Homeಅಂತರಾಷ್ಟ್ರೀಯಲಡಾಕ್ ಬಳಿ ವಾಯುನೆಲೆ ವಿಸ್ತರಿಸಿ ಯುದ್ದ ವಿಮಾನಗಳನ್ನು ಸಜ್ಜುಗೊಳಿಸಿರುವ ಚೀನಾ

ಲಡಾಕ್ ಬಳಿ ವಾಯುನೆಲೆ ವಿಸ್ತರಿಸಿ ಯುದ್ದ ವಿಮಾನಗಳನ್ನು ಸಜ್ಜುಗೊಳಿಸಿರುವ ಚೀನಾ

- Advertisement -
- Advertisement -

ಚೀನಾ ತನ್ನ ವಾಯುನೆಲೆಯನ್ನು ಲಡಾಕ್ ಬಳಿ ವಿಸ್ತರಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಬಗ್ಗೆ ವಿಶೇಷ ಚಿತ್ರಗಳನ್ನು ಪ್ರಕಟಿಸಿದ್ದು ಅದರಲ್ಲಿ ವಾಯುನೆಲೆಯ ವಿಸ್ತರಣೆಯನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ.

ವಾಯುನೆಲೆಯೂ ಲಡಾಖ್‌ನ ಪಂಗ್ಯಾಂಗ್ ಸರೋವರದಿಂದ 200 ಕಿಲೋಮೀಟರ್ ದೂರದ ಟಿಬೆಟ್‌ನ ನಗರಿ ಕುನ್ಶಾ ವಿಮಾನ ನಿಲ್ದಾಣದಲ್ಲಿದೆ. ಇತ್ತೀಚಿನ ದಿನಗಳಲ್ಲಿ ಲಡಾಖ್‌ನಲ್ಲಿ ಭಾರತೀಯ ಮತ್ತು ಚೀನಾ ಸೈನ್ಯದ ನಡುವೆ ಉದ್ವಿಗ್ನತೆಯ ಪರಿಸ್ಥಿತಿ ಉಂಟಾಗಿದೆ.

6 ಏಪ್ರಿಲ್ 2020 ರ ಉಪಗ್ರಹ ಚಿತ್ರದಲ್ಲಿ ಏರ್‌ಪೋರ್ಟ್‌ ಹಾಗೂ ರನ್‌ವೇಯನ್ನು ಕಾಣಬಹುದು. ಆದರೆ 21 ಮೇ 2020 ರ ಚಿತ್ರಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ದೊಡ್ಡ ಪ್ರಮಾಣದಲ್ಲಿ ವಾಯುನೆಲೆಯ ಚಟುವಟಿಕೆಗಳು ನಡೆದಿರುವುದು ಹೊಸ ಚಿತ್ರದಲ್ಲಿ ಕಂಡುಬರುತ್ತವೆ.

ಹೊಸ ಚಿತ್ರದಲ್ಲಿ ಹೊಸ ಟ್ರ್ಯಾಕ್ ಸಹ ಕಂಡುಬರುತ್ತಿದ್ದು, ಅದು ಸಮಾನಾಂತರ ಟ್ಯಾಕ್ಸಿ ಟ್ರ್ಯಾಕ್ ಆಗಿರಬಹುದು ಅಥವಾ ಈ ಸ್ಥಳವನ್ನು ಹೆಲಿಕಾಪ್ಟರ್‌ಗಳಿಗಾಗಿ ಈ ಎತ್ತರದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎನ್ನಲಾಗಿದೆ.

ಅಷ್ಟೇ ಅಲ್ಲದೆ ಈ ಚಿತ್ರದಲ್ಲಿರುವ ವಾಯುನೆಲೆಯಲ್ಲಿ 4 ಯುದ್ಧ ವಿಮಾನಗಳು ನಿಂತಿರುವುದು ಕೂಡಾ ಗೋಚರಿಸುತ್ತಿದೆ. ಇವುಗಳು ಜೆ -11 ಅಥವಾ ಜೆ -16 ಆಗಿರಬಹುದು ಎನ್ನಲಾಗಿದ್ದು, ಅದು ರಷ್ಯಾದ ಸುಖೋಯ್ -27 ಅಥವಾ ಸುಖೋಯ್ -30 ರ ರೂಪಾಂತರಗಳಾಗಿವೆ.

ಇವು ಚೀನಾದ ಮುಖ್ಯ ಯುದ್ಧ ವಿಮಾನಗಳಾಗಿದ್ದು ಭಾರತದ ಗಡಿಯಿಂದ ಕೇವಲ 200 ಕಿ.ಮೀ ದೂರದಲ್ಲಿ ಅವುಗಳ ನಿಯೋಜನೆಯು ನಿಜವಾಗಿಯೂ ಕಳವಳಕಾರಿ ಸಂಗತಿಯಾಗಿದೆ. ಅಷ್ಟೇ ಅಲ್ಲದೆ ಚಿತ್ರಗಳನ್ನು ಮೊದಲ ಬಾರಿಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಪೂರ್ವ ಲಡಾಕ್‌ನ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ, ಭಾರತೀಯ ಮತ್ತು ಚೀನಾ ಸೈನಿಕರ ನಡುವೆ ಉದ್ವಿಗ್ನತೆ ಉಂಟಾಗಿದ್ದು, ಇದು 2017 ರ ಡೋಕ್ಲಾಮ್ ಬಿಕ್ಕಟ್ಟಿನ ನಂತರದ ಅತಿದೊಡ್ಡ ಮಿಲಿಟರಿ ಉಲ್ಬಣಕ್ಕೆ ಕಾರಣವಾಗಬಹುದು ಎನ್ನಲಾಗಿದೆ.

ಪ್ಯಾಂಗೊಂಗ್ ತ್ಸೋ ಮತ್ತು ಗಾಲ್ವಾನ್ ಕಣಿವೆಯಲ್ಲಿ ಭಾರತವು ತನ್ನ ಸ್ಥಾನವನ್ನು ಬಲಪಡಿಸಿದೆ ಎಂದು ಸೈನ್ಯದ ಉನ್ನತ ಮೂಲಗಳು ಹೇಳುತ್ತವೆ. ಈ ಎರಡು ವಿವಾದಿತ ಪ್ರದೇಶಗಳಲ್ಲಿ, ಚೀನಾ ಸೈನ್ಯವು ತನ್ನ 2500 ಸೈನಿಕರನ್ನು ನಿಯೋಜಿಸಿದ್ದು, ತಾತ್ಕಾಲಿಕ ನಿರ್ಮಾಣವನ್ನು ಬಲಪಡಿಸುತ್ತಿದೆ.

ಸೇನೆಯ ಉತ್ತರ ಕಮಾಂಡ್‌ನ ಮಾಜಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಡಿ.ಎಸ್. ಹೂಡಾ (ನಿವೃತ್ತ), “ಇದು ಸಾಮಾನ್ಯ ಉಲ್ಲಂಘನೆಯಲ್ಲ, ಗಂಭೀರ ವಿಷಯ” ಎಂದು ಹೇಳಿದ್ದಾರೆ. ” ಗಾಲ್ವಾನ್ ಪ್ರದೇಶದಲ್ಲಿ ಎರಡು ಕಡೆಯವರ ನಡುವೆ ಯಾವುದೇ ವಿವಾದಗಳಿಲ್ಲ ಎಂದು ಲೆಫ್ಟಿನೆಂಟ್ ಜನರಲ್ ಹೂಡಾ ನಿರ್ದಿಷ್ಟವಾಗಿ ಒತ್ತಿ ಹೇಳಿದ್ದಾರೆ.


ಓದಿ: ಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಯುದ್ಧ ವಿನಾಶಕಾರಿ.

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...