Homeಕರ್ನಾಟಕಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಸ್ವ ಹಿತಾಸಕ್ತಿಯ ಸಿದ್ಧಾಂತಗಳನ್ನು ಹೇಳಬಾರದೆನ್ನುವ ಚಕ್ರತೀರ್ಥ ಸಮಿತಿ, ತನ್ನದೇ ಚೌಕಟ್ಟನ್ನು ಮೀರಿರುವುದು ನಿಚ್ಚಳವಾಗಿ ಕಾಣುತ್ತಿದೆ.

- Advertisement -
- Advertisement -

ಭಾರತ ಸ್ವಾತಂತ್ರ್ಯ ಪಡೆದು ತನ್ನದೇ ಸಂವಿಧಾನವನ್ನು ರಚಿಸಿಕೊಂಡು ಏಳು ದಶಕಗಳಾಯಿತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸಿದ ಆರ್‌ಎಸ್‌ಎಸ್‌, `ಅಖಂಡ ಭಾರತ’ದ ಕುರಿತು ಆಗಾಗ್ಗೆ ಮಾತನಾಡುತ್ತದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕೂಡ ಕಳೆದ ವರ್ಷ ‘ಅಖಂಡ ಭಾರತ’ದ ಕುರಿತು ಪ್ರಸ್ತಾಪಿಸಿದ್ದರು. ಈ ಪರಿಕಲ್ಪನೆ ಈಗ ಪಠ್ಯಪುಸ್ತಕದಲ್ಲೂ ಕಾಣಿಸಿಕೊಂಡಿದೆ. ಪಠ್ಯಪುಸ್ತಕದಿಂದ ಸಿದ್ಧಾಂತಗಳನ್ನು ತೆಗೆದುಹಾಕಲಾಗಿದೆ ಎನ್ನುವ ಪಠ್ಯಪರಿಶೀಲನಾ ಸಮಿತಿ ತನ್ನದೇ ಮಾತನ್ನು ಉಲ್ಲಂಘಿಸಿದಂತೆ ಕಾಣುತ್ತಿದೆ. ಆರ್‌ಎಸ್‌ಎಸ್‌ ಪ್ರತಿಪಾದಿಸುವ ‘ಅಖಂಡ ಭಾರತ’ ಪರಿಕಲ್ಪನೆಯು ಹೊಸ ಪಠ್ಯದಲ್ಲಿ ತುರುಕಲ್ಪಟ್ಟಿದೆ.

ಎಂಟನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರ ಪರಿಷ್ಕೃತ ಪಠ್ಯದಲ್ಲಿ ‘ಭರತವರ್ಷ’ ಎಂಬ ಶೀರ್ಷಿಕೆಯಲ್ಲಿ ಪಾಠವನ್ನು ಇಡಲಾಗಿದೆ. ಚೀನಾ ದೇಶವನ್ನೂ ಅಖಂಡ ಭಾರತ ಪರಿಕಲ್ಪನೆಯೊಳಗೆ ಎಳೆದುಕೊಳ್ಳಲಾಗಿದೆ.

‘ಭರತವರ್ಷ’ ಪಾಠದಲ್ಲಿ ಏನಿದೆ?

“ಜಗತ್ತಿನ ಪ್ರತಿಯೊಂದು ರಾಷ್ಟ್ರ ಹಾಗೂ ಜನಸಮುದಾಯಗಳ ಮೇಲೆ ಭೌಗೋಳಿಕ ಪರಿಸರವು ಪ್ರಭಾವ ಬೀರಿವೆ. ಮಾನವನ ಜೀವನಕ್ಕೂ ಅವನ ಪರಿಸರಕ್ಕೂ ನಿಕಟ ಸಂಬಂಧವಿದೆ. ಆದ್ದರಿಂದ ಮನುಷ್ಯನ ಚರಿತ್ರೆ ತಿಳಿಯಲು ಭೌಗೋಳಿಕ ಪರಿಸರದ ಅರಿವು ಅತ್ಯವಶ್ಯಕವಾಗಿದೆ. ಏಷ್ಯಾ ಖಂಡದ ದಕ್ಷಿಣ ಭಾಗದಲ್ಲಿ ವಿಶಾಲ ಪ್ರದೇಶವನ್ನು ಹೊಂದಿರುವ ಭಾರತವು ಒಂದು ಉಪಖಂಡ. ಮೂರು ಕಡೆ ನೀರಿನಿಂದಲೂ ಮತ್ತು ಒಂದು ಕಡೆ ಭೂಭಾಗದಿಂದಲೂ ಆವೃತ್ತವಾಗಿರುವುದರಿಂದ ಇದೊಂದು ಪರ್ಯಾಯ ದ್ವೀಪವಾಗಿದೆ. ಭಾರತ ಇಂದು ಪಾಕಿಸ್ತಾನ, ಅಫಘಾನಿಸ್ಥಾನ, ಚೀನಾ, ನೇಪಾಳ, ಭೂತಾನ್‌, ಬಾಂಗ್ಲಾ ಮತ್ತು ಮಯನ್ಮಾರ್‌ಗಳೊಂದಿಗೆ ತನ್ನ ಭೂಗಡಿಯನ್ನು ಹೊಂದಿದೆ. ಈ ಎಲ್ಲ ಪ್ರದೇಶಗಳು ಒಟ್ಟಾಗಿ ಭರತವರ್ಷ ಎಂದು ಕರೆಯಲ್ಪಟ್ಟಿತ್ತು. ಇದನ್ನು ಭರತ ಖಂಡ, ಸಿಂಧೂ ದ್ವೀಪ, ಬೃಹತ ಭಾರತ, ಅಖಂಡ ಭಾರತ ಎಂದೂ ಕರೆಯಲಾಗುತ್ತಿತ್ತು. 28 ರಾಜ್ಯಗಳು ಹಾಗೂ 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂದು ರಾಷ್ಟ್ರ ರಾಜಧಾನಿ (ದೆಹಲಿ) ಪ್ರದೇಶ ಇದರ ವ್ಯಾಪ್ತಿಯಲ್ಲಿವೆ.

– ಹೀಗೆ ಆರಂಭವಾಗುತ್ತದೆ ಪಾಠ.

ಅಖಂಡ ಭಾರತ ಪರಿಕಲ್ಪನೆ

‘ವಿಶ್ವದ ಕಲ್ಯಾಣಕ್ಕಾಗಿ ಅದ್ಭುತವಾದ ಅಖಂಡ ಭಾರತವನ್ನು ಮತ್ತೊಮ್ಮೆ ಒಗ್ಗೂಡಿಸುವ ಅಗತ್ಯವಿದೆ. ಇದಕ್ಕಾಗಿ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಅವಶ್ಯಕತೆ ಇದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳೆದ ವರ್ಷ ಹೇಳಿದ್ದರು.

‘ಅಖಂಡ ಭಾರತ’ದ ಒಗ್ಗೂಡುವಿಕೆಯು ಬಲ ಪ್ರಯೋಗದಿಂದ ಆಗುವುದಿಲ್ಲ, ಆದರೆ, ಅದು ಮಾನವೀಯತೆ ಸಾರುವ ಹಿಂದೂಧರ್ಮದಿಂದ ಮಾತ್ರ ಸಾಧ್ಯವಾಗಲಿದೆ. ದೇಶದಿಂದ ವಿಭಜನೆಗೊಂಡು ದೀರ್ಘ ಸಮಯದಿಂದ ಹೊರಗುಳಿದಿರುವ ಪಾಕಿಸ್ತಾನದಂತಹ ದೇಶಗಳು ಇಂದು ಸಂಕಷ್ಟದಲ್ಲಿವೆ. ಈ ಎಲ್ಲ ದೇಶಗಳಿಗೂ ಇನ್ನು ಮುಂದೆ ಅಖಂಡ ಭಾರತದ ಅಗತ್ಯ ಹೆಚ್ಚಿರಲಿದೆ’ ಎಂದು ಪ್ರತಿಪಾದಿಸಿದ್ದರು.

ಅಖಂಡ ಭಾರತ ಎಂದು ಗೂಗಲ್ ಮಾಡಿದರೆ, “ಕೇಸರಿ ವರ್ಣ”ದ ಭೂಪಟಗಳು ತೆರೆದುಕೊಳ್ಳುತ್ತವೆ. ಬ್ರಿಟಿಷರಿಗೆ ಸರಣಿ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದ ವಿ.ಡಿ.ಸಾವರ್ಕರ್‌ ಅವರೂ ಅಖಂಡ ಭಾರತ ಪರಿಕಲ್ಪನೆಯನ್ನು ಪ್ರತಿಪಾದಿಸಿದ ವಿವರಗಳಿವೆ.

ತನ್ನದೇ ಚೌಕಟ್ಟು ಮೀರಿದ ಸಮಿತಿ 

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆಯಲ್ಲಿ ಕೆಲವು ಚೌಕಟ್ಟುಗಳನ್ನು ಹಾಕಿಕೊಂಡಿರುವುದಾಗಿ ಬರೆದುಕೊಂಡಿದೆ. 1. ಯಾವುದೇ ಜಾತಿ, ಧರ್ಮ, ಪಂಥ ಸಮುದಾಯಗಳಿಗೆ ಅಥವಾ ವ್ಯಕ್ತಿಗಳಿಗೆ ಅಪಮಾನವಾಗುವ ಆಕ್ಷೇಪಾರ್ಹ ಅಂಶಗಳಿರದಂತೆ ಎಚ್ಚರ ವಹಿಸಬೇಕು. 2. ವಿಷಯಗಳನ್ನು ಕ್ರಮಬದ್ಧವಾಗಿ, ಕಾಲಪಟ್ಟಿಗನುಗುಣವಾಗಿ ಕೊಡಬೇಕು. 3. ಅನಗತ್ಯ ವಿಷಯಗಳು ತುಂಬಿತುಳುಕಾಡುವ ಮಾಹಿತಿಕೋಶವಾಗಿಸದೆ ಜ್ಞಾನಕೋಶಗಳಾಗಿ ಮಾಡಬೇಕು. 4. ಸ್ವ ಹಿತಾಸಕ್ತಿಯ ಯಾವ ಸಿದ್ಧಾಂತಗಳಿಗೂ ಜಾಗ ಕೊಡಕೂಡದು. 5. ಅರ್ಧಸತ್ಯ, ಅಸತ್ಯ, ಉತ್ಪ್ರೇಕ್ಷೆ, ನಿರ್ಣಯ ಮುಂತಾದವನ್ನು ಕೈಬಿಟ್ಟು ಅಧಿಕೃತ ಆಧಾರಗಳಿರುವ ಸಂಗತಿಗಳನ್ನಷ್ಟೇ ಮುಂದಿಡಬೇಕು. 6. ಎಲ್ಲ ವಿಷಯಗಳಿಗೆ ತಕ್ಕ ಪ್ರಾತಿನಿಧ್ಯ ಕೊಡಬೇಕು. 7. ಐತಿಹಾಸಿಕ ಉಪೇಕ್ಷಿತ ಸಂಗತಿಗಳನ್ನು, ಅವುಗಳ ಪ್ರಾಮುಖ್ಯಕ್ಕನುಗುಣವಾಗಿ ಪಠ್ಯಗಳಲ್ಲಿ ತರಬೇಕು. 8. ಎಲ್ಲ ಬಗೆಯ ತಪ್ಪುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಗ್ಗಿಸಬೇಕು. – ಹೀಗೆ ಚೌಕಟ್ಟುಗಳನ್ನು ಸಮಿತಿ ಹಾಕಿಕೊಂಡಿದೆ. ಆದರೆ ಎಂಟನೇ ತರಗತಿಯ ಇತಿಹಾಸ ಪಠ್ಯವನ್ನು ನೋಡುತ್ತಾ ಹೋದರೆ ವೈದಿಕತೆಯ ವೈಭವೀಕರಣ ಎದ್ದು ಕಾಣುತ್ತದೆ. (ಎಂಟನೇ ತರಗತಿಯಲ್ಲಿ ಮಾಡಲಾಗಿರುವ ಬದಲಾವಣೆಗಳ ಕುರಿತು ಸರಣಿ ಲೇಖನ ಬರಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...