Homeಕರ್ನಾಟಕಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ - ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

ಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ – ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಮುಸ್ಲಿಮರಿಗೆ ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಬೇರೇನೂ ಕೆಲಸವಿಲ್ಲ, ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣದ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, “ಮುಸ್ಲಿಮರಿಗೆ 1947ರಲ್ಲಿ ಅವರ ಧರ್ಮದ ಆಧಾರದಲ್ಲಿ ಅವರಿಗೆ ಪ್ರತ್ಯೇಕ ರಾಷ್ಟ್ರವನ್ನು ನಾವು ಕೊಟ್ಟಾಗೋಯ್ತು. ಇಲ್ಲಿನ ಕಾನೂನು ವ್ಯವಸ್ಥೆಗೆ, ಸಂವಿಧಾನಕ್ಕೆ ಗೌರವ ಕೊಡುವುದಿಲ್ಲ ಎಂದಾರೆ, ಅವತ್ತೆ ಅವರು ತೊಲಗಿಬಿಡಬಹುದಿತ್ತು. ಆದರೆ ಅವರು ಇಲ್ಲೆ ಉಳಿದುಕೊಂಡುಬಿಟ್ಟಿದ್ದಾರೆ. ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಇನ್ನೇನೂ ವೃತ್ತಿಯಿಲ್ಲ. ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೈಸೂರಿನ ಉದಯಗಿರಿ ಗಲಭೆಗೆ ಕಾರಣಕರ್ತನಾದ ಆರೋಪಿಗೆ ಬೆಂಬಲ ನೀಡಿದ ಅವರು, “ಅವಹೇಳನಕಾರಿ ಪೋಸ್ಟ್‌ ಮಾಡಿದ ಒಬ್ಬ ಬಹುಸಂಖ್ಯಾತ ಸಮಾಜಕ್ಕೆ ಸೇರಿದ ವ್ಯಕ್ತಿಗೆ ನೀವು ಇಲ್ಲಿ ಇರಬೇಡಿ, ಕಷ್ಟವಾಗುತ್ತದೆ, ಜೀವ ಬೆದರಿಕೆ ಇದೆ ಎಂದು ಮಾಹಿತಿ ನೀಡುತ್ತಿದ್ದಾರೆ ಎಂದಾದರೆ, ಇಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಇಲ್ಲವೆ? ಕಾನೂನಿಗೆ ಬೆಲೆ ಇಲ್ಲವೆ?” ಎಂದು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹೀಗೆ ಒಬ್ಬೊಬ್ಬರಾಗಿ ಹೋಗುತ್ತಾ ಇದ್ದರೆ, ಉಳಿದಿರುವ ಈ ದೇಶವನ್ನು ಕೂಡಾ ನಾವು ಸಾಬ್ರಿಗೆ ಬರೆದುಕೊಟ್ಟುಬಿಡುವುದಾ? ಸಾಬ್ರಿಗೆ ಹೆದರಿ ಉದಯಗಿರಿ, ಕಲ್ಯಾಣಗಿರಿ ಭಾಗದವರು ಖಾಲಿ ಮಾಡಿ ಎನ್ನುತ್ತೀರಿ. ಮುಂದೆ ನರಸಿಂಹರಾಜ ಕ್ಷೇತ್ರವನ್ನೂ ಖಾಲಿ ಮಾಡಿ ಎನ್ನುತ್ತಾ ಬರುತ್ತಾ ಇರುತ್ತಾರೆ. ಹೀಗಾದರೆ ಹಿಂದೂಗಳು ಎಲ್ಲಿಗೆ ಹೋಗಬೇಕು? ಅವರಿಗೆ ರಕ್ಷಣೆ ನೀಡಲು ಸಾಧ್ಯ ಇಲ್ಲವೆ?” ಎಂದು ಹೇಳಿದ್ದಾರೆ.

“ರಕ್ಷಣೆ ನೀಡುವುದು ಬಿಡಿ, ಈ ರೀತಿಯ ಕೃತ್ಯವನ್ನು ಮಾಡಿದವರನ್ನು ಬಂಧಿಸಿ, ದಂಡಿಸಿದ್ದರೆ ಈ ರೀತಿಯ ಕೃತ್ಯಗಳು ನಿಂತು ಹೋಗುತ್ತವೆ. ಉತ್ತರ ಪ್ರದೇಶದಲ್ಲಿ 20%ಕ್ಕಿಂತ ಹೆಚ್ಚು ಮುಸ್ಲಿಮರಿದ್ದಾರೆ. ಒಬ್ಬ ಯೋಗಿ ಆದಿತ್ಯನಾಥ್ ಮುಸ್ಲಿಮರನ್ನು, ಪುಂಡ ಮುಸಲ್ಮಾನರನ್ನು ಬಾಯಿ ಮುಚ್ಚಿಸಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವೇಳೆ ಅವರು 2002ರ ಗುಜರಾತ್ ಗಲಭೆಯಲ್ಲಿ ಮುಸ್ಲಿಮರ ಮಾರಣಹೋಮವನ್ನು ಸಮರ್ಥಿಸಿಕೊಂಡಿದ್ದಾರೆ. “ಗುಜರಾತ್‌ನಲ್ಲಿ 2002ರ ಹಿಂಸಾಚಾರದ ನಂತರ ಗುಜರಾತಿಗಳು ಅವರಿಗೆ ವಾಪಾಸು ಪಾಠ ಕಲಿಸಿದ ನಂತರ, ಅಲ್ಲಿ ಇವತ್ತಿನ ವರೆಗೂ ಅಲ್ಲಿ ಒಂದೇ ಒಂದು ಘಟನೆ ಸಂಭವಿಸಿಲ್ಲ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಬಂದ ನಂತರ ಬಾಲ ಒಳಗಡೆ ಇಟ್ಟುಕೊಂಡಿದ್ದಾರೆ. ಈ ರೀತಿಯಾಗಿ ಕರ್ನಾಟಕದಲ್ಲಿ ಯಾವಾಗ ಮಾಡುವುದು?” ಎಂದು ಅವರು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹಿಂದೂಗಳು ಅವರ ಮನೆಯನ್ನು ಖಾಲಿ ಮಾಡಿಕೊಂಡು ಹೋಗ್ತಾ ಇರಬೇಕಾದರೆ, ಹಿಂದೂಗಳು ಎಲ್ಲಿಗೆ ಹೋಗಬೇಕು ಕೊನೆಗೆ? ಅವರಿಗೆ ಯಾವ ರಾಷ್ಟ್ರವಿದೆ? ಮುಸ್ಲಿಮರಿಗೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ. ನಮಗೆ ಯಾವ ರಾಷ್ಟ್ರವಿದೆ? ಮುಸ್ಲಿಮರ ಭಯಕ್ಕೆ ಒಬ್ಬ ಹಿಂದೂ ಯಾಕೆ ಮನೆ ಖಾಲಿ ಮಾಡಬೇಕು? ಯಾಕೆ ಊರನ್ನು ಬಿಡಬೇಕು? ಮುಸ್ಲಿಮರಿಗೆ ಫ್ರೀ ಪರ್ಮಿಟ್ ಕೊಟ್ಟಿರುವ ವ್ಯಕ್ತಿ, ತಾಲೀಬಾನಿ ಸರ್ಕಾರ ನಡೆಸುತ್ತಿರುವ ವ್ಯಕ್ತಿ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...