Homeಅಂತರಾಷ್ಟ್ರೀಯಚೀನಾ-ಭಾರತ ಗಡಿ ಸಮಸ್ಯೆ: ಮಧ್ಯಸ್ಥಿಕೆ ವಹಿಸುವ ಆಶಯ ವ್ಯಕ್ತಪಡಿಸಿದ ಟ್ರಂಪ್!

ಚೀನಾ-ಭಾರತ ಗಡಿ ಸಮಸ್ಯೆ: ಮಧ್ಯಸ್ಥಿಕೆ ವಹಿಸುವ ಆಶಯ ವ್ಯಕ್ತಪಡಿಸಿದ ಟ್ರಂಪ್!

ಚೀನಾ ಭಾರತವನ್ನು ಬೆದರಿಸುತ್ತಿದೆಯೇ ಎಂಬ ಪ್ರಶ್ನೆಗೆ, "ಅದು ನಿಜವಲ್ಲ. ಆದರೆ ಚೀನಾ ಖಂಡಿತವಾಗಿಯೂ ಅದರತ್ತ ಸಾಗುತ್ತಿದೆ. ಬಹಳಷ್ಟು ಜನರು ತಿಳಿದುಕೊಂಡಿರುವುದಕ್ಕಿಂತ ಅವರು ಹೆಚ್ಚು ಬಲವಾಗಿದ್ದಾರೆ” ಎಂದು ಟ್ರಂಪ್ ಹೇಳಿದರು.

- Advertisement -
- Advertisement -

ಭಾರತ-ಚೀನಾ ಗಡಿ ಸಮಸ್ಯೆಯು ತುಂಬಾ ಕೆಟ್ಟ ಪರಿಸ್ಥಿತಿಯಿಂದ ಕೂಡಿದೆ. ಹಾಗಾಗಿ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸಕ್ತಿ ವ್ಯಕ್ತಪಡಿಸಿದ್ದಾರೆ.

“ಗಡಿ ಸಮಸ್ಯೆಯ ಬಗ್ಗೆ ಭಾರತ ಮತ್ತು ಚೀನಾ ದೇಶಗಳೊಂದಿಗೆ ಮಾತನಾಡುತ್ತಿದ್ದೇವೆ. ನಾವು ಚೀನಾ ಮತ್ತು ಭಾರತದ ಸಮಸ್ಯೆಗೆ ಸಂಬಂಧಿಸಿದಂತೆ ಸಹಾಯ ಮಾಡಲು ಸಿದ್ಧರಾಗಿದ್ದೇವೆ” ಎಂದು ಟ್ರಂಪ್ ಶುಕ್ರವಾರ (ಸೆಪ್ಟೆಂಬರ್ 4) ಸಂಜೆ ಶ್ವೇತಭವನದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಎಂದು ದಿ ಫೆಡರಲ್ ವರದಿ ಮಾಡಿದೆ.

ಚೀನಾ ಭಾರತವನ್ನು ಬೆದರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಅದು ನಿಜವಲ್ಲ. ಆದರೆ ಚೀನಾ ಖಂಡಿತವಾಗಿಯೂ ಅದರತ್ತ ಸಾಗುತ್ತಿದೆ. ಬಹಳಷ್ಟು ಜನರು ತಿಳಿದುಕೊಂಡಿರುವುದಕ್ಕಿಂತ ಅವರು ಹೆಚ್ಚು ಬಲಗೊಂಡಿದ್ದಾರೆ” ಎಂದು ಟ್ರಂಪ್ ಹೇಳಿದರು.

ಇದನ್ನೂ ಓದಿ: IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

ಭಾರತ ಮತ್ತು ಇತರ ದೇಶಗಳ ನಡುವಿನ ದ್ವಿಪಕ್ಷೀಯ ವಿಷಯಗಳಲ್ಲಿ ಮಧ್ಯಸ್ಥಿಕೆ ವಹಿಸಲು ಟ್ರಂಪ್ ಮುಂದಾಗಿರುವುದು ಇದೇ ಮೊದಲಲ್ಲ. ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದಲ್ಲಿ ಮಧ್ಯಪ್ರವೇಶಿಸಲು ಅಮೇರಿಕಾ ಅಧ್ಯಕ್ಷರು ಏಪ್ರಿಲ್‌ನಲ್ಲಿಯೇ ಪ್ರಸ್ತಾಪಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಉಲ್ಬಣಗೊಂಡ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ನಿವಾರಿಸಲು ಮಧ್ಯಸ್ಥಿಕೆ ವಹಿಸಲು ಮತ್ತು ಸಹಾಯ ಮಾಡಲು ಟ್ರಂಪ್ ಹಲವು ಬಾರಿ ಪ್ರಸ್ತಾಪಿಸಿದ್ದರು. ಆದಾಗ್ಯೂ, ಜಮ್ಮು ಮತ್ತು ಕಾಶ್ಮೀರದೊಂದಿಗಿನ ವಿಷಯವು ಆಂತರಿಕ ವಿಷಯ ಎಂದು ಭಾರತವು ಪ್ರತಿ ಬಾರಿಯೂ ನಯವಾಗಿ ನಿರಾಕರಿಸಿತ್ತು.

ನಿನ್ನೆಯ ವರದಿಯಂತೆ, ಪೂರ್ವ ಲಡಾಖ್‍‌ ಸಮೀಪದ ದಕ್ಷಿಣ ಪ್ಯಾಂಗ್ಯೊಂಗ್ ಪ್ರದೇಶದಲ್ಲಿ ಚೀನಿ ಯುದ್ಧ ಟ್ಯಾಂಕ್‍ಗಳು ಹಾಗೂ ಸೇನಾ ಪಡೆಗಳು ದೊಡ್ಡ ಮಟ್ಟದಲ್ಲಿ ಜಮಾವಣೆಗೊಂಡಿದ್ದು, ಪಿರಂಗಿದಳವು ವಾಸ್ತವಿಕ ನಿಯಂತ್ರಣ ರೇಖೆಯಿಂದ 20 ಕಿಲೋ ಮೀಟರ್‌‌ ದೂರದಲ್ಲಿದೆ ಎಂದು ತಿಳಿದುಬಂದಿತ್ತು. ಆಗಸ್ಟ್ 30 ರಂದು ಚೀನಾ ಅತಿಕ್ರಮಣ ಯತ್ನವನ್ನು ಹಿಮ್ಮೆಟ್ಟಿಸಿ ಈ ಪ್ರದೇಶದ ಕೆಲವೊಂದು ಪ್ರಮುಖ ಸ್ಥಳಗಳ ಮೇಲೆ ಭಾರತ ನಿಯಂತ್ರಣ ಸಾಧಿಸಿದ ನಂತರದ ಬೆಳವಣಿಗೆ ಇದಾಗಿದೆ.


ಇದನ್ನೂ ಓದಿ: ಭಾರತ-ಚೀನಾ: ಗಡಿಯಲ್ಲಿ ಜಮಾವಣೆಗೊಂಡ ಚೀನಿ ಯುದ್ಧ ಟ್ಯಾಂಕ್‌‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...