Homeಮುಖಪುಟಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ!

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ!

ಹುಡುಗಿಯರನ್ನು, ಅದರಲ್ಲೂ ವಿಶೇಷವಾಗಿ ಅವರು ಅಪ್ರಾಪ್ತರಾಗಿದ್ದರೆ, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಹೋಗಲು ಅನುಮತಿಸಬಾರದು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಕಳೆದ ವಾರ ಗೋವಾದ ಬೀಚ್‌ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಇಬ್ಬರು ಅಪ್ರಾಪ್ತ ಬಾಲಕರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಘಟನೆಗೆ ಸಂತ್ರಸ್ತರು ಮತ್ತು ಅವರ ಹೆತ್ತವರನ್ನೇ ಜವಾಬ್ದಾರರನ್ನಾಗಿಸಿದ್ದು, ತಮ್ಮ ಸರ್ಕಾರ ಮತ್ತು ಪೋಲಿಸರನ್ನು ಅದಕ್ಕೆ ಜವಾಬ್ದಾರಿ ಅಲ್ಲ ಎಂದು ಅವರು ತಿಳಿಸಿದ್ದಾರೆ.

ನಿನ್ನೆ ಸದನದಲ್ಲಿ ಆಘಾತಕಾರಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್, ತಡರಾತ್ರಿ ತಮ್ಮ ಮಕ್ಕಳನ್ನು ಹೊರಗೆ ಹೋಗಲು ಅನುಮತಿಸಿದ್ದಕ್ಕಾಗಿ ಪೋಷಕರನ್ನು ದೂಷಿಸಿದ್ದಾರೆ.

“ಇಡೀ ರಾತ್ರಿ 14 ವರ್ಷದ ಮಕ್ಕಳು ಕಡಲತೀರದಲ್ಲಿದ್ದಾಗ, ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಕ್ಕಳು ತಮ್ಮ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ, ಸರ್ಕಾರ ಮತ್ತು ಪೊಲೀಸರ ಮೇಲೆ ಜವಾಬ್ದಾರಿಯನ್ನು ಹೊರಿಸಬಾರದು” ಎಂದು ಗೃಹ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

‘‘ತಮ್ಮ ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸುವುದು ಪೋಷಕರ ಕರ್ತವ್ಯವಾಗಿದೆ. ಹುಡುಗಿಯರನ್ನು, ಅದರಲ್ಲೂ ವಿಶೇಷವಾಗಿ ಅವರು ಅಪ್ರಾಪ್ತರಾಗಿದ್ದರೆ, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಹೋಗಲು ಅನುಮತಿಸಬಾರದು” ಎಂದು ಪ್ರಮೋದ್ ಹೇಳಿದ್ದಾರೆ.

“ನಾವು ಪೊಲೀಸರನ್ನು ದೂಷಿಸುತ್ತೇವೆ … ಆದರೆ, ಪಾರ್ಟಿಗಾಗಿ ಬೀಚ್‌ಗೆ ಹೋದ 10 ಜನರಲ್ಲಿ, ಇಬ್ಬರು ಹುಡುಗರು ಮತ್ತು ಇಬ್ಬರು ಹುಡುಗಿಯರು ಒಟ್ಟು ನಾಲ್ವರು ಇಡೀ ರಾತ್ರಿ ಬೀಚ್‌ನಲ್ಲಿಯೇ ಇದ್ದರು…. ಹದಿಹರೆಯದವರು, ವಿಶೇಷವಾಗಿ ಅಪ್ರಾಪ್ತ ವಯಸ್ಕರು, ಕಡಲತೀರಗಳಲ್ಲಿ ರಾತ್ರಿಗಳನ್ನು ಕಳೆಯಬಾರದು” ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಯ ಹೇಳಿಕೆಗೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಬಿಜೆಪಿಯ ಆಳ್ವಿಕೆಯ ಗೋವಾ ಮಹಿಳೆಯರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

ಗೋವಾ ಕಾಂಗ್ರೆಸ್ ವಕ್ತಾರ ಆಲ್ಟೋನ್ ಡಿ ಕೋಸ್ಟಾ ಮುಖ್ಯಮಂತ್ರಿಯವರ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹೇಳಿದ್ದಾರೆ. “ರಾತ್ರಿಯಲ್ಲಿ ತಿರುಗಾಡುವಾಗ ನಾವು ಯಾಕೆ ಭಯಪಡಬೇಕು? ಅಪರಾಧಿಗಳು ಜೈಲಿನಲ್ಲಿರಬೇಕು ಮತ್ತು ಕಾನೂನು ಪಾಲಿಸುವ ನಾಗರಿಕರು ಮುಕ್ತವಾಗಿ ಸುತ್ತಾಡಬೇಕು” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ಸಿನ ಹಿರಿಯ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಕೂಡ ಟ್ವೀಟ್ ಮಾಡಿ, “ಇಂತಹ ನುಡಿಮುತ್ತನ್ನು ಆಡಿದ್ದಕ್ಕೆ ಮುಖ್ಯಮಂತ್ರಿ ರಾಜೀನಾಮೆ ನೀಡಿ ತ್ಯಜಿಸಿ ಮನೆಗೆ ಹೋಗಬೇಕು” ಎಂದು ಹೇಳಿದ್ದಾರೆ.

ಗೋವಾದ ಮತ್ತೊಂದು ವಿರೋಧ ಪಕ್ಷವಾದ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿಜಯ್ ಸರ್ದೇಸಾಯಿ, ಮುಖ್ಯಮಂತ್ರಿಯ ಹೇಳಿಕೆಯನ್ನು ‘ಅಸಹ್ಯಕರ’ ಎಂದು ಕರೆದ್ದಾರೆ. “ಮುಖ್ಯಮಂತ್ರಿ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಅಸಹ್ಯಕರವಾಗಿದೆ. ನಾಗರಿಕರ ಸುರಕ್ಷತೆಯು ಪೊಲೀಸ್ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಅವರು ಅದನ್ನು ಒದಗಿಸಲು ಸಾಧ್ಯವಾಗದಿದ್ದರೆ, ಮುಖ್ಯಮಂತ್ರಿಗೆ ಈ ಹುದ್ದೆಯಲ್ಲಿ ಕುಳಿತುಕೊಳ್ಳಲು ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

“ಗೋವಾ ಮುಖ್ಯಮಂತ್ರಿ ತಮ್ಮ ಮಕ್ಕಳನ್ನು ರಾತ್ರಿಯಲ್ಲಿ ಹೊರಗೆ ಹೋಗಲು ಅನುಮತಿಸಿದ್ದಕ್ಕಾಗಿ ಪೋಷಕರನ್ನು ದೂಷಿಸುತ್ತಿರುವುದು ಆಘಾತಕಾರಿ… ಇದು ಗೋವಾ ಸುರಕ್ಷಿತವಲ್ಲ ಎಂದು ಹೇಳಿಕೊಳ್ಳುತ್ತಿದೆ. ನಮ್ಮ ಭದ್ರತೆಯನ್ನು ರಾಜ್ಯ ಸರ್ಕಾರವು ನಮಗೆ ಖಾತ್ರಿಪಡಿಸದಿದ್ದರೆ, ಯಾರು ಮಾಡಬಹುದು? ಮಹಿಳೆಯರಿಗೆ ಸುರಕ್ಷಿತ ರಾಜ್ಯ ಎಂದು ಗೋವಾಗೆ ಇತಿಹಾಸವಿದೆ… ಬಿಜೆಪಿ ಆಡಳಿತದಲ್ಲಿ ಆ ಟ್ಯಾಗ್ ಕಳೆದುಹೋಗುತ್ತಿದೆ” ಎಂದು ಸ್ವತಂತ್ರ ಶಾಸಕ ರೋಹನ್ ಖೌಂಟೆ ಟ್ವೀಟ್ ಮಾಡಿದ್ದಾರೆ.

ಒಬ್ಬ ಸರ್ಕಾರಿ ನೌಕರ ಸೇರಿದಂತೆ ನಾಲ್ವರು ದುಷ್ಕರ್ಮಿಗಳು ಪೊಲೀಸರಂತೆ ಪೋಸ್ ಕೊಟ್ಟು, ಬಾಲಕರನ್ನು ಥಳಿಸಿದ ನಂತರ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದರು. ಘಟನೆಯು ರಾಜ್ಯ ರಾಜಧಾನಿ ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ಬೆನೌಲಿಮ್ ಬೀಚ್‌ನಲ್ಲಿ ನಡೆದಿದೆ. ನಾಲ್ವರು ಆರೋಪಿಗಳನ್ನು ಈಗಾಗಲೆ ಬಂಧಿಸಲಾಗಿದೆ.

ಪ್ರಭಾವಿ ವ್ಯಕ್ತಿಯೊಬ್ಬರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬುಧವಾರ ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಶಾಸಕರೊಬ್ಬರು ಹೇಳಿದ್ದಾರೆ. ಘಟನೆಯ ತನಿಖೆಯ ಮೇಲೆ ಮಂತ್ರಿಯೊಬ್ಬರು ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂದು ಮತ್ತೊಬ್ಬರು ಆರೋಪಿಸಿದ್ದಾರೆ.

ಇದನ್ನೂ ಓದಿ: ರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತರು’ ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

0
ಬಿಜೆಪಿ ಅಲ್ಪಸಂಖ್ಯಾತರನ್ನು ದ್ವೇಷಿಸುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ 'ಅಲ್ಪಸಂಖ್ಯಾತರು' ಎಂಬ ಪದವನ್ನು ಕೂಡ ಬಳಸಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಮುಸ್ಲಿಮರನ್ನು ಅಂಚಿಗೆ ತಳ್ಳಲಾಗಿದೆ ಎಂದು ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ...