HomeUncategorizedಭಾರತಕ್ಕೆ ಚೀನಾ ಅಧ್ಯಕ್ಷರ ಭೇಟಿ ಹಿನ್ನೆಲೆ ಟಿಬೆಟಿಯನ್ ಕವಿ ತೆನ್ ಜುನ್ ತ್ಸುಂಡ್ಯೂ ಬಂಧನ

ಭಾರತಕ್ಕೆ ಚೀನಾ ಅಧ್ಯಕ್ಷರ ಭೇಟಿ ಹಿನ್ನೆಲೆ ಟಿಬೆಟಿಯನ್ ಕವಿ ತೆನ್ ಜುನ್ ತ್ಸುಂಡ್ಯೂ ಬಂಧನ

- Advertisement -
ಮುಂದಿನ ವಾರ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಜತೆ ಮಾತುಕತೆ ನಡೆಸಲಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡಿನಲ್ಲಿ ವಾಸವಾಗಿರುವ ಟಿಬೆಟಿಯನ್ ಪ್ರಸಿದ್ಧ ಕವಿ ತೆನ್ ಜುನ್ ತ್ಸುಂಡ್ಯೂ ಅವರನ್ನು ಬಂಧಿಸಲಾಗಿದೆ.
ತಮಿಳುನಾಡಿನ ಮಲ್ಲಪುರಂನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತು ಮೋದಿ ನಡುವೆ ಅನೌಪಚಾರಿಕ ಶೃಂಗಸಭೆ ನಡೆಯಲಿದೆ. ಶೃಂಗಸಭೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಬಹುದು ಎಂಬ ಕಾರಣಕ್ಕಾಗಿ ಟಿಬೆಟ್ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ತ್ಸುಂಡ್ಯೂ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಟ್ರೈಬ್ಯೂನ್ ವೆಬ್ ಸೈಟ್ ವರದಿ ಮಾಡಿದೆ.
ಕವಿ ತೆನ್ ಜುನ್ ತ್ಸುಂಡ್ಯೂ ಜತೆ ಸ್ವತಂತ್ರ ಟಿಬೆಟ್ ಗಾಗಿ ಹೋರಾಡುತ್ತಿರುವ 9 ಮಂದಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಅವರನ್ನು ಚೆನ್ನೈನ ಪೂಜಲ್ ಕೇಂದ್ರ ಕಾರಾಗೃಹದಲ್ಲಿ ಇರಿಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ಅಕ್ಟೋಬರ್ 11 ರಿಂದ 13 ರ ನಡುವೆ ಅನೌಪಚಾರಿಕ ಶೃಂಗಸಭೆ ನಡೆಯಲಿದ್ದು, ಅದುವರೆಗೂ ಈ ಹೋರಾಟಗಾರರನ್ನು ಬಂಧನದಲ್ಲಿರಿಸಲು ತೀರ್ಮಾನಿಸಲಾಗಿದೆ ಎಂದು ವರದಿ ತಿಳಿಸಿದೆ.
- Advertisement -

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...