Homeಅಂತರಾಷ್ಟ್ರೀಯಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

- Advertisement -
- Advertisement -

ಪೂರ್ವ ಲಡಾಖ್‌ನಲ್ಲಿರುವ ಪಾಂಗಾಂಗ್ ಸರೋವರದ ಮೇಲೆ ಚೀನಾ ಸೇತುವೆಯನ್ನು ನಿರ್ಮಿಸುತ್ತಿದೆ ಎಂದು ಭೂ-ಗುಪ್ತಚರ ತಜ್ಞ ಡೇಮಿಯನ್ ಸೈಮನ್ ಅವರ ಉಪಗ್ರಹ ಚಿತ್ರಗಳು ಸೂಚಿಸುತ್ತಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಚೀನಾದ ಭೂಪ್ರದೇಶದೊಳಗೆ ಬರುವ ಸರೋವರದ ಒಂದು ಭಾಗಕ್ಕೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಯು ಸರೋವರದ ಎರಡೂ ದಡಗಳನ್ನು ಸಂಪರ್ಕಿಸುತ್ತದೆ ಮತ್ತು ಚೀನಾಕ್ಕೆ ಸೈನಿಕರು ಮತ್ತು ಭಾರೀ ಶಸ್ತ್ರಾಸ್ತ್ರಗಳನ್ನು ತ್ವರಿತವಾಗಿ ಚಲಿಸುವ ಸಾಮರ್ಥ್ಯವನ್ನು ನೀಡುತ್ತದೆ.

ಸೈಮನ್ ಅವರ ಟ್ವೀಟ್ ಚಿತ್ರದ ಪ್ರಕಾರ ಸರೋವರದ ಕಿರಿದಾದ ಭಾಗದಲ್ಲಿ ಸೇತುವೆಯ ನಿರ್ಮಾಣವು ಬಹುತೇಕ ಪೂರ್ಣಗೊಂಡಿದೆ ಎಂದು ತೋರಿಸುತ್ತದೆ. ಈ ಸೇತುವೆಯನ್ನು ಪೂರ್ಣಗೊಳಿಸುವುದರೊಂದಿಗೆ ವಿವಾದಾತ್ಮಕ ಪ್ರದೇಶಕ್ಕೆ ಹೆಚ್ಚುವರಿ ಸೈನಿಕರನ್ನು ಸೇರಿಸಲು ಚೀನಾವು ಬಹು ಮಾರ್ಗಗಳನ್ನು ಹೊಂದಿದಂತಾಗುತ್ತದೆ.

2020 ರಿಂದ ಭಾರತ ಮತ್ತು ಚೀನಾದಿಂದ 50,000 ಕ್ಕೂ ಹೆಚ್ಚು ಸೈನಿಕರನ್ನು ಪೂರ್ವ ಲಡಾಖ್‌ನಲ್ಲಿ ಡೆಪ್ಸಾಂಗ್ ಬಯಲು ಪ್ರದೇಶದಿಂದ ಉತ್ತರಕ್ಕೆ ಮತ್ತು ಡೆಮ್‌ಚೋಕ್ ಪ್ರದೇಶಕ್ಕೆ ನಿಯೋಜಿಸಲಾಗಿದೆ.

ಜೂನ್ 2020 ರಲ್ಲಿ ಗಾಲ್ವಾನ್ ನದಿ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಮುಖಾಮುಖಿಯಲ್ಲಿ 20 ಭಾರತೀಯ ಸೈನಿಕರು ಕೊಲ್ಲಲ್ಪಟ್ಟರು. ತಮ್ಮ ನಾಲ್ವರು ಸೈನಿಕರು ಮರಣಹೊಂದಿದ್ದಾರೆ ಎಂದು ಚೀನಾ ಹೇಳುತ್ತದೆ. ಆದರೆ ಭಾರತವು ಚೀನಾದ 40 ಕ್ಕೂ ಹೆಚ್ಚು ಸೈನಿಕರ ಸಾವನಪ್ಪಿದ್ದಾರೆ ಎಂದು ಪ್ರತಿಪಾದಿಸಿದೆ.

ಇನ್ನೊಂದೆಡೆ ಗಾಲ್ವಾನ್‌ನಲ್ಲಿ ಚೀನಾವು ತಮ್ಮ ಧ್ವಜಾರೋಹಣ ನಡೆಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ ಕುರಿತು ಭಾರತೀಯ ಸರ್ಕಾರ ಮೌನ ವಹಿಸಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ. ಅದು ಚೀನಾದ ಪ್ರದೇಶ ಎಂದು ಮಿಲಿಟರಿ ಅಧಿಕರಾಗಿಳು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಗಾಲ್ವಾನ್ ಕಣಿವೆಯಲ್ಲಿ ಚೀನಿ ಧ್ವಜಾರೋಹಣ: ಮೋದಿ ಮೌನ ಪ್ರಶ್ನಿಸಿದ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...