HomeಮುಖಪುಟG20 ಶೃಂಗಸಭೆ; 'ಹೆಸರು' ಬದಲಿಸುವ ಬದಲು, ಭಾರತ ಅಂತರಾಷ್ಟ್ರೀಯ ಪ್ರಭಾವ ಹೆಚ್ಚಿಸಲು ಅವಕಾಶವಾಗಿ ಬಳಸಬೇಕು: ಚೀನಾ...

G20 ಶೃಂಗಸಭೆ; ‘ಹೆಸರು’ ಬದಲಿಸುವ ಬದಲು, ಭಾರತ ಅಂತರಾಷ್ಟ್ರೀಯ ಪ್ರಭಾವ ಹೆಚ್ಚಿಸಲು ಅವಕಾಶವಾಗಿ ಬಳಸಬೇಕು: ಚೀನಾ  

- Advertisement -
- Advertisement -

G20 ಶೃಂಗಸಭೆಯನ್ನು ಭಾರತವು  ಅಂತರಾಷ್ಟ್ರೀಯ ಪ್ರಭಾವವನ್ನು ಹೆಚ್ಚಿಸಲು ಒಂದು ಅವಕಾಶವಾಗಿ ಬಳಸಬೇಕು ಎಂದು ಚೀನಾ ಹೇಳಿದೆ. ಇಂಡಿಯಾ-ಭಾರತ್‌ ಮರು ನಾಮಕರಣ ಚರ್ಚೆ ಮಧ್ಯೆ ನಡೆಯುತ್ತಿರುವ  G20 ಶೃಂಗಸಭೆ ಬಗ್ಗೆ ಈ ರೀತಿ ಚೀನಾ ಪ್ರತಿಕ್ರಿಯಿಸಿದೆ.

ಚೀನಾ, ತನ್ನ ಮುಖವಾಣಿ ಗ್ಲೋಬಲ್ ಟೈಮ್ಸ್ ಮೂಲಕ, ಹೆಸರು ಬದಲಾವಣೆಗಿಂತ ಭಾರತವು ತನ್ನ ಆರ್ಥಿಕ ವ್ಯವಸ್ಥೆಯನ್ನು ಸಮಗ್ರವಾಗಿ ಸುಧಾರಿಸಬಹುದೇ ಎಂಬುವುದು ಮುಖ್ಯವಾದುದು ಎಂದು ಚೀನಾ ಹೇಳಿದೆ.

ಕ್ರಾಂತಿಕಾರಿ ಸುಧಾರಣೆ ಇಲ್ಲದೆ ಭಾರತ ಕ್ರಾಂತಿಕಾರಿಯಾಗಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಭಾರತವು ಹೆಚ್ಚುತ್ತಿರುವ ಜಾಗತಿಕ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಬಹುದು ಮತ್ತು ಇದನ್ನು ಬೆಳವಣಿಗೆಗೆ ಪ್ರೇರಕ ಶಕ್ತಿಯಾಗಿ ಪರಿವರ್ತಿಸಬಹುದು ಎಂದು ಚೀನಾ ಹೇಳಿದೆ.

ಜಿ20 ಶೃಂಗಸಭೆಯ ಔತಣಕೂಟಕ್ಕೆ ಸಂಬಂಧಿಸಿ  ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲಿಗೆ ಪ್ರೆಸಿಡೆಂಟ್ ಆಫ್‌ ಭಾರತ್‌ ಎಂದು ಬರೆಯಲಾಗಿತ್ತು. ಇದು ದೇಶದ ಹೆಸರು ಬದಲಾವಣೆ ಮಾಡಲಾಗುತ್ತದೆ ಎಂಬ ಚರ್ಚೆಯನ್ನು ದೇಶದಲ್ಲಿ ಹುಟ್ಟು ಹಾಕಿತ್ತು.

ಇದರ ಬೆನ್ನಲ್ಲೇ ಮುಂಬರುವ G20 ಶೃಂಗಸಭೆಯ ಮೇಲೆ ಜಗತ್ತಿನ ಗಮನ ಕೇಂದ್ರೀಕೃತವಾಗಿರುವ ಸಮಯದಲ್ಲಿ  ದೆಹಲಿಯು ಜಗತ್ತಿಗೆ ಏನನ್ನು ಹೇಳಲು ಬಯಸುತ್ತದೆ? ಎಂದು ಚೀನಾ ಕೇಳಿದೆ.

ಇದಲ್ಲದೆ, ಇತ್ತೀಚೆಗೆ ಕೆಲವು ಚೀನೀ ಕಂಪನಿಗಳ ಮೇಲೆ  ಭಾರತ ನಿರ್ಬಂಧ ವಿಧಿಸಿರವ ಬಗ್ಗೆ ಪ್ರತಿಕ್ರಿಯಿಸಿದ ಚೀನಾ, ಭಾರತವು ತನ್ನ ಮಾರುಕಟ್ಟೆಯನ್ನು ಜಗತ್ತಿಗೆ ಸಂಪೂರ್ಣವಾಗಿ ತೆರೆಯುವಲ್ಲಿ ಹಿಂಜರಿಯುತ್ತಿದೆ. ಆದರೆ 1947ರ ನಂತರದ ಇತಿಹಾಸವು ಭಾರತವು ಪ್ರತಿ ಬಾರಿ ಸುಧಾರಣೆ ಮತ್ತು ಆರ್ಥಿಕ ಉದಾರೀಕರಣವನ್ನು ಉತ್ತೇಜಿಸುತ್ತದೆ ಎಂದು ಹೇಳುತ್ತದೆ. ಆರ್ಥಿಕ ಬೆಳವಣಿಗೆಗೆ ಬಲವಾದ ಪ್ರಚೋದನೆಯನ್ನು ನಿಡುತ್ತಿದೆ ಎಂದು ಹೇಳಿದೆ.

ಭಾರತವು ತನ್ನ ಆರ್ಥಿಕತೆಯನ್ನು ಸುಧಾರಿಸಲು, ವಿದೇಶಿ ಹೂಡಿಕೆಯನ್ನು ಆಕರ್ಷಿಸಲು ಮತ್ತು ವಿದೇಶಿ ಹೂಡಿಕೆದಾರರಿಗೆ ನ್ಯಾಯಯುತ ವ್ಯಾಪಾರ ವಾತಾವರಣವನ್ನು ಒದಗಿಸಲು G20 ಅಧ್ಯಕ್ಷ ಸ್ಥಾನವನ್ನು ಬಳಸಿಕೊಳ್ಳಬೇಕು  ಮತ್ತು ಕ್ರಮೇಣ ಈ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಚೀನಾ ಹೇಳಿದೆ.

ಇದನ್ನು ಓದಿ: ಕೇಂದ್ರದ ಬಿಜೆಪಿ ಸರಕಾರ ಬಡವರ ವಿರೋಧಿ, ಅವರಿಗೆ ಮಾನವೀಯತೆ ಇಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...