Homeಅಂತರಾಷ್ಟ್ರೀಯಬೀಜಿಂಗ್ ಒಲಿಂಪಿಕ್ಸ್‌ಗೆ ಅಮೆರಿಕ ರಾಜತಾಂತ್ರಿಕ ಬಹಿಷ್ಕಾರ: ‘ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ ಚೀನಾ!

ಬೀಜಿಂಗ್ ಒಲಿಂಪಿಕ್ಸ್‌ಗೆ ಅಮೆರಿಕ ರಾಜತಾಂತ್ರಿಕ ಬಹಿಷ್ಕಾರ: ‘ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ ಚೀನಾ!

- Advertisement -
- Advertisement -

ಚೀನಾದ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪ್ರತಿಭಟಿಸಿ ಮುಂಬರುವ ‘ಚಳಿಗಾಲದ ಬೀಜಿಂಗ್‌‌‌ ಒಲಿಂಪಿಕ್ಸ್‌’ ಅನ್ನು ರಾಜತಾಂತ್ರಿಕ ಬಹಿಷ್ಕಾರ ನಡೆಸಲಿದ್ದೇವೆ ಎಂದು ಅಮೆರಿಕಾ ಸೋಮವಾರ ದೃಢಪಡಿಸಿದೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಚೀನಾ ಒಲಿಂಪಿಕ್ಸ್‌ನ ರಾಜತಾಂತ್ರಿಕ ಬಹಿಷ್ಕಾರಕ್ಕೆ ಅಮೆರಿಕಾ ಬೆಲೆ ತೆರಬೇಕಾಗುತ್ತದೆ ಎಂದು ಮಂಗಳವಾರ ಎಚ್ಚರಿಸಿದೆ.

ಮುಂದಿನ ವರ್ಷ ಫೆಬ್ರವರಿಯಲ್ಲಿ ಪ್ರಾರಂಭವಾಗುವ ಗೇಮ್ಸ್‌ ಬಗ್ಗೆ ಯಾವ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಅಮೆರಿಕಾ ಹಲವು ತಿಂಗಳಿನಿಂದ ಜಗಳವಾಡುತ್ತಿದೆ. ಉಯಿಘರ್ ಅಲ್ಪಸಂಖ್ಯಾತರ ಮೇಲೆ ಚೀನಾ “ಜನಾಂಗೀಯ ಹತ್ಯೆ” ನಡೆಸುತ್ತಿದೆ ಎಂದು ಅಮೆರಿಕ ಇದೀಗ ರಾಜತಾಂತ್ರಿಕ ಬಹಿಷ್ಕಾರ ಕ್ರಮವನ್ನು ತೆಗೆದುಕೊಂಡಿದೆ.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಅಮೆರಿಕಾದ ಈ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಚೀನಾ, “ಅಮೆರಿಕಾ ತನ್ನ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ” ಎಂದು ಹೇಳಿದೆ. “ಇದಕ್ಕೆ ಕಾಯುತ್ತಿರಿ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸುಳ್ಳು ಮತ್ತು ವದಂತಿಗಳ ಆಧಾರದ ಮೇಲೆ ಸೈದ್ಧಾಂತಿಕ ಪೂರ್ವಾಗ್ರಹದಿಂದ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮಾಡುವ ಅಮೆರಿಕಾದ ಪ್ರಯತ್ನವು ಅದರ ಕೆಟ್ಟ ಉದ್ದೇಶಗಳನ್ನು ಮಾತ್ರ ಬಹಿರಂಗಪಡಿಸುತ್ತದೆ” ಎಂದು ಝಾವೊ ಹೇಳಿದ್ದಾರೆ.

“ಚಳಿಗಾಲದ ಒಲಿಂಪಿಕ್ಸ್ ಎಂದರೆ ರಾಜಕೀಯ ಪ್ರದರ್ಶನಗಳು ಮತ್ತು ರಾಜಕೀಯ ಕುಶಲತೆಯ ವೇದಿಕೆಯಲ್ಲ. ಅಮೆರಿಕಾವು ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮತ್ತು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ಆದರೆ ಅಮೆರಿಕಾದ ನಿರ್ಧಾರವನ್ನು ಅಮೆರಿಕಾದ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ರಾಜಕಾರಣಿಗಳು ವ್ಯಾಪಕವಾಗಿ ಸ್ವಾಗತಿಸಿದ್ದಾರೆ.

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ, “ಚೀನಾದ ಶಿನ್‌ಜಿಯಾಂಗ್‌ನಲ್ಲಿ ನಡೆಯುತ್ತಿರುವ ನರಮೇಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಇತರ ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಪರಿಗಣಿಸಿ ಆಡಳಿತವು ಯಾವುದೇ ರಾಜತಾಂತ್ರಿಕ ಅಥವಾ ಅಧಿಕೃತ ಪ್ರಾತಿನಿಧ್ಯವನ್ನು ಗೇಮ್ಸ್‌ಗೆ ಕಳುಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ(IOC)ಯು ಇದನ್ನು, “ಇದು ಸಂಪೂರ್ಣವಾಗಿ ಎರಡೂ ಸರ್ಕಾರಗಳ ರಾಜಕೀಯ ನಿರ್ಧಾರ. IOC ತನ್ನ ರಾಜಕೀಯ ತಟಸ್ಥತೆಯಲ್ಲಿ ಸಂಪೂರ್ಣವಾಗಿ ಗೌರವಿಸುತ್ತದೆ. ಒಲಂಪಿಕ್ ಕ್ರೀಡಾಕೂಟಗಳು ಮತ್ತು ಕ್ರೀಡಾಪಟುಗಳ ಭಾಗವಹಿಸುವಿಕೆಯು ರಾಜಕೀಯವನ್ನು ಮೀರಿದೆ ಎಂದು ಸ್ಪಷ್ಟಪಡಿಸುತ್ತದೆ ಮತ್ತು ನಾವು ಇದನ್ನು ಸ್ವಾಗತಿಸುತ್ತೇವೆ” ಎಂದು ತಿಳಿದೆ.

ಇದನ್ನೂ ಓದಿ:‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೂಜಾರಿ ಇಲ್ಲದೆ ಸೂರ್ಯ ಉದಯಿಸೋದಿಲ್ಲಾ ಅನ್ನೋ ಮೂರ್ಖತನ ಚೀನಾದ್ದು ,ಚೀನಾ ಇಲ್ಲದೆ ಅಮೇರಿಕಾ ಆರ್ಥಿಕ ವ್ಯವಹಾರವನ್ನು ಮಾಡಬಹುದು ,ಆದರೆ ಚೀನಾದ ನಕಲಿ ತಂತ್ರಜ್ಞಾನದ ಪರವಾಗಿ ಯಾರು ಚೀನಾ ನ ನಂಬಲ್ಲಾ ,ಅಮೇರಿಕ ಹಸ್ತಕ್ಷೇಪ ಇಲ್ಲದೆ ಚೈನಾ ಇಂಗು ತಿಂದ ಮಂಗನಂತೆ ಆಗೋದು ಕಂಡಿತ.

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...