Homeಮುಖಪುಟಮಕ್ಕಳು ಸಾವು : ಕೆಮ್ಮಿನ ಸಿರಪ್ ಮಾರಾಟ ನಿಷೇಧಿಸಿದ ಮೂರು ರಾಜ್ಯಗಳು

ಮಕ್ಕಳು ಸಾವು : ಕೆಮ್ಮಿನ ಸಿರಪ್ ಮಾರಾಟ ನಿಷೇಧಿಸಿದ ಮೂರು ರಾಜ್ಯಗಳು

- Advertisement -
- Advertisement -

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ‘ಕೋಲ್ಡ್ರಿಫ್ ಕೆಮ್ಮಿನ ಸಿರಪ್’ ಸೇವಿಸಿ ಕನಿಷ್ಠ ಹನ್ನೊಂದು ಮಕ್ಕಳು ಸಾವನ್ನಪ್ಪಿರುವ ಹಿನ್ನೆಲೆ, ಮೂರು ರಾಜ್ಯಗಳು ಅಂತಹ ಸಿರಪ್ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಿವೆ.

ಮೊದಲು ತಮಿಳುನಾಡಿನಲ್ಲಿ ಕೆಮ್ಮಿನ ಸಿರಪ್ ನಿಷೇಧಿಸಲಾಗಿತ್ತು. ನಂತರ ಮಧ್ಯಪ್ರದೇಶ ಮತ್ತು ಕೇರಳ ಕೂಡ ನಿಷೇಧ ಮಾಡಿವೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 1 ರಿಂದ 7 ವರ್ಷದೊಳಗಿನ ಕನಿಷ್ಠ 11 ಮಕ್ಕಳು ಸಾವನ್ನಪ್ಪಿದ್ದಾರೆ. ಕೆಮ್ಮಿನ ಸಿರಪ್‌ನಲ್ಲಿದ್ದ ವಿಷಕಾರಿ ಅಂಶವು ಇದಕ್ಕೆ ಕಾರಣವೆಂದು ಅಧಿಕಾರಿಗಳು ಹೇಳಿದ್ದಾರೆ.

ಸಿರಪ್ ಸೇವಿಸಿದ ಮಕ್ಕಳ ಸಾವು ವರದಿಯಾದ ನಂತರ, ಮಧ್ಯಪ್ರದೇಶ ಸರ್ಕಾರವು ಸಿರಪ್‌ನ ಸುರಕ್ಷತೆಯನ್ನು ಪರಿಶೀಲಿಸುವಂತೆ ತಮಿಳುನಾಡಿನ ಅಧಿಕಾರಿಗಳನ್ನು ಕೇಳಿತ್ತು.

ಅಕ್ಟೋಬರ್ 2ರಂದು, ತಮಿಳುನಾಡು ಔಷಧ ನಿಯಂತ್ರಣ ನಿರ್ದೇಶಕರು ನೀಡಿದ ವರದಿಯು, ರಾಜ್ಯದ ಕಾಂಚೀಪುರಂ ಜಿಲ್ಲೆಯ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್‌ ಘಟಕದಲ್ಲಿ ತಯಾರಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನ ಮಾದರಿಗಳು ಪ್ರಮಾಣಿತ ಗುಣಮಟ್ಟ (Not of Standard Quality-NSQ)ಹೊಂದಿಲ್ಲ ಎಂದಿದೆ.

ಸ್ರೆಸನ್ ಫಾರ್ಮಾಸ್ಯುಟಿಕಲ್ಸ್‌ ಘಟಕದಲ್ಲಿ ತಯಾರಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಲ್ಲಿ ಶೇಕಡ 48.6ರಷ್ಟು ಡೈಥಿಲೀನ್ ಗ್ಲೈಕೋಲ್ ಇದ್ದು, ಇದು ತೀವ್ರ ಮೂತ್ರಪಿಂಡ ಮತ್ತು ಯಕೃತ್ತಿನ ವೈಫಲ್ಯಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿದೆ.

2023ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಪರಿಶೀಲನೆಯಲ್ಲಿ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್‌ಗಳಲ್ಲಿ ಡೈಥಿಲೀನ್ ಗ್ಲೈಕೋಲ್ ಇರುವುದು ಪತ್ತೆಯಾಗಿತ್ತು. ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವಿಗೆ ಇದುವೇ ಕಾರಣವೆಂದು ಹೇಳಲಾಗಿತ್ತು.

ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಿಂದ ಮಕ್ಕಳ ಸಾವು ಸಂಭವಿಸಿದೆ ಎಂಬ ವರದಿಗಳ ಹಿನ್ನೆಲೆ, ತಮಿಳುನಾಡು ಸರ್ಕಾರ ಅಕ್ಟೋಬರ್ 1ರಿಂದ ಅದರ ಮಾರಾಟವನ್ನು ನಿಷೇಧಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶನಿವಾರ (ಅ.4) ಮಧ್ಯಪ್ರದೇಶ ಸರ್ಕಾರ ಕೆಮ್ಮಿನ ಸಿರಪ್ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಿದೆ. ರಾಜ್ಯದಿಂದ ಸಿರಪ್‌ನ ಹೆಚ್ಚುವರಿ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಸರ್ಕಾರಿ ಪ್ರಯೋಗಾಲಯಗಳಿಗೆ ಕಳುಹಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದೆ. ಮಾರುಕಟ್ಟೆಯಲ್ಲಿರುವ ಕೆಮ್ಮಿನ ಸಿರಪ್‌ಗಳನ್ನು ವಶಪಡಿಸಿಕೊಂಡು ಫ್ರೀಝ್ ಮಾಡಬೇಕು ಎಂದು ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಕೆಮ್ಮಿನ ಸಿರಪ್ ಮಾರಾಟ ಮತ್ತು ವಿತರಣೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಶನಿವಾರ ತಿಳಿಸಿದ್ದಾರೆ. ವಿಷಕಾರಿ ಅಂಶ ಕಂಡು ಬಂದಿರುವ ಸಿರಪ್ ಕೇರಳದಲ್ಲಿ ವಿತರಿಸಲಾಗುತ್ತಿಲ್ಲವಾದರೂ, ಸರ್ಕಾರ ಈ ವಿಷಯದಲ್ಲಿ ತುಂಬಾ ಎಚ್ಚರಿಕೆಯಿಂದ ಇರಲು ನಿರ್ಧರಿಸಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಸಿರಪ್ ಪಡೆದ ಮಕ್ಕಳು ಸಾವನ್ನಪ್ಪಿರುವ ಹಿನ್ನೆಲೆ, ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯವು ಶುಕ್ರವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆಯನ್ನು ನೀಡಿದ್ದು, ಮಕ್ಕಳಿಗೆ ಕೆಮ್ಮಿನ ಸಿರಪ್‌ಗಳನ್ನು ಕೊಡುವ ವಿಚಾರದಲ್ಲಿ ಎಚ್ಚರಿಕೆ ವಹಿಸುವಂತೆ ತಿಳಿಸಿದೆ.

ಸಣ್ಣ ಮಕ್ಕಳಲ್ಲಿ ಕೆಮ್ಮು, ಶೀತ ಸಾಮಾನ್ಯ. ಅದು ಔ‍ಷಧ ನೀಡದೆ ಕಡಿಮೆಯಾಗಬಹುದು. ಹಾಗಾಗಿ, ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತದ ಔಷಧಿಗಳನ್ನು ಶಿಫಾರಸು ಮಾಡಬಾರದು ಎಂದು ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ ಹೇಳಿದೆ.

‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...