Homeಮುಖಪುಟಅರುಣಾಚಲ ಪ್ರದೇಶವನ್ನು ಸೇರಿಸಿ ಹೊಸ ನಕ್ಷೆ ಬಿಡುಗಡೆ ಮಾಡಿದ ಚೀನಾ

ಅರುಣಾಚಲ ಪ್ರದೇಶವನ್ನು ಸೇರಿಸಿ ಹೊಸ ನಕ್ಷೆ ಬಿಡುಗಡೆ ಮಾಡಿದ ಚೀನಾ

- Advertisement -
- Advertisement -

ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರವನ್ನು ಒಳಗೊಂಡಿರುವ 2023ರ ಮ್ಯಾಪ್‌ನ್ನು ಚೀನಾ ಸೋಮವಾರ ಬಿಡುಗಡೆ ಮಾಡಿದೆ.

ಚೀನಾದ ಸ್ಟ್ಯಾಂಡರ್ಡ್ ಮ್ಯಾಪ್‌ನ 2023ರ ಆವೃತ್ತಿಯನ್ನು ಸೋಮವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ನೈಸರ್ಗಿಕ ಸಂಪನ್ಮೂಲಗಳ ಸಚಿವಾಲಯದ ಅಧೀನದ ಸ್ಟ್ಯಾಂಡರ್ಡ್ ಮ್ಯಾಪ್ ಸೇವೆಯ ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ ಎಂದು ಸರ್ಕಾರಿ ಗ್ಲೋಬಲ್ ಟೈಮ್ಸ್ ಎಕ್ಸ್ (ಟ್ವಿಟರ್) ಪೋಸ್ಟ್‌ನಲ್ಲಿ ತಿಳಿಸಿದೆ.

ಗ್ಲೋಬಲ್ ಟೈಮ್ಸ್ ಪ್ರದರ್ಶಿಸಿದ ನಕ್ಷೆಯು ದಕ್ಷಿಣ ಟಿಬೆಟ್ ಎಂದು ಚೀನಾ ಹೇಳಿಕೊಳ್ಳುವ ಅರುಣಾಚಲ ಪ್ರದೇಶ ಮತ್ತು 1962ರ ಯುದ್ಧದಲ್ಲಿ ಆಕ್ರಮಿಸಿಕೊಂಡ ಅಕ್ಸಾಯ್ ಚಿನ್‌ನ್ನು ಚೀನಾದ ಭಾಗವಾಗಿ ತೋರಿಸಿದೆ.

ನಕ್ಷೆಯಲ್ಲಿ ಇದಲ್ಲದೆ ಚೀನಾದ ಭೂಪ್ರದೇಶವಾಗಿ ತೈವಾನ್ ದ್ವೀಪ ಮತ್ತು ದಕ್ಷಿಣ ಚೀನಾ ಸಮುದ್ರದ ಹೆಚ್ಚಿನ ಭಾಗವನ್ನು ತೋರಿಸಲಾಗಿದೆ.

ಚೀನಾ ತೈವಾನ್‌ನ್ನು ತನ್ನ ಮುಖ್ಯಭೂಮಿಯ ಭಾಗವೆಂದು ಹೇಳಿಕೊಳ್ಳುತ್ತದೆ. ವಿಯೆಟ್ನಾಂ, ಫಿಲಿಪೈನ್ಸ್, ಮಲೇಷ್ಯಾ, ಬ್ರೂನಿ ಮತ್ತು ತೈವಾನ್ ದಕ್ಷಿಣ ಚೀನಾ ಸಮುದ್ರದ ಪ್ರದೇಶಗಳ ಮೇಲೆ ಪ್ರತಿವಾದ ಹೊಂದಿವೆ.

ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ ನಡೆದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧ  ಹದೆಗೆಟ್ಟಿತ್ತು. ಆ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು. ಆದರೆ ಇದೀಗ ಚೀನಾ ತನ್ನ ಮ್ಯಾಪ್‌ನಲ್ಲಿ ಭಾರತದ ಭೂಭಾಗ ತೋರಿಸಿದೆ.

ಇದನ್ನು ಓದಿ: ನಮಾಝ್ ಮಾಡಲು ಬಸ್‌ ನಿಲ್ಲಿಸಿ ಅಮಾನತಾಗಿದ್ದ ಕಂಡೆಕ್ಟರ್ ಆತ್ಮಹತ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...