Homeಅಂತರಾಷ್ಟ್ರೀಯಅಮೆರಿಕದ 'ಸುಂಕ ಹೇರಿಕೆ'ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

- Advertisement -
- Advertisement -

ಅಮೆರಿಕದ ಜೊತೆಗಿನ ವ್ಯಾಪಾರ ಯುದ್ದಕ್ಕೆ ಚೀನಾ ಭಾರತದ ಬೆಂಬಲ ಕೋರಿದೆ. ಅಮೆರಿಕದ ಪ್ರತಿ ಸುಂಕ ಹೇರಿಕೆಯನ್ನು ಭಾರತ ಮತ್ತು ಚೀನಾ ಜೊತೆಯಾಗಿ ವಿರೋಧಿಸಬೇಕು ಎಂದು ಹೇಳಿದೆ.

“ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಸಂಬಂಧವು ಪರಸ್ಪರ ಲಾಭದಾಯಕವಾಗಿ ಮತ್ತು ಪೂರಕ ವಾತಾವರಣವನ್ನು ಹೊಂದಿದೆ. ಜಾಗತಿಕ ದಕ್ಷಿಣ ದೇಶಗಳು, ವಿಶೇಷವಾಗಿ ಅಭಿವೃದ್ದಿ ಹೊಂದುತ್ತಿರುವ ಈ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡಿರುವ ಅಮೆರಿಕದ ವಿರುದ್ದ ಜಂಟಿಯಾಗಿ ಹೋರಾಡಬೇಕಿದೆ” ಎಂದು ನವದೆಹಲಿಯಲ್ಲಿರುವ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ರಾಯಭಾರ ಕಚೇರಿಯ ವಕ್ತಾರೆ ಯು ಜಿಂಗ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಮೆರಿಕದ ಮೇಲೆ ವಿಧಿಸಿರುವ ಶೇಕಡ 34ರಷ್ಟು ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಚೀನಾದ ರಫ್ತಿನ ಮೇಲೆ ಹೆಚ್ಚುವರಿಯಾಗಿ ಶೇಕಡ 50ರಷ್ಟು ಸುಂಕ ವಿಧಿಸುವುದಾಗಿ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದರು.

ಚೀನಾದ ಮೇಲೆ ಅಮೆರಿಕದ ಸುಂಕ ಶೇ.20ರಷ್ಟು ಮೊದಲೇ ಇತ್ತು. ಕಳೆದ ವಾರ ಡೊನಾಲ್ಡ್ ಟ್ರಂಪ್ ಶೇ.34ರಷ್ಟು ಪ್ರತಿ ಸುಂಕ ವಿಧಿಸಿದ್ದಾರೆ. ಇದರಿಂದ ಚೀನಾದ ಮೇಲಿನ ಅಮೆರಿಕದ ಸುಂಕ ಶೇ. 54ರಷ್ಟು ಆಗಿದೆ. ಇದಕ್ಕೆ ಪ್ರತಿಯಾಗಿ ಚೀನಾ ಸರ್ಕಾರ ಅಮೆರಿಕದ ಮೇಲೆ ಶೇ.34ರಷ್ಟು ಪ್ರತಿಸುಂಕ ವಿಧಿಸಿದೆ. ಅದನ್ನು ಹಿಂತೆಗೆದುಕೊಳ್ಳಲು ಅಮೆರಿಕ ಮಂಗಳವಾರದವರೆಗೆ ಗಡುವು ನೀಡಿತ್ತು. ಇಲ್ಲದಿದ್ದರೆ ಶೇ. 50ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಚೀನಾ “ನಾವು ಸುಂಕ ವಿಧಿಸಿರುವುದನ್ನು ವಾಪಸ್ ತೆಗೆದುಕೊಳ್ಳುವುದಿಲ್ಲ. ಕೊನೆವರೆಗೆ ಹೋರಾಡುತ್ತೇವೆ” ಎಂದಿತ್ತು. ಚೀನಾ ತನ್ನ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆ ಅಮೆರಿಕ ಬುಧವಾರದಿಂದಲೇ ಹೆಚ್ಚುವರಿ ಶೇ. 50ರಷ್ಟು ಸುಂಕ ವಿಧಿಸಿದೆ ಎಂದು ವರದಿಯಾಗಿದೆ. ಇದರಿಂದ ಚೀನಾ ಮೇಲಿನ ಅಮೆರಿಕದ ಸುಂಕ 20%+34%+50%=104% ಆಗಿದೆ.

“ಸ್ಥಿರ ಬೆಳವಣಿಗೆಯನ್ನು ಖಾತ್ರಿಪಡಿಸುವ ಮತ್ತು ಸಕಾರಾತ್ಮಕ ಪರಿಣಾಮಗಳನ್ನು ಉಂಟುಮಾಡುವ ವ್ಯವಸ್ಥೆಯಿಂದ ಚೀನಾದ ಆರ್ಥಿಕತೆಯು ಬೆಂಬಲಿತವಾಗಿದೆ. ಚೀನಾದ ಉತ್ಪಾದನೆಯು ನಿರಂತರವಾಗಿ ನವೀಕರಿಸಲ್ಪಡುವ ಕೈಗಾರಿಕಾ ವ್ಯವಸ್ಥೆ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ನಿರಂತರ ಹೂಡಿಕೆ ಮತ್ತು ನಾವೀನ್ಯತೆಯನ್ನು ಆಧರಿಸಿದೆ” ಎಂದು ಯು ಜಿಂಗ್ ಹೇಳಿದ್ದಾರೆ.

“ಚೀನಾ ಆರ್ಥಿಕ ಜಾಗತೀಕರಣ ಮತ್ತು ಬಹುಪಕ್ಷೀಯತೆಯ ಹೊಂದಿದೆ. ವಿಶ್ವ ಆರ್ಥಿಕತೆಯ ಪಾಲುದಾರನಾಗಿದೆ. ವಾರ್ಷಿಕವಾಗಿ ಸರಾಸರಿ ಜಾಗತಿಕ ಬೆಳವಣಿಗೆಗೆ ಸುಮಾರು ಶೇ.30ರಷ್ಟು ಕೊಡುಗೆ ನೀಡುತ್ತಿದೆ. ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಯನ್ನು ರಕ್ಷಿಸಲು ನಾವು ಪ್ರಪಂಚದ ಉಳಿದ ಭಾಗಗಳೊಂದಿಗೆ ಕೆಲಸ ಮಾಡುವುದನ್ನು ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮೂಲಕ ಮುಂದುವರೆಸುತ್ತೇವೆ” ಎಂದಿದ್ದಾರೆ.

ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ಏಪ್ರಿಲ್ 2 ಬುಧವಾರ (ಭಾರತೀಯ ಕಾಲಮಾನ ಏಪ್ರಿಲ್ 3 ರಾತ್ರಿ 2 ಗಂಟೆ ಸುಮಾರಿಗೆ) ಪ್ರತಿ ಸುಂಕ (Reciprocal tariffs)ಘೋಷಣೆ ಮಾಡಿದೆ.

ಭಾರತದ ಉತ್ಪನ್ನಗಳ ಮೇಲೆ ಶೇಕಡ 26ರಷ್ಟು ಪ್ರತಿ ಸುಂಕ ಹೇರಲಾಗಿದೆ. “ಭಾರತ ಅಮೆರಿಕದ ಉತ್ಪನ್ನಗಳ ಮೇಲೆ ಶೇಕಡ 52ರಷ್ಟು ಸುಂಕ ವಿಧಿಸುತ್ತಿದೆ. ನಾವು ಶೇಕಡ 26ರಷ್ಟು ವಿನಾಯಿತಿಯೊಂದಿಗೆ ಶೇಕಡ 26ರಷ್ಟು ಮಾತ್ರ ಪ್ರತಿ ಸುಂಕ ವಿಧಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಚೀನಾ ಮೇಲೆ ಶೇ.32ರಷ್ಟು ಪ್ರತಿ ಸುಂಕ ವಿಧಿಸಲಾಗಿದೆ. ಭಾರತ ಪ್ರತಿ ಸುಂಕವನ್ನು ಒಪ್ಪಿಕೊಂಡು ಸುಮ್ಮನಾಗಿದೆ. ಆದರೆ, ಚೀನಾ ಸೇರಿದಂತೆ ಕೆಲ ರಾಷ್ಟ್ರಗಳು ಅಮೆರಿಕದ ವಿರುದ್ಧ ವ್ಯಾಪಾರ ಸಮರ ಸಾರಿದೆ.

‘ಪ್ರತಿಭಟನಾಕಾರರಿಗೆ ಹಣ ನೀಡಲಾಗಿದೆ..’; ಅಮೆರಿಕದ ‘ಹ್ಯಾಂಡ್ಸ್ ಆಫ್’ ಬಗ್ಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...