Homeದಲಿತ್ ಫೈಲ್ಸ್ಚಿಕ್ಕಮಗಳೂರು: ಬಿಜೆಪಿ ಮುಖಂಡನ ದೌರ್ಜನ್ಯದಿಂದ ಮಗು ಕಳೆದುಕೊಂಡ ತಾಯಿಗೆ ಮಗು ಮರಳಿಸುವಿರೇ?- ಕಾಂಗ್ರೆಸ್

ಚಿಕ್ಕಮಗಳೂರು: ಬಿಜೆಪಿ ಮುಖಂಡನ ದೌರ್ಜನ್ಯದಿಂದ ಮಗು ಕಳೆದುಕೊಂಡ ತಾಯಿಗೆ ಮಗು ಮರಳಿಸುವಿರೇ?- ಕಾಂಗ್ರೆಸ್

- Advertisement -
- Advertisement -

“ಬಿಜೆಪಿ ಮುಖಂಡ ಮಾಡಿದ ದೌರ್ಜನ್ಯದಿಂದಾಗಿ ಮಗು ಕಳೆದುಕೊಂಡ ತಾಯಿಗೆ ಮತ್ತೆ ಮಗುವನ್ನು ಮರಳಿಸಲು ಸಾಧ್ಯವೇ?” ಎಂದು ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ, ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ದೌರ್ಜನ್ಯ ಎಸಗಿರುವ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಭಾರತೀಯ ಜನತಾ ಪಕ್ಷದ ಸ್ಥಳೀಯ ಮುಖಂಡ ಎಂದು ಹೇಳಲಾಗಿದ್ದು, ಬಂಧನದ ಭೀತಿಯಲ್ಲಿ ತಲೆಮರಿಸಿಕೊಂಡಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿದ್ದು, ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ಆತನ ಮಗ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದಾರೆ. ಅದರನ್ವಯ ಪ್ರಕರಣ ದಾಖಲಾಗಿದೆ.

ಅರ್ಪಿತಾ ಗರ್ಭಿಣಿಯಾಗಿದ್ದು, ಜಗದೀಶ್‌ ಗೌಡ ಹಲ್ಲೆ ನಡೆಸಿದ್ದರಿಂದ ಗರ್ಭಪಾತವಾಗಿದೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ದಲಿತರ ಮನೆಗಳಿಗೆ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿ ಊಟ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಟ್ವೀಟ್‌ ಮಾಡಿದ್ದಾರ.ಎ

“ಬೊಮ್ಮಾಯಿಯವರೇ, ಬಹುಸಂಖ್ಯಾತ ದಲಿತರು ಮತ್ತು ಬಡವರ ಬೇಡಿಕೆಗೆ ಉತ್ತರಿಸಿ. ಬಿಜೆಪಿ ನಾಯಕರಿಂದ ದಲಿತರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಮೌನವಾಗಿರುವುದೇಕೆ? ಮೌನ ಎಂದರೆ ಸಮ್ಮತಿಯಲ್ಲವೇ?” ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

“ದೌರ್ಜನ್ಯ ನಡೆದ ಗ್ರಾಮಕ್ಕೆ ನೀವೇಕೆ ಭೇಟಿ ನೀಡಿಲ್ಲ? ಕಳೆದುಹೋದ ಮಗುವನ್ನು ನೀವು ಮರಳಿ ತರಬಹುದೇ?” ಎಂದು ಕೇಳಿದ್ದಾರೆ.

“ದಲಿತ ದೌರ್ಜನ್ಯಗಳು ಕಳೆದ ವರ್ಷಕ್ಕಿಂತ 54% ರಷ್ಟು ಏಕೆ ಹೆಚ್ಚಿವೆ? ಇದು ಎಸ್‌ಸಿ/ಎಸ್‌ಟಿಗಳನ್ನು ಟಾರ್ಗೆಟ್ ಮಾಡಲು ರೂಪಿಸಿರುವ ವಿನ್ಯಾಸವಲ್ಲವೇ? ನಿಮ್ಮ ಸರ್ಕಾರವು ₹ 6,500 ಕೋಟಿ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಕಸಿದಿರುವುದು ಏತಕ್ಕೆ? ಸಬಲೀಕರಣವನ್ನು ದುರ್ಬಲಗೊಳಿಸುವ ವಿನ್ಯಾಸವಿದಲ್ಲವೇ?” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಚಿಕ್ಕಮಗಳೂರು: ಗರ್ಭಿಣಿ ಸೇರಿದಂತೆ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ; ಎಸ್ಟೇಟ್ ಮಾಲೀಕನ ವಿರುದ್ಧ ಎಫ್‌ಐಆರ್‌

ಚಿಕ್ಕಮಗಳೂರು ಘಟನೆಯ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಯುವ ನಾಯಕ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. “ಗಂಗಾ ಕಲ್ಯಾಣದಲ್ಲಿ ₹430 ಕೋಟಿ ಅಕ್ರಮ, SCP/TSP ಹಣ ಬೇರೆಡೆ ವರ್ಗ, ಭೋವಿ ನಿಗಮದಲ್ಲಿ ₹150 ಕೋಟಿ ಅಕ್ರಮ, ನಾಗಮೋಹನ್ ದಾಸ್ ವರದಿ ಜಾರಿ ಮಾಡಿ SC/ST ಮೀಸಲಾತಿ ಹೆಚ್ಚಿಸಿದ್ದೇವೆಂದು ಸುಳ್ಳು ಪ್ರಚಾರ, BJP ನಾಯಕರಿಂದ ದಲಿತರ ಮೇಲೆ ಅಮಾನವೀಯ ದೌರ್ಜನ್ಯ, ದಲಿತರ ದಮನವೇ RSSನ ನೈಜ ಮನಸ್ಥಿತಿ” ಎಂದು ತಿಳಿಸಿದ್ದಾರೆ.

ಗರ್ಭಿಣಿಯ ಮೇಲೆ ಹಲ್ಲೆ ನಡೆಸಿದವರು ಪರಾರಿಯಾಗಿದ್ದಾರೆ. ಇದರ ಜೊತೆಗೆ ಆರೋಪಿಗಳು ದಲಿತ ಕಾರ್ಮಿಕ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಸಂಗತಿ ಬಯಲಾಗಿದೆ. ಲೈಂಗಿಕ ಕಿರುಕುಳ ಅನುಭವಿಸಿದ ಮಹಿಳೆಯೂ ಬಾಳೇಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಾಳೆ ಬಾಳೇಹೊನ್ನೂರು ಚಲೋ

ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟವು ಅಕ್ಟೋಬರ್‌ 14ರಂದು ‘ಬಾಳೇಹೊನ್ನೂರು ಚಲೋ’ ಹಮ್ಮಿಕೊಂಡಿದೆ.

“ದಲಿತ ಮಹಿಳೆಯರನ್ನು ಗೃಹಬಂಧನದಲ್ಲಿಟ್ಟು ದೌರ್ಜನ್ಯ ನಡೆಸಿದ ಭೂ ಮಾಲೀಕನನ್ನು ಕೂಡಲೇ ಬಂಧಿಸಬೇಕು” ಎಂದು ಸಂಘಟಕರು ಆಗ್ರಹಿಸಿದ್ದು, ಗುರುವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...