Homeಮುಖಪುಟಅರುಣಾಚಲ ಪ್ರದೇಶದ ಭೂಭಾಗಕ್ಕೆ ನಾಮಕರಣ ಮಾಡಿದ ಚೀನಾ: ಪಟ್ಟಿ ಬಿಡುಗಡೆ!

ಅರುಣಾಚಲ ಪ್ರದೇಶದ ಭೂಭಾಗಕ್ಕೆ ನಾಮಕರಣ ಮಾಡಿದ ಚೀನಾ: ಪಟ್ಟಿ ಬಿಡುಗಡೆ!

- Advertisement -
- Advertisement -

ಭಾರತದ ಭೂಭಾಗದ ಮೇಲೆ ಚೀನಾ ಹಕ್ಕು ಸಾಧಿಸುವುದನ್ನು ಮುಂದುವರಿಸಿದ್ದು,  ಅರುಣಾಚಲ ಪ್ರದೇಶದ ಭೂಭಾಗವನ್ನು ಒಳಗೊಂಡ 30 ಪ್ರದೇಶಗಳ ಚೀನಿ ಹೆಸರಿನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣವನ್ನು ಭಾರತ ತಿರಸ್ಕರಿಸುತ್ತಿದೆ. ರಾಜ್ಯವು ದೇಶದ ಅವಿಭಾಜ್ಯ ಅಂಗವಾಗಿದೆ ಎಂದು ಭಾರತ ಪ್ರತಿಪಾದಿಸಿದೆ.

ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಜಂಗ್ನಾನ್‌ನಲ್ಲಿ ಪ್ರಮಾಣೀಕೃತ ಭೌಗೋಳಿಕ ಹೆಸರುಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್‌ನ ಭಾಗವೆಂದು ಚೀನಾ ಹೇಳುತ್ತಿದೆ ಎಂದು ಸರ್ಕಾರಿ ಗ್ಲೋಬಲ್ ಟೈಮ್ಸ್ ಭಾನುವಾರ ವರದಿ ಮಾಡಿದೆ.

ಸಚಿವಾಲಯದ ಅಧಿಕೃತ ವೆಬ್‌ಸೈಟ್ ಈ ಪ್ರದೇಶಕ್ಕೆ 30 ಹೆಚ್ಚುವರಿ ಹೆಸರುಗಳನ್ನು  ನೀಡಿದೆ. ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಜಂಗ್ನಾನ್‌ನಲ್ಲಿನ ಆರು ಸ್ಥಳಗಳ ಪ್ರಮಾಣಿತ ಹೆಸರುಗಳ ಮೊದಲ ಪಟ್ಟಿಯನ್ನು 2017ರಲ್ಲಿ ಬಿಡುಗಡೆ ಮಾಡಿತ್ತು, ಇದಾದ ಬಳಿಕ 15 ಸ್ಥಳಗಳ ಎರಡನೇ ಪಟ್ಟಿಯನ್ನು 2021ರಲ್ಲಿ ಬಿಡುಗಡೆ ಮಾಡಿದೆ ಮತ್ತು ನಂತರ 2023ರಲ್ಲಿ 11 ಸ್ಥಳಗಳಿಗೆ ಹೆಸರುಗಳೊಂದಿಗೆ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರುಣಾಚಲ ಪ್ರದೇಶದಲ್ಲಿ 13,000 ಅಡಿ ಎತ್ತರದಲ್ಲಿ ನಿರ್ಮಿಸಲಾದ ಸೇಲಾ ಸುರಂಗದ ಉದ್ಘಾಟಣೆ, ಪ್ರಧಾನಿ ಭೇಟಿ ಬಳಿಕ ಚೀನಾ ಭಾರತದೊಂದಿಗೆ ರಾಜತಾಂತ್ರಿಕ ಪ್ರತಿಭಟನೆಯನ್ನು ಮುಂದುವರಿಸಿದೆ.

ಚೀನಾದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯಗಳು ಈ ಪ್ರದೇಶದ ಮೇಲೆ ಹಕ್ಕು ಪ್ರತಿಪಾದಿಸಿ ನೀಡುವ ಹೇಳಿಕೆಗಳು ಕೋಲಾಹಲಕ್ಕೆ ಕಾರಣವಾಗಿದೆ. ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದ (ಎನ್‌ಯುಎಸ್) ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್ (ಐಎಸ್‌ಎಎಸ್) ನಲ್ಲಿ ಉಪನ್ಯಾಸದ ವೇಳೆ ಮಾತನಾಡಿದ ಎಸ್.ಜೈಶಂಕರ್, ಇದು ಹೊಸ ವಿಚಾರವಲ್ಲ. ಅರುಣಾಚಲ ಪ್ರದೇಶದ ಮೇಲೆ ಪುನಾರಾವರ್ತಿತವಾಗಿ ಹಕ್ಕು ಪ್ರತಿಪಾದಿಸುತ್ತಿರುವ ಚೀನಾದ ನಡೆ ಹಾಸ್ಯಾಸ್ಪದ. ನಮ್ಮ ಗಡಿ ರಾಜ್ಯ ಅರುಣಾಚಲ ಪ್ರದೇಶ ನೈಸರ್ಗಿಕವಾಗಿಯೇ ಭಾರತದ ಅವಿಭಾಜ್ಯ ಅಂಗ. ಆದ್ದರಿಂದ, ನಾವು ಈ ಬಗ್ಗೆ ಬಹಳ ಸ್ಪಷ್ಟವಾಗಿ, ಸ್ಥಿರವಾಗಿರುತ್ತೇವೆ ಎಂದು ನಾನು ಭಾವಿಸುತ್ತೇನೆ ಮತ್ತು ಇದು ನಡೆಯುತ್ತಿರುವ ಗಡಿ ಚರ್ಚೆಗಳ ಭಾಗವಾಗಿದೆ ಎಂದು ನಿಮಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದ್ದರು.

ಅರುಣಾಚಲ ಪ್ರದೇಶವನ್ನು ಭಾರತದ ಭೂ ಭಾಗವಾಗಿ ಗುರುತಿಸುವ ಅಮೆರಿಕದ ಹೇಳಿಕೆಯ ಬಗ್ಗೆ ಬೀಜಿಂಗ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ಮಾರ್ಚ್ 9ರಂದು ಅರುಣಾಚಲ ಪ್ರದೇಶವನ್ನು ಯುಎಸ್ ಭಾರತದ ಭೂಪ್ರದೇಶವೆಂದು ಗುರುತಿಸುತ್ತದೆ. ಗಡಿ ನಿಯಂತ್ರಣ ರೇಖೆಯಾದ್ಯಂತ ಆಕ್ರಮಣ ಅಥವಾ ಮಿಲಿಟರಿಗಳ ಮೂಲಕ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಅಮೆರಿಕಾ ಹೇಳಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಚೀನಾದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯಗಳು, ಇದು ಚೀನಾ-ಭಾರತದ ಗಡಿ ಸಮಸ್ಯೆ, ಇದು ಉಭಯ ದೇಶಗಳ ನಡುವಿನ ವಿಷಯವಾಗಿದೆ ಮತ್ತು ಇದರಲ್ಲಿ ಅಮೆರಿಕ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಹೇಳಿದೆ.

ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ಯುವಕನಿಗೆ ಗುಂಪಿನಿಂದ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...