Homeಮುಖಪುಟಭಾರತದ 15 ಸ್ಥಳಗಳಿಗೆ ಚೀನಾ ಮರುನಾಮಕರಣ; ಮೋದಿ ಮೌನ: ಖರ್ಗೆ

ಭಾರತದ 15 ಸ್ಥಳಗಳಿಗೆ ಚೀನಾ ಮರುನಾಮಕರಣ; ಮೋದಿ ಮೌನ: ಖರ್ಗೆ

- Advertisement -
- Advertisement -

ಅರುಣಾಚಲ ಪ್ರದೇಶದ 15 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ. ನಮ್ಮ ಪ್ರದೇಶದಲ್ಲಿ ಚೀನಾ ಎರಡು ಗ್ರಾಮಗಳನ್ನು ನಿರ್ಮಿಸಿದೆ ಎಂದು ಉಪಗ್ರಹ ಚಿತ್ರಗಳು ಇತ್ತೀಚೆಗೆ ಬಯಲು ಮಾಡಿವೆ ಎಂದು ಖರ್ಗೆ ಟ್ವೀಟ್‌ ಮಾಡಿದ್ದು, ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಬೀಜಿಂಗ್ ಜನತಾ ಪಕ್ಷದ (ಬಿಜೆಪಿ) ನಾಯಕರು ಚೀನಾದ ಹೆಸರು ಹೇಳಲೂ ಹಿಂಜರಿಯುತ್ತಾರೆ! ಚೀನಾ ಮಾಡಿರುವ ಭೂ ಕಬಳಿಕೆಯ ವಿಚಾರವನ್ನು ನಿರಾಕರಿಸುವ, ಆ ವಿಚಾರವನ್ನು ಚರ್ಚೆಯಿಂದ ದೂರ ಉಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

‘ದಕ್ಷಿಣ ಟಿಬೆಟ್’ ಎಂದು ಕರೆಯಲ್ಪಡುವ ಅರುಣಾಚಲ ಪ್ರದೇಶ ರಾಜ್ಯದಲ್ಲಿ ಇರುವ ವಸತಿ ಪ್ರದೇಶಗಳು, ಪರ್ವತಗಳು, ನದಿಗಳು ಮತ್ತು ಮೌಂಟೇನ್ ಪಾಸ್ ಸೇರಿದಂತೆ 15 ಸ್ಥಳಗಳಿಗೆ ಚೀನಾ ಗುರುವಾರ ‘ಮರುನಾಮಕರಣ’ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

‘ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಭೂ ಗಡಿ ಕಾನೂನು’ ಜನವರಿ 1ರಿಂದ ಜಾರಿಗೆ ಬರಲಿದ್ದು, ಇದಕ್ಕೆ ಮುಂಚಿತವಾಗಿ ಈ ಬೆಳವಣಿಗೆ ಆಗಿರುವುದು ಆತಂಕ ತಂದಿದೆ. ಗಡಿ ನಿಯಂತ್ರಣವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಕಾನೂನು ಇದಾಗಿದ್ದು, ಚೀನಾದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ದೇಶಗಳಿಗೆ ಈ ಕಾನೂನು ನೇರವಾಗಿ ಸಂಬಂಧಿಸಿದೆ ಎಂದು ವರದಿಗಳಾಗಿವೆ.

ಭಾರತದ ಪ್ರದೇಶದೊಳಗೆ ಚೀನಾ ಅತಿಕ್ರಮಣ ಮಾಡುತ್ತಿರುವುದನ್ನು ಕಾಂಗ್ರೆಸ್ ನಾಯಕರು ಮೊದಲಿನಿಂದಲೂ ಪ್ರಶ್ನಿಸುತ್ತಲೇ ಬಂದಿದ್ದಾರೆ. ನವೆಂಬರ್‌ನಲ್ಲಿ ರಾಹುಲ್ ಗಾಂಧಿಯವರು ಈ ಕುರಿತು ಪ್ರಶ್ನಿಸಿದ್ದರು. “ಒಕ್ಕೂಟ ಸರ್ಕಾರವು ಚೀನಾದ ವಿರುದ್ದ ಯಾವುದೇ ತಂತ್ರವನ್ನು ಹೊಂದಿಲ್ಲದಿರುವುದರಿಂದ, ಭಾರತದ ರಾಷ್ಟ್ರೀಯ ಭದ್ರತೆಯು ‘ಕ್ಷಮಿಸಲಾಗದಷ್ಟು ರಾಜಿಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದರು.

‘56 ಇಂಚಿನ ಎದೆ’ ಎಂಬ ಉಲ್ಲೇಖದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ಮಿಸ್ಟರ್‌ 56 ಹೆದರುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದ್ದರು. ಸರ್ಕಾರ ಸುಳ್ಳುಗಳನ್ನೇ ಹೇಳುತ್ತಿರುವಾಗ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರ ಪರವಾಗಿ ತಾನು ನಿಲ್ಲುತ್ತೇನೆ ಎಂದು ಅವರು ತಿಳಿಸಿದ್ದರು.

ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರು ಚೀನಾ ಗಡಿ ಸಮಸ್ಯೆಯ ಬಗ್ಗೆ ವಿಭಿನ್ನ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ್ದರು.

ಭಾರತದ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ದೇಶವು ನೂರು ಮನೆಗಳುಳ್ಳ ಗ್ರಾಮ ನಿರ್ಮಾಣ ಮಾಡಿರುವುದನ್ನು ಮತ್ತು ಲೈನ್ ಆಫ್ ಕಂಟ್ರೋಲ್‌ನಲ್ಲಿ ಉದ್ವಿಗ್ವ ಸ್ಥಿತಿ ಇರುವುದನ್ನು ಅಮೆರಿಕ ರಕ್ಷಣಾ ವಿಭಾಗದ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿತ್ತು.

ವರದಿಯ ‘ಚೀನಾ-ಭಾರತ ಗಡಿ ಬಿಕ್ಕಟ್ಟು’ ಎಂಬ ಅಧ್ಯಾಯದಲ್ಲಿ 2020ರಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವು 100 ಮನೆಗಳ ಒಂದು ಹಳ್ಳಿಯನ್ನು ಸ್ವಾಯುತ್ತ ಟಿಬೇಟ್ ಮತ್ತು ಭಾರತದ ಅರುಣಾಚಲ ಪ್ರದೇಶದ ಲೈನ್ ಆಫ್ ಕಂಟ್ರೋಲ್‌ನ ವಿವಾದಿತ ಜಾಗದಲ್ಲಿ ನಿರ್ಮಿಸಿದೆ ಎಂದು ಬರೆಯಲಾಗಿತ್ತು. ವರದಿಯನ್ನು ಯುಎಸ್ ಕಾಂಗ್ರೆಸ್‌ಗೆ ಸಲ್ಲಿಸಲಾಗಿತ್ತು.

ಚೀನಾದ ಈ ನಡೆ ಮತ್ತು ಆ ಜಾಗದಲ್ಲಿ ಹಲವು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿರುವುದು ಭಾರತೀಯ ಸರ್ಕಾರ ಮತ್ತು ಮಾಧ್ಯಮಗಳನ್ನು ದಿಗ್ಭ್ರಮೆಗೆ ದೂಡಿದೆ ಎಂದು ವರದಿ ಹೇಳಿತ್ತು. ಈ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಸೈನ್ಯದ ತುಕಡಿಯನ್ನು ದಶಕಕ್ಕೂ ಮೊದಲೇ ಚೀನಾ ದೇಶವು ನಿಯೋಜಿಸಿತ್ತು. ಆದರೆ 2020 ರಲ್ಲಿ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಭಾರತಕ್ಕೆ ಸೇರಿದ ಪ್ರದೇಶದೊಳಗೆ ಚೀನಾವು ರಸ್ತೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಾಮವನ್ನೇ ನಿರ್ಮಾಣ ಮಾಡಿತ್ತು ಎನ್ನಲಾಗಿದೆ.


ಇದನ್ನೂ ಓದಿರಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...