Homeಕರ್ನಾಟಕಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ., ಬಿ.ಟಿ.ವಿ., ಈ.ಟಿ.ವಿ. ಭಾರತ್‌ ಪ್ರತಿನಿಧಿಗಳಿಗೆ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ತರಾಟೆಗೆ ತೆಗೆದುಕೊಂಡಿದೆ.

- Advertisement -
- Advertisement -

ಹಿಜಾಬ್‌- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ವರದಿ ಮಾಡುತ್ತಿರುವ ಹಲವು ದೃಶ್ಯ ಮಾಧ್ಯಮಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ. ಈ ಕುರಿತು ಟೀಕೆಗಳು ವ್ಯಕ್ತವಾಗುತ್ತಿವೆ.

ಶಿವಮೊಗ್ಗದಲ್ಲಿ ವರದಿಗಾರರೊಬ್ಬರು ಮಗುವೊಂದನ್ನು ಓಡಿಸಿಕೊಂಡು ಹೋಗಿ ಫೋಟೋ ತೆಗೆದದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಕೆಲವು ಮಾಧ್ಯಮಗಳ ಪತ್ರಕರ್ತರಿಗೆ ಸೂಚನೆ ನೀಡಿತ್ತು. ಸಮಿತಿಯ ಮುಂದೆ ಹಾಜರಾದ ಪತ್ರಕರ್ತರು ತಪ್ಪೊಪ್ಪಿಗೆ ಮುಚ್ಚಳಿಕೆ ಬರೆದಿದ್ದಾರೆಂದು ಬಲ್ಲಮೂಲಗಳು ತಿಳಿಸಿವೆ.

ಬಾಲನ್ಯಾಯ ಕಾಯ್ದೆ (ಮಕ್ಕಳ ರಕ್ಷಣೆ ಹಾಗೂ ಪೋಷಣೆ) 2015ರ ಸೆಕ್ಷನ್‌ 29ರ ಅಡಿಯಲ್ಲಿ ರಚಿತವಾಗಿರುವ ಸಮಿತಿಯು ಮಕ್ಕಳ ಹಕ್ಕುಗಳ ಉಲ್ಲಂಘನೆಯ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಆಯ್ದ ಮಾಧ್ಯಮಗಳ ಪತ್ರಕರ್ತರಿಗೆ ಬುದ್ಧಿ ಹೇಳಿದೆ.

ದಿನಾಂಕ 17.02.2022ರಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಸಂಬಂಧಪಟ್ಟ ಕೆಲವು ಮಾಧ್ಯಮ ಪ್ರತಿನಿಧಿಗಳು ಹಾಜರಾಗಲು ಕ್ರಮವಹಿಸುವಂತೆ ಸೂಚಿಸಿತ್ತು.

ಇದನ್ನೂ ಓದಿರಿ: ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ದೃಶ್ಯಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು ಹಾಗೂ ಕ್ಯಾಮೆರಾಮನ್‌ಗಳು ಸಮಿತಿಯ ಮುಂದೆ ಹಾಜರಾಗುವಂತೆ ನಿರ್ದೇಶನ ನೀಡುವಂತೆ ಪತ್ರದಲ್ಲಿ ತಿಳಿಸಲಾಗಿತ್ತು.

ರಾಜ್ಯಾದ್ಯಂತ ಸುದ್ದಿಯಾಗಿರುವ, ವಿದ್ಯಾರ್ಥಿ ಸಮುದಾಯದಲ್ಲಿ ಗೊಂದಲಕ್ಕೆಡೆ ಮಾಡಿಕೊಟ್ಟ ‘ಹಿಜಾಬ್‌’ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಮಾಧ್ಯಮದವರು ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುತ್ತಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡ ದೃಶ್ಯವನ್ನು ಗಮನಿಸಲಾಗಿದೆ. ಮಕ್ಕಳಿಗೆ ಮಾನಸಿಕ ತೊಂದರೆಯಾಗುವಂತೆ ಚಿತ್ರೀಕರಿಸಿದ ದೃಶ್ಯವನ್ನು ಗಮನಿಸಿದ್ದು ಇದು ಬಾಲ ನ್ಯಾಯ ಕಾಯ್ದೆ 2015ರ ಸೆಕ್ಷನ್‌ 75ರ ಪ್ರಕಾರ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಕೆಲವು ಟಿ.ವಿ.ಚಾನೆಲ್‌ಗಳು ಶಿವಮೊಗ್ಗ ಶಾಲೆಗಳಿಂದ ನೇರ ಪ್ರಸಾರ ಮಾಡಿವೆ ಎಂದು ಸಮಿತಿ ತಿಳಿಸಿತ್ತು.

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ. ಮತ್ತು ಬಿ.ಟಿ.ವಿ. ಚಾನೆಲ್‌ಗಳಲ್ಲಿ ದೃಶ್ಯಗಳು ಬಿತ್ತರಗೊಂಡಿವೆ. ಈ ವಿಷಯ ತುರ್ತು ಇದ್ದು, ಸದರಿ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು, ಕ್ಯಾಮೆರಾಮನ್‌ಗಳ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳು ಲಭ್ಯವಿಲ್ಲದ ಕಾರಣ ವೈಯಕ್ತಿಕವಾಗಿ ಪತ್ರ ವ್ಯವಹರಿಸಲು ಸಮಯ ಕಡಿಮೆ ಇರುವುದರಿಂದ ಸಂಬಂಧಪಟ್ಟ ಮಾಧ್ಯಮದವರು ತುರ್ತಾಗಿ ದಿನಾಂಕ 18.02.2022ರಂದು ಬೆಳಿಗ್ಗೆ 11 ಗಂಟೆಗೆ ಸಮಿತಿ ಎದುರು ಹಾಜರಾಗುವಂತೆ ನಿರ್ದೇಶನ ನೀಡಬೇಕು ಎಂದು ವಾರ್ತಾ ಇಲಾಖೆಗೆ ಸಮಿತಿ ಪತ್ರ ಬರೆದಿತ್ತು.

ಸಮಿತಿಯ ಸೂಚನೆಯ ಮೇರೆಗೆ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರು ಸಂಬಂಧಪಟ್ಟ ಮಾಧ್ಯಮಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದ್ದರು. ಸಭೆ ಹಾಜರಾದ ಪತ್ರಕರ್ತರು ಮತ್ತೆ ಕಾನೂನು ಉಲ್ಲಂಘಿಸದಂತೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ಸಭೆಗೆ ಹಾಜರಾಗಿದ್ದ, ಹೆಸರು ಹೇಳಲಿಚ್ಛಿಸದ ಪತ್ರಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಜಿ.ಎಂ.ರೇಖಾ, “ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ಮತ್ತೆ ಮಾಡದಂತೆ ಮಾಧ್ಯಮ ಪ್ರತಿನಿಧಿಗಳು ತಿಳಿಸಿದ್ದಾರೆ” ಎಂದು ಸ್ಪಷ್ಟಪಡಿಸಿದರು.

“ಹೊಸದಾಗಿ ಪತ್ರಿಕೋದ್ಯಮಕ್ಕೆ ಬಂದವರಿರುತ್ತಾರೆ. ಅವರಿಗೆ ಮಕ್ಕಳ ಹಕ್ಕುಗಳ ಕುರಿತು ಅರಿವಿರುವುದಿಲ್ಲ. ಕೆಲವರು ಹೊಸ ಕಾಯ್ದೆಗಳ ಕುರಿತು ಅಪ್‌ಡೇಟ್ ಆಗಿರುವುದಿಲ್ಲ. ಮುಂದೆ ತೊಂದರೆಯಾಗಬಾರದು. ಅರಿವು ಮೂಡಿಸುವ ಕಾರಣಕ್ಕೆ ಅವರನ್ನು ಕರೆಸಲಾಗಿತ್ತು” ಎಂದು ತಿಳಿಸಿದರು.

“ಕಾನೂನು ಉಲ್ಲಂಘಿಸಿದ ಬಳಿಕ, ನಾಳೆ ನ್ಯಾಯಾಲಯದ ಎದುರು ನಮಗೆ ಕಾನೂನು ಗೊತ್ತಿರಲಿಲ್ಲ ಎಂದು ವಾದಿಸಲು ಸಾಧ್ಯವಿಲ್ಲ” ಎಂದ ಅವರು, “ನೋಟಿಸ್‌ ನೀಡಲಾಗಿದ್ದ ಎಲ್ಲ ಮಾಧ್ಯಮದವರು ಹಾಗೂ ಇತರ ಸ್ಥಳೀಯ ಮಾಧ್ಯಮಗಳ ಪ್ರತಿನಿಧಿಗಳು ಹಾಜರಾಗಿದ್ದರು” ಎಂದು ಮಾಹಿತಿ ನೀಡಿದರು.

“ಹಿಜಾಬ್‌ ಬೇಕೋ, ಶಿಕ್ಷಣ ಬೇಕೋ ಎಂದು ಮಕ್ಕಳಲ್ಲಿ ಪ್ರಶ್ನಿಸುವುದು ಸರಿಯಲ್ಲ ಎಂದು ಮಾಧ್ಯಮದವರಿಗೆ ಮನವರಿಕೆ ಮಾಡಿದ್ದೇವೆ. ಕೋವಿಡ್‌ನಿಂದಾಗಿ ಎರಡು ವರ್ಷಗಳಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಏನೇನೋ ಕಾರಣಗಳನ್ನು ಮುಂದಿಟ್ಟು ಮಕ್ಕಳನ್ನು ಶಿಕ್ಷಣದಿಂದ ವಂಚಿಸಿದರೆ ಅವರು ಮುಖ್ಯವಾಹಿನಿಗೆ ಬರುವುದೇ ಕಷ್ಟವಾಗುತ್ತದೆ. ದೇಶದ ಭವಿಷ್ಯವೇ ಮಕ್ಕಳು. ಹೀಗಾಗಿ ನಾವು ಮಕ್ಕಳ ವಿಚಾರವಾಗಿ ಗಂಭೀರವಾಗಿ ಯೋಚಿಸಬೇಕು” ಎಂದು ಅವರು ಮನವಿ ಮಾಡಿದರು.

“ನಿಷೇದಾಜ್ಞೆ ಜಾರಿ ಮಾಡಿದರೂ ಶಾಲಾ ಕಾಲೇಜುಗಳ ಬಳಿ ಮಾಧ್ಯಮದವರು ಹೋಗಿದ್ದಾರೆ. ಈ ಕುರಿತೂ ಮನವರಿಕೆ ಮಾಡಿದ್ದೇವೆ. ವಿಶ್ವ ಮಕ್ಕಳ ಒಡಂಬಡಿಕೆಯಿಂದ ಹಿಡಿದು ಇತ್ತೀಚಿನ ಕಾನೂನಿನವರೆಗೂ ತಿಳಿಸಿದ್ದೇವೆ. ನಿಮಗೆ ಬಿಡುವಾದಾಗ ಎರಡು ಗಂಟೆ ಸಮಯವನ್ನು ನಮಗೆ ನೀಡಿ. ನಾವು ಬಂದು ನಿಮಗೆ ಮಕ್ಕಳ ಹಕ್ಕುಗಳ ಕುರಿತು ಮಾರ್ಗದರ್ಶನ ಮಾಡುತ್ತೇವೆ ಎಂದು ಮಾಧ್ಯಮದವರಿಗೆ ತಿಳಿಸಿದ್ದೇವೆ. ಅರಿವಿನ ಕೊರತೆಯಿಂದ ಹೀಗಾಗುತ್ತದೆ. ನಾಳೆ ನೀವು ಕಷ್ಟಕ್ಕೆ ಸಿಲುಕಿಕೊಂಡು ಒದ್ದಾಡಬೇಡಿ ಎಂದೂ ಎಚ್ಚರಿಕೆಯನ್ನು ಕೊಟ್ಟಿದ್ದೇವೆ” ಎಂದು ಅವರು ವಿವರಿಸಿದರು.

“ಮತ್ತೆ ಇದೇ ತಪ್ಪು ಪುನಾರಾವರ್ತನೆಯಾದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇವೆ” ಎಂದು ರೇಖಾ ಅವರು ಮಾತು ಮುಗಿಸಿದರು.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...