HomeUncategorizedಚೀನಾ ನಮ್ಮ ಭೂಮಿಯನ್ನು ಅತಿಕ್ರಮಿಸಿ ಮನೆಗಳನ್ನು ನಿರ್ಮಿಸಿಸಿದ್ದರೂ ಪ್ರಧಾನಿ ಮೌನವಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಚೀನಾ ನಮ್ಮ ಭೂಮಿಯನ್ನು ಅತಿಕ್ರಮಿಸಿ ಮನೆಗಳನ್ನು ನಿರ್ಮಿಸಿಸಿದ್ದರೂ ಪ್ರಧಾನಿ ಮೌನವಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಚೀನಾ ಭಾರತದ ಭೂಮಿಯನ್ನು ಅತಿಕ್ರಮಿಸಿ ಮನೆ, ರಸ್ತೆಗಳನ್ನು ನಿರ್ಮಿಸುತ್ತಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಆರೋಪಿಸಿದ್ದಾರೆ.

56 ಇಂಚಿನ ಎದೆ ಎಲ್ಲಿದೆ ಎಂದು ಹಿಮಾಚಲ ಪ್ರದೇಶದ ರೋಹ್ರುದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿಯನ್ನುದ್ದೇಶಿಸಿ ಖರ್ಗೆ ಪ್ರಶ್ನಿಸಿದರು. “ತಮ್ಮ ಪಕ್ಷವು ದೇಶದ ಜನರನ್ನು ಮತ್ತು ಸಂವಿಧಾನವನ್ನು ಉಳಿಸಲು ಹೋರಾಡುತ್ತಿದೆ; ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಿದೆ” ಎಂದು ಭರವಸೆ ನೀಡಿದರು.

ನಾವು ಪಾಕಿಸ್ತಾನದ ವಿರುದ್ಧ ಹೋರಾಡಿ ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. ಚೀನಾ ನಮ್ಮ ಭೂಮಿಯನ್ನು ಅತಿಕ್ರಮಿಸಿ ಮನೆ, ರಸ್ತೆ ನಿರ್ಮಾಣ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸುಮ್ಮನಿದ್ದಾರೆ. 56 ಇಂಚಿನ ಎದೆ ಎಲ್ಲಿದೆ ಎಂದು ಪ್ರಶ್ನಿಸಿದರು.

2023ರ ಪ್ರವಾಹದ ನಂತರ ಹಿಮಾಚಲ ಪ್ರದೇಶ ಸರ್ಕಾರಕ್ಕೆ ನೆರವು ನೀಡದ ಆರೋಪದ ಮೇಲೆ ಕಾಂಗ್ರೆಸ್ ಮುಖ್ಯಸ್ಥರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. “ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಪ್ರವಾಹದ ನಂತರ ಕೇಂದ್ರದಿಂದ 10,000 ಕೋಟಿ ರೂಪಾಯಿಗಳ ನೆರವು ಕೋರಿದ್ದರು. ಆದರೆ, ಕೇವಲ ಕಲ್ಲುಗಳು ಮಾತ್ರ ಸಿಕ್ಕಿವೆ” ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ; ‘ನಿಮ್ಮ ಸ್ವಂತ ದೇಶದ ಬಗ್ಗೆ ಕಾಳಜಿ ವಹಿಸಿ..’; ಪಾಕಿಸ್ತಾನದ ಮಾಜಿ ಸಚಿವ ಫವಾದ್‌ ಹೇಳಿಕೆಗೆ ಕೇಜ್ರಿವಾಲ್ ತಿರುಗೇಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀಟ್ ವಿನ್ಯಾಸಗೊಳಿಸಿದ, ನಿರ್ವಹಿಸುವ ವಿಧಾನದ ಬಗ್ಗೆ ಗಂಭೀರ ಪ್ರಶ್ನೆಗಳಿವೆ: ಕಾಂಗ್ರೆಸ್

0
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಸಮಗ್ರತೆ ಮತ್ತು ನೀಟ್ ಅನ್ನು ವಿನ್ಯಾಸಗೊಳಿಸಿದ, ನಿರ್ವಹಿಸುವ ವಿಧಾನದ ಬಗ್ಗೆ "ಗಂಭೀರ ಪ್ರಶ್ನೆಗಳು" ಇವೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ. ಸಂಸತ್ತಿನ ಹೊಸ ಸ್ಥಾಯಿ ಸಮಿತಿಗಳು ರಚನೆಯಾದಾಗ, ಅದು ನೀಟ್,...