು ಪ್ರಶ್ನಿಸಿದರು. ದೇಶದ ಜನರಿಗೆ ಯಾಕಿಷ್ಟು ಹಿಂಸೆ ಕೊಡುತ್ತಿದ್ದೀರಿ?” ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಯುವಜನರ ಪ್ರಶ್ನೆಗಳಿಗೆ ಉತ್ತರಿಸುವಂತೆ ಸವಾಲು ಹಾಕಿದರು. “ಈ ದೇಶದ ಯುವಜನರ ಪ್ರಶ್ನೆಗಳಿಗೆ ತಾಕತ್ತಿದ್ದರೆ ಉತ್ತರಿಸಿ” ಎಂದು ಹೇಳಿದರು.

ದೇಶದ ಎಲ್ಲ ಮಾಧ್ಯಮಗಳೂ ಮಾರಾಟವಾಗಿಲ್ಲ ಎಂದು ಹೇಳಿದ ಪ್ರಕಾಶ್ ರಾಜ್, ಎಸ್‌ಐಆರ್ ಕುರಿತ ವರದಿಗಾಗಿ The Indian Express ಅನ್ನು ಶ್ಲಾಘಿಸಿದರು. ಸತ್ಯವನ್ನು ಹೇಳುವ ಮಾಧ್ಯಮಗಳು ಇನ್ನೂ ಇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2016ರಲ್ಲೇ ತಮ್ಮನ್ನು ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ IAS ಜಿಜಿ ಥಾಮ್ಸನ್

ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಬಿಜೆಪಿ ಪರವಾಗಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದರು ಎಂಬ ಕಟು ಸತ್ಯವೊಂದು ಈಗ ಬಹಿರಂಗವಾಗಿದೆ. ಅವರು ನನಗೆ...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...

ಕರ್ನಾಟಕ ಎಸ್ಐಆರ್: ಅಳಿಸುವಿಕೆಗೆ ಸಂಬಂಧಿಸಿದ ದತ್ತಾಂಶದಿಂದ ಸುಮಾರು 6000 ಮತದಾರರು ನಾಪತ್ತೆ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಅಂಕಿಅಂಶಗಳ ವ್ಯತ್ಯಾಸ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ, ಚುನಾವಣಾ ಆಯೋಗದ ಅಂಕಿಅಂಶಗಳಲ್ಲೇ ಸುಮಾರು 6 ಸಾವಿರ ಮತದಾರರ ಅಳಿಸುವಿಕೆಗೆ ಸಂಬಂಧಿಸಿದ ವ್ಯತ್ಯಾಸ ಬೆಳಕಿಗೆ ಬಂದಿದೆ. ಮತದಾರರ...

Breaking News: ಎಸ್‌ಐಆರ್‌ನಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್: ಕರ್ನಾಟಕದ ಅಂಕಿಅಂಶಗಳು ಎತ್ತಿದ ಗಂಭೀರ ಪ್ರಶ್ನೆಗಳು

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದಲ್ಲಿ ಮುಂದುವರಿಯುತ್ತಿರುವ ಬೆನ್ನಲ್ಲೇ, ಅದರ ಲಿಂಗಾನುಪಾತದ ಅಂಕಿಅಂಶಗಳು ಗಂಭೀರವಾದ ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ಮುನ್ನೆಲೆಗೆ ತಂದಿವೆ. ಲಭ್ಯವಿರುವ 34 ಜಿಲ್ಲೆ/ನಗರ ಆಡಳಿತ ಘಟಕಗಳ...

ಎಸ್ಐಆರ್‌ನಲ್ಲಿ ಬದುಕಿದ್ದರೂ ‘ಮೃತ’, ಮನೆಯಲ್ಲಿದ್ದರೂ ‘ಸ್ಥಳಾಂತರ’: ಚಿಕ್ಕಬಳ್ಳಾಪುರದ ಸಂತ್ರಸ್ತರನ್ನು ಭೇಟಿಯಾದ ಪ್ರಕಾಶ್ ರಾಜ್ 

ಚಿಕ್ಕಬಳ್ಳಾಪುರ: ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆಯಲ್ಲಿ ಬದುಕಿರುವ ಮತದಾರರನ್ನೇ ಮೃತಪಟ್ಟವರು ಎಂದು ಗುರುತಿಸಿರುವ ಆರೋಪಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಕೇಳಿಬಂದಿವೆ. ಎಸ್ಐಆರ್ ಪರಿಶೋಧನೆ-ಪ್ರತಿರೋಧ ಜಾಥಾದ ಭಾಗವಾಗಿ ಗುಡಿಬಂಡೆ ತಾಲೂಕು ಕಚೇರಿ ಆವರಣಕ್ಕೆ ಆಗಮಿಸಿದ್ದ...