Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

- Advertisement -
- Advertisement -

ಬ್ರಿಟನ್ ಮತ್ತು ಚೀನಾದ ಸಂಶೋಧಕರು ಸೋಮವಾರ ಕೊರೊನಾ ವಿರುದ್ಧದ ತಮ್ಮ ಎರಡು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳನ್ನು ಪ್ರಕಟಿಸಿದ್ದಾರೆ. ಈ ಲಸಿಕಗಳು ಸುರಕ್ಷಿತ ಮತ್ತು ಪ್ರತಿರಕ್ಷಣಾ(ಇಮ್ಯೂನಿಟಿ) ಪ್ರಕ್ರಿಯೆಯನ್ನು ಉಂಟುಮಾಡಲು ಸಮರ್ಥವಾಗಿಯೆ ಎಂದು ಕಂಡುಕೊಳ್ಳಲು ಇದರ ಮೂರನೆ ಹಂತದ ಪ್ರಯೋಗಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಎರಡೂ ಲಸಿಕೆಗಳ ಪ್ರತಿರಕ್ಷಣಾ ಪ್ರತಿಕ್ರಿಯೆಗಳು ಉತ್ತೇಜನಕಾರಿಯಾಗಿದ್ದರೂ, ತಮ್ಮ ಲಸಿಕೆಯು  ಕೊರೊನಾ ವೈರಸ್‌ಗೆ ಕಾರಣವಾಗುವ ಸೂಕ್ಷ್ಮಜೀವಿ SARS-CoV-2 ನಿಂದ ಜನರನ್ನು ರಕ್ಷಿಸುತ್ತದೆಯೇ ಎಂದು ನಿರ್ಧರಿಸಲು ಹೆಚ್ಚಿನ ಸಂಶೋಧನೆಗಳು ಅಗತ್ಯವೆಂದು ಎಚ್ಚರಿಸಿದ್ದಾರೆ.

1,077 ಆರೋಗ್ಯವಂತ ವಯಸ್ಕ ಸ್ವಯಂಸೇವಕರ ಮೇಲೆ ನಡೆಸಿದ ಬ್ರಿಟೀಷ್ ಪ್ರಯೋಗವು ಲಸಿಕೆ ಸುರಕ್ಷಿತವಾಗಿದೆ ಎಂದು ಕಂಡುಕೊಂಡಿದೆ. ಪ್ಯಾರಸಿಟೊಮೊಲ್ ಮೂಲಕ ಚಿಕಿತ್ಸೆ ನೀಡಬಹುದಾದ ಕೆಲವು ಅಡ್ಡಪರಿಣಾಮಗಲು ಮತ್ತು ಪ್ರಯೋಗದ 56 ನೇ ದಿನದವರೆಗೆ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಯನ್ನು ಉಂಟುಮಾಡಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ವ್ಯಾಕ್ಸಿನೇಷನ್ ಮಾಡಿದ 14 ದಿನಗಳಲ್ಲಿ ವೈರಸ್ ಸೋಂಕಿತ ಕೋಶಗಳನ್ನು ಕಂಡುಹಿಡಿಯಲು ಮತ್ತು ಆಕ್ರಮಣ ಮಾಡಲು ಲಸಿಕೆಯು ಟಿ-ಸೆಲ್ ರೋಗನಿರೋಧಕ ಪ್ರತಿಕ್ರಿಯೆಯನ್ನು ಪ್ರಚೋದಿಸಿದೆ. ರಕ್ತ ಅಥವಾ ದುಗ್ಧರಸದಲ್ಲಿ ಹರಡುವ ವೈರಸ್ ಅನ್ನು 28 ದಿನಗಳ ಒಳಗೆ ಕಂಡುಹಿಡಿದು ಆಕ್ರಮಣ ಮಾಡುವ ಪ್ರತಿಕಾಯ(ಆಂಟಿಬಾಡಿ) ಪ್ರತಿಕ್ರಿಯೆಯೆ ವ್ಯಾಕ್ಸಿನೇಷನ್ ಅಗಿದೆ ಎಂದಿದ್ದಾರೆ.

“ಪ್ರತಿರಕ್ಷಣಾ(ಇಮ್ಯೂನಿಟಿ) ವ್ಯವಸ್ಥೆಯು ರೋಗಕಾರಕಗಳನ್ನು ಕಂಡುಹಿಡಿಯುವ ಮತ್ತು ಆಕ್ರಮಣ ಮಾಡುವ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳು ಎಂಬ ಎರಡು ಮಾರ್ಗಗಳನ್ನು ಹೊಂದಿದೆ” ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಪ್ರಯೋಗ ಅಧ್ಯಯನದ ಪ್ರಮುಖ ಲೇಖಕ ಆಂಡ್ರ್ಯೂ ಪೊಲಾರ್ಡ್ ಹೇಳಿದ್ದಾರೆ.

“ಈ ಲಸಿಕೆ ಎರಡನ್ನೂ ಪ್ರೇರೇಪಿಸುವ ಉದ್ದೇಶವನ್ನು ಹೊಂದಿದೆ” ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೀನಾದ ಪ್ರಯೋಗವು ಲಸಿಕೆ ಸೌಮ್ಯ ಅಡ್ಡಪರಿಣಾಮಗಳನ್ನು ಮಾತ್ರ ಉಂಟುಮಾಡಿದೆ. ಒಂದೇ ಡೋಸ್ ರೋಗ ನಿರೋಧಕತೆಯು ಸ್ವೀಕರಿಸಿದ 28 ದಿನಗಳಲ್ಲಿ ಗಮನಾರ್ಹವಾದ ಪ್ರತಿಕಾಯ(ಆಂಟಿಬಾಡಿ) ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳನ್ನು ಉಂಟುಮಾಡಲು ಸಾಧ್ಯವಾಯಿತು ಎಂದು ಚೀನಾದ ಸಂಶೋಧಕರು ಹೇಳಿದ್ದಾರೆ.

ಬೀಜಿಂಗ್ ಇನ್ಸ್ಟಿಟ್ಯೂಟ್ ಆಫ್ ಬಯೋಟೆಕ್ನಾಲಜಿಯ ವೀ ಚೆನ್ ಮತ್ತು ಅವರ ಸಹೋದ್ಯೋಗಿಗಳು ತಮ್ಮ ಲಸಿಕೆಯ ಪರಿಣಾಮಕಾರಿತ್ವವನ್ನು ಮತ್ತಷ್ಟು ಮೌಲ್ಯಮಾಪನ ಮಾಡಲು ಅಂತರರಾಷ್ಟ್ರೀಯ, ಮಲ್ಟಿಸೆಂಟರ್, ಡಬಲ್-ಬ್ಲೈಂಡ್, ನಿಯಂತ್ರಿತ ಮೂರನೇ ಹಂತದ ಪ್ರಯೋಗವನ್ನು ಯೋಜಿಸಿದ್ದಾರೆ ಎಂದು ಹೇಳಿದರು.

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

“ಈ ಪ್ರಯೋಗ ಫಲಿತಾಂಶಗಳು ಭಾರಿ ನಿರೀಕ್ಷೆ ಹುಟ್ಟಿಸಿದೆ” ಎಂದು ಜಾನ್ಸ್ ಹಾಪ್ಕಿನ್ಸ್ ಬ್ಲೂಮ್‌ಬರ್ಗ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ಸಹಾಯಕ ಪ್ರಾಧ್ಯಾಪಕ ನೌರ್ ಬಾರ್- ಝೀವ್ ಹೇಳಿದರು.

“ಮೂರನೇ ಹಂತದ ಪ್ರಯೋಗದ ಫಲಿತಾಂಶ ಬಹಳ ಪ್ರಾಮುಖ್ಯತೆ ಹೊಂದಿದೆ, ಯಾಕೆಂದರೆ ಅಲ್ಲಿ ಈ ಲಸಿಕೆಗಳ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯನ್ನು ನಿರ್ಣಯಿಸಲು ಹೆಚ್ಚಿನ ಜನಸಂಖ್ಯೆಯ ಮೇಲೆ ಪರೀಕ್ಷಿಸಲಾಗುತ್ತದೆ.”

“ಒಟ್ಟಾರೆಯಾಗಿ, ಎರಡೂ ಲಸಿಕೆಗಳು ಭರವಸೆ ಮೂಡಿಸುತ್ತಿದೆ. ಅದರ ಮೂರನೇ ಹಂತದ ಪ್ರಯೋಗಗಳ ಫಲಿತಾಂಶಗಳನ್ನು ಬಹಳ ಉತ್ಸಾಹದಿಂದ ವೀಕ್ಷಿಸಲಾಗುವುದು” ಎಂದು ಹಿರಿಯ ವೈರಾಲಜಿಸ್ಟ್ ಮತ್ತು ಯುಕೆ-ಭಾರತ ಸರ್ಕಾರದ ಸಹಭಾಗಿತ್ವದ ವೆಲ್ಕಂ ಟ್ರಸ್ಟ್-ಡಿಬಿಟಿ ಇಂಡಿಯಾ ಅಲೈಯನ್ಸ್ ಮುಖ್ಯಸ್ಥ ಶಾಹಿದ್ ಜಮೀಲ್ ಹೇಳಿದ್ದಾರೆ.


ಓದಿ:ಕೊರೊನಾಗೆ ಲಸಿಕೆ ಸಿದ್ಧ: ಕ್ಲಿನಿಕಲ್ ಪ್ರಯೋಗಕ್ಕೆ ಬನ್ನಿ ಎಂದ ದೆಹಲಿಯ ಏಮ್ಸ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...