Homeಕರ್ನಾಟಕಚಿಕ್ಕಮಗಳೂರು | ಪ್ಯಾಲೆಸ್ತೀನ್ ಧ್ವಜ ಹಾರಿಸಿದ 4 ಅಪ್ರಾಪ್ತ ಬಾಲಕರ ಬಂಧನ

ಚಿಕ್ಕಮಗಳೂರು | ಪ್ಯಾಲೆಸ್ತೀನ್ ಧ್ವಜ ಹಾರಿಸಿದ 4 ಅಪ್ರಾಪ್ತ ಬಾಲಕರ ಬಂಧನ

- Advertisement -
- Advertisement -

ಚಿಕ್ಕಮಗಳೂರಿನ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ದಕ್ಕಾಗಿ ಪೊಲೀಸರು ನಾಲ್ವರು ಅಪ್ರಾಪ್ತರನ್ನು ಸೋಮವಾರ ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ ಮಿನಟ್ ವರದಿ ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಬಂಧಿತ ಅಪ್ರಾಪ್ತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹುಡುಗರು ಪ್ಯಾಲೆಸ್ತೀನ್ ಧ್ವಜ ಹೇಗೆ ಪಡೆದರು ಮತ್ತು ಧ್ವಜವನ್ನು ಹಿಡಿದುಕೊಂಡು ನಗರದಾದ್ಯಂತ ಸಂಚಾರ ಮಾಡಲು ಅವರಿಗೆ ಯಾರಾದರೂ ಸೂಚಿಸಲಾಗಿದೆಯೇ ಅಥವಾ ಅವರು ಸ್ವಯಂ ಪ್ರೇರಿತರಾಗಿ ಇದನ್ನು ಮಾಡಿದ್ದಾರೆಯೆ ಎಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂಓದಿ: ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಸಲಿರುವ ರಾಜ್ಯ ಸರ್ಕಾರ

ಘಟನೆಯ ತನಿಖೆಗಾಗಿ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಪೊಲೀಸ್ ತಂಡವನ್ನು ರಚಿಸಲಾಗಿದೆ. ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಕೂಲಂಕುಷವಾಗಿ ತನಿಖೆ ನಡೆಸುತ್ತಿದೆ. ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಾಗಲಿರುವುದರಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ವಯಸ್ಕ ಬಾಲಕರು ದ್ವಿಚಕ್ರ ವಾಹನದಲ್ಲಿ ಪ್ಯಾಲೆಸ್ತೀನ್ ಧ್ವಜವನ್ನು ಬೀಸುತ್ತಾ ತೆರಳಿದ ಘಟನೆ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನಲೆ ಅಧಿಕಾರಿಗಳು ಘಟನೆಯ ವೀಡಿಯೋವನ್ನು ಪಡೆದುಕೊಂಡು ತನಿಖೆ ನಡೆಸಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದ ಹಿಂಸಾಚಾರದ ನಂತರ ರಾಜ್ಯದಲ್ಲಿ ಸಂಭವಿಸಿದ ಸೂಕ್ಷ್ಮ ಪರಿಸ್ಥಿತಿಯ ಹಿನ್ನಲೆ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಪ್ರತಿಪಕ್ಷದ ನಾಯಕ ಮತ್ತು ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ ಅವರು ಈ ಘಟನೆಯನ್ನು ಖಂಡಿಸಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಗೆ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಶಾಂತಿ ಕದಡುವ ಸಂಘಟಿತ ಪ್ರಯತ್ನಗಳು ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, “ಅಂತರರಾಜ್ಯ ಮತ್ತು ಅಂತರಾಷ್ಟ್ರೀಯ ಸಂಪರ್ಕಗಳನ್ನು ಹೊಂದಿದೆ ಎಂದು ನಂಬಲಾದ ಈ ಸಂಘಟಿತ ಮತ್ತು ಪ್ರಾಯೋಜಿತ ಜಾಲವನ್ನು ಭೇದಿಸಲು ಸ್ಥಳೀಯ ಪೊಲೀಸರಿಗೆ ಕಷ್ಟವಾಗುತ್ತಿದೆ. ಆದ್ದರಿಂದ, ಮುಂದಿನ ತನಿಖೆಗಾಗಿ ಈ ಪ್ರಕರಣಗಳನ್ನು ತಕ್ಷಣ ಎನ್‌ಐಎಗೆ ಒಪ್ಪಿಸುವಂತೆ ನಾನು ಗೃಹ ಸಚಿವ ಜಿ ಪರಮೇಶ್ವರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...