Homeಮುಖಪುಟ'ಭಾರತ ಮಾತೆ' ರಕ್ಷಿಸಲು ಮಾತನಾಡುವುದನ್ನು ಬಿಟ್ಟು ಬೇರೆ ಏನು ಮಾಡಿದ್ದೀರಿ?; ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ

‘ಭಾರತ ಮಾತೆ’ ರಕ್ಷಿಸಲು ಮಾತನಾಡುವುದನ್ನು ಬಿಟ್ಟು ಬೇರೆ ಏನು ಮಾಡಿದ್ದೀರಿ?; ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಚೀನಾದೊಂದಿಗಿನ ಗಡಿ ಪರಿಸ್ಥಿತಿಯ ಕುರಿತು ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡು  ಕಾಂಗ್ರೆಸ್ ಬುಧವಾರ ವಾಗ್ದಾಳಿ ನಡೆಸಿದೆ. ‘ಭಾರತ ಮಾತೆಯನ್ನು’ ರಕ್ಷಿಸುವ ವಿಚಾರದಲ್ಲಿ ಮಾತನಾಡುವುದನ್ನು ಬಿಟ್ಟು ಮೋದಿ ಸರ್ಕಾರ ಮಾಡಿದ್ದೇನು? ಗಡಿಯಲ್ಲಿ ಹಿಂದಿನ ಯಥಾಸ್ಥಿತಿಯನ್ನು ಯಾವಾಗ ಮರುಸ್ಥಾಪಿಸುತ್ತದೆ? ಎಂದು ಕೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ, ಅವರು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ”ಚೀನಾದೊಂದಿಗೆ 19 ಸುತ್ತಿನ ಮಾತುಕತೆ ವಿಫಲವಾಗಿದೆ, ಕಳೆದ 3 ವರ್ಷಗಳಿಂದ ಪ್ರತಿ ಬಾರಿಯೂ ಮಾತುಕತೆ ವಿಫಲವಾಗಿದೆ” ಎಂದು ಹೇಳಿದ್ದಾರೆ.

ಎರಡು ದಿನಗಳ ಮಿಲಿಟರಿ ಮಾತುಕತೆಯಲ್ಲಿ, ಭಾರತ ಮತ್ತು ಚೀನಾ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವುದರ ಜೊತೆಗೆ ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಉಳಿದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಒಪ್ಪಿಕೊಂಡಿವೆ ಎಂದು ಜಂಟಿ ಹೇಳಿಕೆ ಮಂಗಳವಾರ ಬಿಡುಗಡೆ ಮಾಡಿವೆ.

”2020ರ ಏಪ್ರಿಲ್‌ನಲ್ಲಿ ಇದ್ದ ಯಥಾಸ್ಥಿತಿಯನ್ನು ಮೂರು ವರ್ಷ ಮತ್ತು ಮೂರು ತಿಂಗಳವರೆಗೆ ಪುನಃಸ್ಥಾಪಿಸಲಾಗಿಲ್ಲ” ಎಂದು ಸುರ್ಜೆವಾಲಾ ಅವರು ಹೇಳಿದರು.

”ಭಾರತೀಯ ಪಡೆಗಳು ಆಯಕಟ್ಟಿನ DBO ಏರ್‌ಸ್ಟ್ರಿಪ್ ಬಳಿ ಇರುವ ಡೆಪ್ಸಾಂಗ್ ಬಯಲು ಪ್ರದೇಶದ 65 ಪೆಟ್ರೋಲಿಂಗ್ ಪಾಯಿಂಟ್‌ಗಳಲ್ಲಿ 26 ‘ಪೆಟ್ರೋಲ್’ ಹೊಂದಲು ಸಾಧ್ಯವಾಗಿಲ್ಲ! ನಮ್ಮ ಭೂಪ್ರದೇಶದ ಒಳಗೆ ‘ಬಾಟಲ್‌ನೆಕ್’ ಎಂದು ಕರೆಯಲ್ಪಡುವ Y ಜಂಕ್ಷನ್‌ನಲ್ಲಿ ಚೀನೀಯರು ಭಾರತೀಯ ಸೈನಿಕರನ್ನು ನಿರ್ಬಂಧಿಸುವುದನ್ನು ಮುಂದುವರೆಸಿದ್ದಾರೆ. 10, 11, 11A, 12, 13 ಪೆಟ್ರೋಲಿಂಗ್ ಪಾಯಿಂಟ್‌ಗಳಿಗೆ ಪ್ರವೇಶವನ್ನು ಚೀನಿಯರು ನಿರ್ಬಂಧಿಸಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಸುರ್ಜೆವಾಲಾ ಟ್ವಿಟರ್‌ನಲ್ಲಿ ಹೇಳಿದ್ದರು.

ಮೋದಿ ಸರ್ಕಾರವನ್ನು ಪ್ರಶ್ನಿಸಿದ ಸುರ್ಜೆವಾಲಾ, ”ಚೀನೀಯರು ನಿರ್ಲಜ್ಜವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶವನ್ನು ಯಾವಾಗ ತೆರವು ಮಾಡಲಾಗುತ್ತದೆ? ಚೀನಾದ ಸೇನೆಯನ್ನು ಯಾವಾಗ ಹಿಂದಕ್ಕೆ ತಳ್ಳಲಾಗುತ್ತದೆ? ಚೀನೀಯರು ಆಕ್ರಮಿಸಿಕೊಂಡಿರುವ ಸುಮಾರು 1,000 ಚದರ ಕಿಲೋಮೀಟರ್ ಭಾರತೀಯ ಪ್ರದೇಶವನ್ನು ಬಿಟ್ಟುಕೊಡಲು ಮೋದಿ ಸರ್ಕಾರವು ರಾಜಿ ಮಾಡಿಕೊಂಡಿದೆಯೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಯಾರೂ ಭಾರತೀಯ ಪ್ರದೇಶವನ್ನು ಪ್ರವೇಶಿಸದಿದ್ದರೆ, ಚೀನಿಯರೊಂದಿಗೆ ಏಕೆ ಮಾತುಕತೆ ನಡೆಸಲಾಗುತ್ತಿದೆ? ಎಂದು ಕೇಳಿದ್ದಾರೆ.

”’ಭಾರತ ಮಾತೆಯನ್ನು’ ರಕ್ಷಿಸುವ ವಿಚಾರದಲ್ಲಿ ಮಾತನಾಡುವುದನ್ನು ಬಿಟ್ಟು ಮೋದಿ ಸರ್ಕಾರ ಮಾಡಿದ್ದೇನು?” ಎಂದು ಚೀನಾದೊಂದಿಗಿನ ಗಡಿ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರು ಬದಲಾವಣೆ: ಕಾಂಗ್ರೆಸ್ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...