ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಕುದೂರಿನ ಗ್ರಾಮಸ್ಥರು ‘ಕಳ್ಳ ಕಳ್ಳ’ ಎಂದು ಕರೆದು ಅಟ್ಟಾಡಿಸಿದ ಘಟನೆ ನಡೆದಿದೆ. ಇದರ ನಂತರ ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿರುವ ಶಾಸಕ, ಗ್ರಾಮಸ್ಥರು ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ.
ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯೊಬ್ಬರ ಸಂಬಂಧಿಕರಿಗೆ ಸಾತ್ವಾನ ಹೇಳಲು ಶಾಸಕರು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾಡಾನೆಗಳ ಉಪಟಳದ ಬಗ್ಗೆ ಪದೇ ಪದೇ ದೂರು ನೀಡಿದರೂ ಸಮಸ್ಯೆ ಪರಿಹಾರವಾಗದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಜನರು ಶಾಸಕರನ್ನು ಅಟ್ಟಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಇಟ್ಟು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ ಮೃತದೇಹ ನೋಡಲು ಶಾಸಕ ಕುಮಾರಸ್ವಾಮಿ ಕೂಡಾ ಬಂದಿದ್ದು, ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: ಆಸ್ಪತ್ರೆ ಐಸಿಯುವಿನಲ್ಲಿ ಅಡ್ಡಾಡಿದ ದನ! – ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಘಾತಕಾರಿ ಘಟನೆ
ಗ್ರಾಮಸ್ಥರು ಶಾಸಕರನ್ನು ಅಟ್ಟಾಡಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಕಳ್ಳ ಕಳ್ಳ ಎಂದು ಕೂಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದರ ನಂತರ ಮತ್ತೊಂದು ವಿಡಿಯೊದಲ್ಲಿ ಬಟ್ಟೆ ಹರಿದ ಸ್ಥಿತಿಯಲ್ಲಿ ಶಾಸಕರು ಕಾಣಿಸಿಕೊಂಡಿದ್ದಾರೆ.
#ಚಿಕ್ಕಮಗಳೂರು ಜಿಲ್ಲೆಯ #ಮೂಡಿಗೆರೆ #ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಕುದೂರಿನ ಗ್ರಾಮಸ್ಥರು ‘ಕಳ್ಳ ಕಳ್ಳ’ ಎಂದು ಕರೆದು ಅಟ್ಟಾಡಿಸಿದ ಘಟನೆ ನಡೆದಿದೆ. ಗ್ರಾಮಸ್ಥರು ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಶಾಸಕರು ಆರೋಪಿಸಿದ್ದಾರೆ.#NaanuGauri #BJP #Chikmagalur #Karnataka pic.twitter.com/GxBV8nigOX
— Naanu Gauri (@naanugauri) November 21, 2022
ತನ್ನ ಮೇಲೆ ಸಂಚು ಮಾಡಿ ಹಲ್ಲೆ ಮಾಡಿದ್ದು, ಇದರಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಶಾಸಕ ಎಂ.ಪಿ ಕುಮಾರಸ್ವಾಮಿ ಆರೋಪಿದ್ದಾರೆ. “ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರಗೆ ಕಳುಹಿಸಿದ್ದಾರೆ. ಸಾರ್ವಜನಿಕರ ಸೇವೆ ಮಾಡಲು ಇರುವವರು ಎಲ್ಲ ತಾಗ್ಯಕ್ಕೂ ರೆಡಿ ಇರುತ್ತೇವೆ” ಎಂದು ಅವರು ಹೇಳಿದ್ದಾರೆ.
ಉದ್ರಿಕ್ತ ಜನರು ಅವರನ್ನು ಅಟ್ಟಾಡಿಸಿಕೊಂಡು ಬರುವಾಗ ಪೊಲೀಸರು ಅವರನ್ನು ರಕ್ಷಿಸಿ ಕಾರಿಗೆ ಕೂರಿಸುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿದೆ. ಈ ವೇಳೆ ಅವರ ಬಟ್ಟೆ ಹರಿದಿರಲಿಲ್ಲ. ಮತ್ತೊಂದು ವಿಡಿಯೊದಲ್ಲಿ ಅವರು ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಸಂಶಯ ವ್ಯಕ್ತಪಡಿಸಿದ್ದು, ಘಟನೆಯ ನಂತರ ತಾನಾಗಿಯೆ ಬಟ್ಟೆ ಹರಿದು ವಿಡಿಯೊ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಳಿದ ಟಿಕೆಟ್ ವಂಚಿತ 7 ಶಾಸಕರನ್ನು ಅಮಾನತುಗೊಳಿಸಿದ ಬಿಜೆಪಿ
ಹುಲ್ಲು ಕೊಯ್ಯುಲು ಹೋಗಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಘಟನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ನಡೆದಿದ್ದು, ಮೃತ ಮಹಿಳೆಯನ್ನು ಶೋಭಾ (45) ಎಂದು ಗುರುತಿಸಲಾಗಿದೆ.
ಇಂಥ ಶಾಸಕರುಗಳಿಗೆ ಗ್ರಾಮಸ್ಥರು ಒಳ್ಳೆ ಕೆಲಸ ಮಾಡಿದ್ದಾರೆ ಅಷ್ಟು ಮಾತ್ರ ಅಲ್ಲ ಅವರನ್ನು ಮುಂದಿನ ಚುನಾವಣೆಯಲ್ಲಿ ಬಾರದಾಗಿ ನೋಡಬೇಕು ವೋಟ್ ಕೇಳಿಕೆ ಬಂದರೆ ಇದೇ ರೀತಿ ಮಾಡಬೇಕು