Homeಮುಖಪುಟಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

2013ರಲ್ಲಿ ಚೀನಾದವರು ಭಾರತದ ಗಡಿ ಅತಿಕ್ರಮಿಸಲು ಮುಂದಾದಾಗ ನಾವು ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ನಾವು ಪ್ರತಿಯಾಗಿ ಅವರ ಪ್ರದೇಶಗಳನ್ನು ಆಕ್ರಮಿಸಿಕೊಂಡು, ಅವರೇ ರಾಜಿಮಾಡಿಕೊಳ್ಳುವಂತೆ ಮಾಡಿದ್ದೆವು

- Advertisement -
- Advertisement -

ತಮಿಳುನಾಡು ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚೀನಾ- ಭಾರತದ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ “ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಏಪ್ರಿಲ್‌ 6ಕ್ಕೆ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅವರು ಹಮ್ಮಿಕೊಂಡಿರುವ ಮೂರು ದಿನಗಳ ಪ್ರವಾಸಕ್ಕೆ ಇಂದು (ಫೆ.27) ಚಾಲನೆ ನೀಡಿದ ನಂತರ ವಕೀಲರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಪ್ಯಾಂಗಾಂಗ್‌ ಸರೋವರ ಪ್ರದೇಶಗಳ ಉತ್ತರ ಮತ್ತು ದಕ್ಷಿಣ ದಂಡೆಗಳಿಂದ ಸೇನಾಪಡೆಗಳು, ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಯಂತ್ರೋಪಕರಣಗಳನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯು ಪೂರ್ಣಗೊಳ್ಳುವ ಮೂಲಕ ಮತ್ತು ಪೂರ್ವ ಲಡಾಖ್‌ನಲ್ಲಿ ಗಡಿ ಸಂಘರ್ಷ ನಿಷ್ಕ್ರಿಯಗೊಳಿಸುವ ಮೊದಲು, ಚೀನಿಯರು ಅತಿಕ್ರಮಣ ಆಲೋಚನೆಯನ್ನು 2017ರಲ್ಲಿ ದೋಕಲಾದಲ್ಲಿ ಪರೀಕ್ಷೆಗೆ ಒಳಪಡಿಸಿದ್ದರು” ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನೂ ಓದಿ: ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

“ಚೀನೀಯರು ನಮ್ಮ ದೇಶದ ಪ್ರಮುಖ ಕಾರ್ಯತಂತ್ರದ ಪ್ರದೇಶಗಳನ್ನು ಅತಿಕ್ರಮಿಸಿಕೊಂಡಿದ್ದಾರೆ. ಭಾರತದ ಪ್ರತಿಕ್ರಿಯೆ ಏನಿರುತ್ತದೆ ಎಂಬುದನ್ನು ನೋಡಲು ತಮ್ಮ ಅತಿಕ್ರಮಣದ ಆಲೋಚನೆಯನ್ನು ಅವರು ಮೊದಲು ದೋಕಲಾದಲ್ಲಿ ಪರೀಕ್ಷಿಸಿದ್ದರು. ಭಾರತ ಪ್ರತಿಕ್ರಿಯಿಸುವುದಿಲ್ಲ ಎನ್ನುವುದನ್ನು ಅರಿತ ಅವರು, ನಂತರ ಅದನ್ನು ಲಡಾಖ್‌ನಲ್ಲಿ ಮತ್ತೊಮ್ಮೆ ಪರೀಕ್ಷಿಸಿದ್ದಾರೆ. ಮುಂದೆ ಅವರು ಅದನ್ನು ಅರುಣಾಚಲಪ್ರದೇಶದ ಮೇಲೂ ಪರೀಕ್ಷಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಚೀನಾ ಅತಿಕ್ರಮಣ ನಡೆಸಿದಾಗ ಪ್ರಧಾನಿ ಮೋದಿಯವರ ಮೊದಲ ಪ್ರತಿಕ್ರಿಯೆ ‘ಭಾರತದೊಳಕ್ಕೆ ಯಾರೂ ಬಂದಿಲ್ಲ’ ಎನ್ನುವುದಾಗಿತ್ತು. ಇದರಿಂದಾಗಿ ಭಾರತದ ಪ್ರಧಾನಿ ನಮಗೆ ಹೆದರಿಕೊಂಡಿದ್ದಾರೆ ಎನ್ನುವ ಸೂಚನೆ ಚೀನಾದವರಿಗೆ ಸಿಕ್ಕಿತು. ಭಾರತದ ಪ್ರಧಾನಿ ನಮ್ಮ ಎದುರು ನಿಲ್ಲಲು ಹೆದರುತ್ತಾರೆ ಎನ್ನುವುದನ್ನು ಅವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅದೇ ಆಧಾರದ ಮೇಲೆ ಚೀನಾದವರು ಈಗಲೂ ಮಾತುಕತೆ ನಡೆಸಿದ್ದಾರೆ” ಎಂದು ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

“ನನ್ನ ಮಾತನ್ನು ಚೆನ್ನಾಗಿ ನೆನಪಿಟ್ಟುಕೊಳ್ಳಿ, ಡೆಪ್ಸಾಂಗ್‌ನಲ್ಲಿರುವ ನಮ್ಮ ನೆಲ ಅತ್ಯಂತ ಮುಖ್ಯವಾದುದು. ಇದನ್ನು ಚೀನಾದವರು ಆಕ್ರಮಿಸಿಕೊಂಡಾಗಿದೆ. ಇದು ನಮಗೆ ಮರಳಿ ಸಿಗದು, ನಮ್ಮ ಪ್ರಧಾನಿ ಕೂಡ ಆ ಭೂಮಿಯನ್ನು ಮರಳಿ ಪಡೆಯುವುದಿಲ್ಲ. ಎಲ್ಲ ಸಮಸ್ಯೆಗಳನ್ನೂ ಸರಿಪಡಿಸಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಅಷ್ಟೇ. ಆದರೆ, ನಮ್ಮ ದೇಶ ಆ ಪ್ರದೇಶವನ್ನು ಕಳೆದುಕೊಳ್ಳಲಿದೆ” ಎಂದು ವಿವರಿಸಿದರು.

“ದೇಶದೊಳಕ್ಕೆ ಯಾರೂ ಬಂದಿಲ್ಲ” ಎಂದು ಪ್ರಧಾನಿ ನೀಡಿರುವ ಹೇಳಿಕೆ ಭವಿಷ್ಯದಲ್ಲಿ ಭಾರತಕ್ಕೆ ಅಪಾಯವನ್ನು ತಂದೊಡ್ಡಲಿದೆ. ಇದರಿಂದಾಗಿ ಚೀನಾದವರು ಲಡಾಖ್‌ನಲ್ಲಿ ನಡೆಸುತ್ತಿರುವ ಸಂಘರ್ಷವನ್ನು ಇಷ್ಟಕ್ಕೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

“ಕಾಂಗ್ರೆಸ್‌ ನೇತೃತ್ವದ ಸರ್ಕಾರ ಇದ್ದಾಗ ಯಾವುದೇ ಹಿಂಜರಿಕೆ ಇಲ್ಲದೇ ಚೀನಾದೊಂದಿಗೆ ವ್ಯವಹರಿಸಿದೆ. ಭಾರತವನ್ನು ಸುತ್ತುವರಿಯಲು ನಮ್ಮಿಂದ ಸಾಧ್ಯವಿಲ್ಲವೆಂದು ಚೀನಾದವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದರು. 2013ರಲ್ಲಿ ಚೀನಾದವರು ಭಾರತದ ಗಡಿ ಅತಿಕ್ರಮಿಸಲು ಮುಂದಾದಾಗ ನಾವು ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ನಾವು ಪ್ರತಿಯಾಗಿ ಅವರ ಪ್ರದೇಶಗಳನ್ನು ಆಕ್ರಮಿಸಿಕೊಂಡು, ಅವರೇ ರಾಜಿಮಾಡಿಕೊಳ್ಳುವಂತೆ ಮಾಡಿದ್ದೆವು. ಈಗಿನ ಪ್ರಧಾನಿಗೆ ಆ ಧೈರ್ಯವಿಲ್ಲ, ಪ್ರಧಾನಿಯೇ ರಾಜಿ ಮಾಡಿಕೊಳ್ಳಲಿದ್ದಾರೆ ಎನ್ನುವುದು ಚೀನಾದವರಿಗೆ ತಿಳಿದಿದೆ” ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.


ಇದನ್ನೂ ಓದಿ: ಆಘಾತಕಾರಿ ಸುದ್ದಿ: ವಸತಿ ಶಾಲೆಯೊಂದರಲ್ಲಿನ 317 ಹೆಣ್ಣುಮಕ್ಕಳ ಸಾಮೂಹಿಕ ಅಪಹರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...