Homeಕರ್ನಾಟಕತುಮಕೂರಿನಲ್ಲಿ ಮಕ್ಕಳ ಕಳ್ಳಸಾಗಾಣೆ ಸಕ್ರಿಯ ಜಾಲ ಪತ್ತೆ; ಅಲೆಮಾರಿಗಳ ಮಗು ಕದ್ದು ಸಿಕ್ಕಿಬಿದ್ದ ಖದೀಮರು

ತುಮಕೂರಿನಲ್ಲಿ ಮಕ್ಕಳ ಕಳ್ಳಸಾಗಾಣೆ ಸಕ್ರಿಯ ಜಾಲ ಪತ್ತೆ; ಅಲೆಮಾರಿಗಳ ಮಗು ಕದ್ದು ಸಿಕ್ಕಿಬಿದ್ದ ಖದೀಮರು

- Advertisement -
- Advertisement -

ಊರೂರು ತಿರುಗಿ ವ್ಯಾಪಾರ ಮಾಡುತ್ತಾ ಜೀವನ ನಡೆಸುತ್ತಿದ್ದ ಅಲೆಮಾರಿ ಕುಟುಂಬದ ದಂಪತಿಯ 11 ತಿಂಗಳ ಮಗು ಕಳವು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಇಡೀ ಜಿಲ್ಲೆಯಲ್ಲಿ ನಡೆಯುತ್ತಿದ್ದ ಮಕ್ಕಳ ಕಳ್ಳಸಾಗಾಣೆ ಜಾಲವನ್ನೆ ಪತ್ತೆ ಮಾಡಿದ್ದಾರೆ. ಈ ಪ್ರಕರಣದಿಂದ ತುಮಕೂರು ಜನತೆ ಬೆಚ್ಚಿಬಿದ್ದಿದ್ದು, ಈವರೆಗೆ ಐದು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಅಲೆಮಾರಿ ಕುಟುಂಬದ ಮಗು ಕಳ್ಳತನ ಪ್ರಕರಣದ ತನಿಖೆಯು ತಿರುವು ಪಡೆದುಕೊಂಡಿದ್ದು, ಹಲವು ತಿಂಗಳುಗಳಿಂದ ಸಕ್ರಿಯವಾಗಿದ್ದ ಒಂದೇ ಗುಂಪು, ಬರೊಬ್ಬರಿ 9 ಮಕ್ಕಳನ್ನು ಕಿಡ್ನಾಪ್ ಮಾಡಿದ್ದಾರೆ. ಕದ್ದ ಮಕ್ಕಳನ್ನ 2 ರಿಂದ 3 ಲಕ್ಷ ರೂಪಾಯಿಗೆ ಮಕ್ಕಳಿಲ್ಲದ ದಂಪತಿಗೆ ಮಾರಾಟ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕಳುವಾಗಿದ್ದ 9 ಮಕ್ಕಳ ಪೈಕಿ 5 ಮಕ್ಕಳನ್ನ ಪೊಲೀಸರು ರಕ್ಷಿಸಿದ್ದು, ಅದರಲ್ಲಿ 1 ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಇನ್ನುಳಿದ 3 ಮಕ್ಕಳಿಗಾಗಿ ತನಿಖಾ ತಂಡ ಶೋಧಕಾರ್ಯ ಮುಂದುವರಿಸಿದೆ.

ಜಾಲ ಪತ್ತೆಯಾಗಿದ್ದು ಹೇಗೆ..?

ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಜುಲೈ ಒಂಬತ್ತರಂದು ಮಗು ಕಳ್ಳತನ ಪ್ರಕರಣ ದಾಖಲಾಗಿತ್ತು. ತಾಲೂಕಿನ ಚೇಳೂರು ಮೂಲದ ಅಲೆಮಾರಿ ಕುಟುಂಬದ ದಂಪತಿಗಳು ಸುತ್ತಮುತ್ತಲಿನ ಹಳ್ಳಿಗಳಲ್ಲಿ ತಲೆಕೂದಲು ಸಂಗ್ರಹಿಸಿ, ಪಾತ್ರೆ-ಪಡಗ ವ್ಯಾಪಾರ ನಡೆಸುತ್ತಾ ಜೀವನ ಸಾಗಿಸುತ್ತಿದ್ರು. ಅದೇ ರೀತಿ ವ್ಯಾಪಾರ ಮುಗಿಸಿ ಇದೇ ಜೂನ್ 9 ರ ರಾತ್ರಿ ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಮಲಗಿದ್ದಾಗ, ಬೆಳಗಾಗುವಷ್ಟರಲ್ಲಿ ದಂಪತಿಗಳ 11 ತಿಂಗಳ ರಾಕಿ ಎಂಬ ಮಗು ನಾಪತ್ತೆಯಾಗಿದ್ದ. ಈ ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಗೆ ಮಗುವಿನ ಪೋಷಕರು ದೂರು ನೀಡಿದ್ದರು.

ಮಕ್ಕಳಿಲ್ಲದ ದಂಪತಿಗಳನ್ನ ಟಾರ್ಗೆಟ್ ಮಾಡುತ್ತಿದ್ದ ಈ ಮಕ್ಕಳ ಕಳ್ಳರ ಗ್ಯಾಂಗ್, ಗರ್ಭ ಧರಿಸಿದ ಅವಿವಾಹಿತ ಯುವತಿಯರಿಂದ ಮಕ್ಕಳನ್ನ ಖರೀದಿ ಮಾಡುತ್ತಿದ್ದರು ಎನ್ನಲಾಗಿದೆ. ಜತೆಗೆ, ಮಕ್ಕಳ ಕಳ್ಳತನಕ್ಕೂ ಇಳಿದಿದ್ದರು. ಸದ್ಯ ಪ್ರಕರಣ ಸಂಬಂಧ 7 ಜನ ಆರೋಪಿಗಳ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಯು.ಡಿ, ಮಹಬೂಬ್ ಶರೀಫ್, ಕೆ.ಎನ್.ರಾಮಕೃಷ್ಣ, ಹನುನಂತರಾಜು, ಮುಬಾರಕ್ ಪಾಷಾ, ಪೂರ್ಣಿಮಾ ಎನ್. ಹಾಗೂ ಸೌಜನ್ಯ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳು

ಮಕ್ಕಳಿಲ್ಲದ ದಂಪತಿಗಳನ್ನ ಟಾರ್ಗೆಟ್ ಮಾಡುತ್ತಿದ್ದ ಒಂದನೆ ಆರೋಪಿ ಮಹೇಶ್, ಈ ಹಿಂದೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡಿದ್ದ ಎನ್ನಲಾಗಿದೆ. ಸದ್ಯ ತುಮಕೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡ್ತಿದ್ದಾನೆ‌.

ಗುಬ್ಬಿಯಲ್ಲಿ ಮಗುವನ್ನ ಕಳವು ಮಾಡಿದ್ದ ಮೂರನೇ ಆರೋಪಿ ರಾಮಕೃಷ್ಣ ಹಾಗೂ ನಾಲ್ಕನೇ ಆರೋಪಿ ಹನುಮಂತರಾಜು, ಮಹೇಶ್ ಮೂಲಕ ಮಂಡ್ಯ ಜಿಲ್ಲೆ ಬೆಳ್ಳೂರು ಕ್ರಾಸ್ ಮೂಲದ ದಂಪತಿಗೆ ಮಗು ಮಾರಾಟ ಮಾಡಿದ್ದ. ಕಿಡ್ನಾಪ್ ಆಗಿದ್ದ 11 ತಿಂಗಳ ರಾಕಿಯನ್ನ ಪೊಲೀಸರು ರಕ್ಷಿಸಿ, ಪೋಷಕರಿಗೆ ಒಪ್ಪಿಸಿದ್ದಾರೆ.

ಜಾತ್ರೆಗಳಲ್ಲಿ ಟ್ಯಾಟು ಹಾಕುವ ಕೆಲಸ ಮಾಡ್ತಿದ್ದ ರಾಮಕೃಷ್ಣ ಹಾಗೂ ಹನುಮಂತರಾಜು ಇಬ್ಬರನ್ನೂ ಹಿಡಿದು ತನಿಖೆ ನಡೆಸಿದಾಗ ಮಕ್ಕಳ ಮಾರಾಟ ಜಾಲ ಪ್ರಕರಣ ಬೆಳಕಿಗೆ ಬಂದಿದೆ. ಎರಡನೇ ಆರೋಪಿ ಮಹಬೂಬ್ ಶರೀಫ್ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರಿನಲ್ಲಿ ತನ್ನ ಪತ್ನಿ ಹೆಸರಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ. ಜೊತೆಗೆ, ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ವಿತರಣಾ ವಿಭಾಗದಲ್ಲಿ ಕೆಲಸ ಮಾಡ್ತಿದ್ದ. ತಮ್ಮ ಕ್ಲಿನಿಕ್ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್ ಗಳ ಸಹಾಯದಿಂದ ಮಕ್ಕಳನ್ನ ಖರೀದಿ ಮಾಡುವ ಪೋಷಕರನ್ನು ಗರ್ಭಿಣಿಯರೆಂದು ದಾಖಲಿಸಿಕೊಂಡು, ಮಗು ಅವರಿಗೆ ಹುಟ್ಟಿದೆ ಎಂದು ನಕಲಿ ದಾಖಲೆಪತ್ರಗಳನ್ನು ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರಿ ಆಸ್ಪತ್ರೆ ಡಾಕ್ಟರ್, ನರ್ಸ್ ಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು ತನಿಖೆ ಚುರುಕುಗೊಳಿಸಲಾಗಿದೆ. ಬಂಧಿತ ಪೂರ್ಣಿಮಾ ಮಧುಗಿರಿ ತಾಲೂಕಿನ ದೊಡ್ಡೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಆಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೋರ್ವ ಆರೋಪಿ ಸೌಜನ್ಯ ಶಿರಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇವರ ಮೇಲೆ ಈ ಹಿಂದೆ ಭ್ರೂಣ ಹತ್ಯೆ ಕೇಸ್ ಕೂಡ ದಾಖಲಾಗಿತ್ತು.

ಬಂಧಿತ ಆರೋಪಿಗಳು

ಪೂರ್ಣಿಮಾ ಹಾಗೂ ಸೌಜನ್ಯ ಆಸ್ಪತ್ರೆಯಲ್ಲಿ ಗರ್ಭಧರಿಸಿದ ಅವಿವಾಹಿತ ಮಹಿಳೆಯರು, ಮಗು ಬೇಡ ಎನ್ನುತ್ತಿದ್ದ ವಿವಾಹಿತ ಮಹಿಳೆಯರ ಬಗ್ಗೆ ಪ್ರಕರಣದ ಪ್ರಮುಖ ಕಿಂಗ್‌ಪಿನ್ ಮಹೇಶ್ ಗೆ ಮಾಹಿತಿ ನೀಡುತ್ತಿದ್ದರು. ಅಂತವರನ್ನು ಸಂಪರ್ಕ ಮಾಡುತ್ತಿದ್ದ ಈ ತಂಡ, ಮಕ್ಕಳನ್ನ ಪಡೆದು ಮಾರಾಟ ಮಾಡ್ತಿದ್ದರು.

ಪ್ರಕರಣ ಸಂಬಂಧ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ. ಅವರಿಂದ ಮಾರುತಿ 800 ಕಾರು, 50 ಸಾವಿರ ನಗದು ಹಾಗೂ 4 ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ಗುಬ್ಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ; ‘ತುರ್ತು ಪರಿಸ್ಥಿತಿ ಉಲ್ಲೇಖವನ್ನು ತಪ್ಪಿಸಬಹುದಿತ್ತು..’; ಸ್ಪೀಕರ್ ಬಳಿ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...